ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿರುವ ಕೇಂದ್ರ ಸರ್ಕಾರ

ಮುಂದಿನ ಎರಡು ವರ್ಷಗಳಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯು ರಸ್ತೆ ನಿರ್ಮಾಣಕ್ಕಾಗಿ 15 ಲಕ್ಷ ಕೋಟಿ ರೂಗಳನ್ನು ಹೂಡಿಕೆ ಮಾಡಲಿದೆ ಎಂದು ಸಚಿವ ನಿತಿನ್ ಗಡ್ಕರಿರವರು ಹೇಳಿದ್ದಾರೆ. ಆಟೋ ಸ್ಕ್ರ್ಯಾಪಿಂಗ್ ನೀತಿಯನ್ನು ಸಹ ಅಂತಿಮಗೊಳಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿರುವ ಕೇಂದ್ರ ಸರ್ಕಾರ

ನಿತಿನ್ ಗಡ್ಕರಿರವರು ಭಾರತೀಯ ವಾಹನ ತಯಾರಕರ ಸಂಘದ ಸದಸ್ಯರೊಂದಿಗೆ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಪರಿಣಾಮಗಳ ಕುರಿತು ಮಾತನಾಡುತ್ತಿದ್ದರು. ದೇಶದ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ಈ ಕೆಟ್ಟ ಪರಿಸ್ಥಿತಿಯನ್ನು ಎದುರಿಸುವ ಯೋಜನೆಯನ್ನು ರೂಪಿಸಬೇಕಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಪೈಪೋಟಿ ನೀಡಲು ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಮುಂದಿನ ಎರಡು ವರ್ಷಗಳಲ್ಲಿ ರಸ್ತೆ ನಿರ್ಮಾಣಕ್ಕಾಗಿ 15 ಲಕ್ಷ ಕೋಟಿ ರೂಗಳನ್ನು ಹೂಡಿಕೆ ಮಾಡಲಾಗುವುದು ಎಂದು ಅವರು ಹೇಳಿದರು.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿರುವ ಕೇಂದ್ರ ಸರ್ಕಾರ

ಆಟೋ ಸ್ಕ್ರ್ಯಾಪಿಂಗ್ ನೀತಿಯನ್ನು ತ್ವರಿತವಾಗಿ ಅಂತಿಮಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಅವರು ವಾಹನ ಉತ್ಪಾದನಾ ವಲಯವನ್ನು ಆರ್ಥಿಕ ಹಿಂಜರಿತದಿಂದ ಹೊರತರಲು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಂತೆ ಸಲಹೆ ನೀಡಿದರು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿರುವ ಕೇಂದ್ರ ಸರ್ಕಾರ

ಬಿಎಸ್-4 ವಾಹನಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು ಸುಪ್ರೀಂಕೋರ್ಟ್ ತೀರ್ಪಿಗೆ ಸರ್ಕಾರವು ಬದ್ಧವಾಗಿದೆ ಎಂದು ಹೇಳಿದರು. ನಿಯಮಗಳಿಗೆ ಅನುಗುಣವಾಗಿ ಬಿಎಸ್ -4 ವಾಹನಗಳ ಮಾರಾಟಕ್ಕೆ ಸಮಯ ವಿಸ್ತರಣೆ ಸೇರಿ ಇತರ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದರು.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಕಾರಣಕ್ಕೆ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆಯನ್ನು ಶೀಘ್ರವೇ ಪುನರಾರಂಭಿಸುವುದಾಗಿ ನಿತಿನ್ ಗಡ್ಕರಿರವರು ಭರವಸೆ ನೀಡಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದ ಈ ಸಂಕಷ್ಟದ ದಿನಗಳಲ್ಲಿ ಆರ್ಥಿಕ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ಶ್ರಮಿಸುತ್ತಿರುವ ಪ್ರಧಾನಿ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿರುವ ಕೇಂದ್ರ ಸರ್ಕಾರ

ಕರೋನಾ ವೈರಸ್‌ನಿಂದ ಉಂಟಾಗಿರುವ ಬಿಕ್ಕಟ್ಟನ್ನು ಜಾಗತಿಕ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಮೆರೆಯುವ ಅವಕಾಶವನ್ನಾಗಿ ಬಳಸಿಕೊಳ್ಳುವಂತೆ ಹೂಡಿಕೆದಾರರು ಹಾಗೂ ಉದ್ಯಮಗಳಿಗೆ ಸಚಿವರು ಕರೆ ನೀಡಿದರು. ಕರೋನಾ ವೈರಸ್ ಕಾರಣಕ್ಕೆ ಆರ್ಥಿಕತೆಯ ಮೇಲೆ ಬಿಕ್ಕಟ್ಟು ಉಂಟಾಗಿದೆ ಎಂದು ಅವರು ಹೇಳಿದರು.

ರಸ್ತೆ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಲಿರುವ ಕೇಂದ್ರ ಸರ್ಕಾರ

ಈ ಬಿಕ್ಕಟ್ಟನ್ನು ನಾವು ಆಶೀರ್ವಾದವನ್ನಾಗಿ ಪರಿವರ್ತಿಸಿಕೊಳ್ಳಬೇಕು. ಭಾರತದಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮವು ವಿದೇಶಿ ಕಂಪನಿಗಳನ್ನು ಆಹ್ವಾನಿಸಬೇಕು ಎಂದು ಅವರು ಹೇಳಿದರು. ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತವು ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Most Read Articles

Kannada
English summary
Central Government to invest 15 lakh crore in road construction says Nitin Gadkari. Read in Kannada.
Story first published: Sunday, May 10, 2020, 15:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X