ಪೆಟ್ರೋಲ್ ಬಂಕ್‌ಗಳಲ್ಲೇ 69 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲಿದೆ ಕೇಂದ್ರ ಸರ್ಕಾರ
ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡುತ್ತಿದೆ.

ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರೆತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್‌ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಸ್ವಂತ ಬಳಕೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.

ಇದಕ್ಕಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಮುಂದಿನ ಕೆಲವೇ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್‌ಗಳು ಸೇರಿದಂತೆ ಖಾಸಗಿ ಕಂಪನಿಗಳ ಪೆಟ್ರೋಲ್ ಬಂಕ್‌ಗಳನ್ನು ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲು ನಿರ್ಧರಿಸಿದೆ.

ಖಾಸಗಿ ಕಂಪನಿಗಳ ಅಧೀನದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲೂ ಕಡ್ಡಾಯವಾಗಿ 1 ಚಾರ್ಜಿಂಗ್ ಪಾಯಿಂಟ್ ತೆರೆಯುವಂತೆ ವಿವಿಧ ಪೆಟ್ರೋಲ್ ಪೂರೈಕೆ ಕಂಪನಿಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರದ ಇಂಧನ ಸಚಿವಾಲಯವು ಮುಂದಿನ ಒಂದು ವರ್ಷದಲ್ಲಿ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದೆ.

ಇದು ಇವಿ ವಾಹನಗಳ ಮೂಲಕ ದೀರ್ಘಾವಧಿಯ ಪ್ರಯಾಣಕ್ಕೆ ಅನುಕೂರಲಕವಾಗಲಿದ್ದು, ಮಾರ್ಗಮಧ್ಯದಲ್ಲೇ ಚಾರ್ಜಿಂಗ್ ಸಮಸ್ಯೆಯನ್ನು ನಿವಾರಿಸಲು ಸಾಕಷ್ಟು ಸಹಕಾರಿಯಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇನ್ನು ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಚಾಲಿತ ವಾಹನಗಳಿಂದ ಭಾರೀ ಪ್ರಮಾಣದ ಮಾಲಿನ್ಯ ಉತ್ಪಾದನೆಯಾಗುತ್ತಿದ್ದು, ಮಾಲಿನ್ಯ ತಗ್ಗಿಸಲು ನಿಟ್ಟಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ನಿಯಮ ಜಾರಿಗೆ ತರುತ್ತಿವೆ.

ಸದ್ಯ ಮಾರುಕಟ್ಟೆಯಲ್ಲಿ ವಿನೂತನ ಮಾದರಿಯ ಹಲವು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳೇ ಹೆಚ್ಚಿನ ಮಟ್ಟದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಲೆಕ್ಟ್ರಿಕ್ ವಾಹನ ಮಾರಾಟವನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯೂ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಇದೀಗ ಭಾರೀ ಬದಲಾವಣೆಗೆ ಕಾರಣವಾಗಿದ್ದರೂ ನೀರಿಕ್ಷಿತ ಮಟ್ಟದಲ್ಲಿ ಇವಿ ವಾಹನಗಳಿಗೆ ಬೇಡಿಕೆ ಹರಿದುಬರುತ್ತಿಲ್ಲ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೂ ಮುಂದಾದರೂ ಇವಿ ವಾಹನಗಳ ಬ್ಯಾಟರಿ ರೇಂಜ್ ಮತ್ತು ಸಾರ್ವಜನಿಕ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯು ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಹೊಸ ಯೋಜನೆಗೆ ಹಸಿರು ನಿಶಾನೆ ತೋರಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಸುವ ಗ್ರಾಹಕರಿಗೆ ಸೂಕ್ತ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಕರ್ನಾಟಕ ಸರ್ಕಾರವು ನಮ್ಮ ಬೆಂಗಳೂರಿನಲ್ಲಿ ಬರೋಬ್ಬರಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.


Click it and Unblock the Notifications