ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಭಾರತದ ಹೆದ್ದಾರಿಗಳಲ್ಲಿ ಹಾಗೂ ಎಕ್ಸ್‌ಪ್ರೆಸ್ ವೇಗಳಲ್ಲಿ ಸದ್ಯಕ್ಕೆ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಇದಕ್ಕೆ ವಿರೋಧ ವ್ಯಕ್ತ ಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವೇಗದ ಮಿತಿಯನ್ನು ಹೆಚ್ಚಿಸಬೇಕು ಎಂದು ಹೇಳಿದ್ದಾರೆ.

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ವೇ ಟು ವಿಷನ್ ಝೀರೋ ಆನ್‌ಲೈನ್ ತರಬೇತಿ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ತರಬೇತಿ ಕಾರ್ಯಕ್ರಮವನ್ನು ಭಾರತ ಹಾಗೂ ಸ್ವೀಡನ್ ಸರ್ಕಾರಗಳ ಸಹಯೋಗದೊಂದಿಗೆ ನಡೆಸಲಾಗುತ್ತಿದೆ.

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಹೆದ್ದಾರಿಯಲ್ಲಿನ ವೇಗದ ಮಿತಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಗಡ್ಕರಿ, ಇಂತಹ ಬಹುಪಥ ರಸ್ತೆಗಳಲ್ಲಿ ವೇಗವಾಗಿ ಸಾಗುವ ವಾಹನಗಳಿಗೆ ದಂಡ ವಿಧಿಸುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ವೇಗದ ಮಿತಿಗೆ ಸಂಬಂಧಿಸಿದಂತೆ ಇಲಾಖೆಯೊಳಗೆ ಚರ್ಚೆ ನಡೆಸಲಾಗಿದೆ. ಬಹುಪಥ ರಸ್ತೆಗಳು, ಹೆದ್ದಾರಿಗಳು, ಎಕ್ಸ್‌ಪ್ರೆಸ್ ಹೆದ್ದಾರಿಗಳಲ್ಲಿ ಸಾಗುವ ವಾಹನಗಳ ವೇಗದ ಮಿತಿಯನ್ನು ಹೆಚ್ಚಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಸದ್ಯಕ್ಕೆ ಕಾರುಗಳಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ ಗಂಟೆಗೆ 100 ಕಿ.ಮೀ ಹಾಗೂ ಎಕ್ಸ್‌ಪ್ರೆಸ್ ಹೆದ್ದಾರಿಗಳಲ್ಲಿ ಪ್ರತಿ ಗಂಟೆಗೆ 120 ಕಿ.ಮೀ ವೇಗವನ್ನು ಕೇಂದ್ರ ಸರ್ಕಾರವು ಈ ಹಿಂದೆಯೇ ನಿಗದಿಪಡಿಸಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಆದರೆ ತಮ್ಮ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿ ಹಾಗೂ ಎಕ್ಸ್‌ಪ್ರೆಸ್ ಹೆದ್ದಾರಿಗಳಲ್ಲಿ ವೇಗದ ಮಿತಿಯನ್ನು ನಿಗದಿಪಡಿಸುವ ಅಂತಿಮ ಅಧಿಕಾರವನ್ನು ರಾಜ್ಯ ಸರ್ಕಾರಗಳು ಹೊಂದಿವೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ವೇಗದ ಮಿತಿಗಳು ವಿವಿಧ ರಾಜ್ಯಗಳಲ್ಲಿ ಬದಲಾಗುತ್ತವೆ.

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ನಿತಿನ್ ಗಡ್ಕರಿರವರು ಉತ್ತಮ ರಸ್ತೆ ಎಂಜಿನಿಯರಿಂಗ್ ಹಾಗೂ ಸಂಚಾರ ಕಾನೂನುಗಳ ಅಗತ್ಯತೆ ಬಗ್ಗೆ ಮಾತನಾಡಿದರು. ನಾವು ರಸ್ತೆಗಳನ್ನು ಹೆಚ್ಚು ಸುರಕ್ಷಿತಗೊಳಿಸಬೇಕಾಗಿದೆ ಎಂದು ಅವರು ಹೇಳಿದರು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ರಸ್ತೆ ಅಪಘಾತದ ಅಂಕಿಅಂಶಗಳ ಬಗ್ಗೆ ಮಾತನಾಡಿದ ಅವರು ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವವರಲ್ಲಿ 60%ನಷ್ಟು ಜನರು 18-35 ವರ್ಷ ವಯಸ್ಸಿನವರಾಗಿದ್ದಾರೆ. ಇದು ಆತಂಕಕಾರಿಯಾಗಿದೆ ಎಂದು ಹೇಳಿದರು.

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಬ್ರೆಸಿಲಿಯಾ ಕರಡು ಪ್ರಕಾರ, 2020ರ ವೇಳೆಗೆ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆಯನ್ನು 50%ನಷ್ಟು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ಮುಂದಾಗಿದೆ. ಆದರೆ ಈ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಹೈವೇ, ಎಕ್ಸ್‌ಪ್ರೆಸ್ ವೇಗಳ ವೇಗದ ಮಿತಿಯನ್ನು ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಈಗ ಈ ಗುರಿಯನ್ನು 10 ವರ್ಷ ಮುಂದೂಡಲಾಗಿದೆ. 2030ರ ವೇಳೆಗೆ ಭಾರತದಲ್ಲಿ ರಸ್ತೆ ಅಪಘಾತಗಳನ್ನು 50%ನಷ್ಟು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ತೀರ್ಮಾನಿಸಿದ್ದು, 2025ರ ವೇಳೆಗೆ ಆ ಗುರಿಯನ್ನು ಮುಟ್ಟಲಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

Most Read Articles

Kannada
English summary
Central Transport Ministry to increase vehicle speed limit on national highways and expressways. Read in Kannada.
Story first published: Friday, November 6, 2020, 18:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X