Just In
- 3 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 4 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 5 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 5 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- Movies Nannamma Superstar: ಬಿಗ್ ಬಾಸ್ ಸಂಗೀತಾ ಹೊಟ್ಟೆಗೆ ಏನ್ ತಿಂತಾರೆ? ಮೃದಿನಿಗೆ ಕಾಡಿದ ದೊಡ್ಡ ಪ್ರಶ್ನೆ
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆರ್ಲಿಂಗೊ ಎಕ್ಸ್ಎಲ್ ಎಂಪಿವಿ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್
ಫ್ರೆಂಚ್ ಆಟೋ ಉತ್ಪಾದನಾ ಕಂಪನಿಯಾದ ಸಿಟ್ರನ್ ಭಾರತದಲ್ಲಿ ವಿವಿಧ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಮೊದಲ ಹಂತದಲ್ಲಿ ಸಿ5 ಏರ್ಕ್ರಾಸ್ ಎಸ್ಯುವಿ ಮಾದರಿಯ ಬಿಡುಗಡೆಯೊಂದಿಗೆ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.
ಯುರೋಪ್ ಮಾರುಕಟ್ಟೆಯ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಪಿಎಸ್ಎ ಗ್ರೂಪ್ ಅಂಗಸಂಸ್ಥೆಯಾಗಿರುವ ಸಿಟ್ರನ್ ಕಂಪನಿಯು ಭಾರತದಲ್ಲಿ 2021ರ ಆರಂಭದಲ್ಲಿ ಮೊದಲ ಕಾರು ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಎಸ್ಯುವಿ, ಎಂಪಿವಿ ಮತ್ತು ಹ್ಯಾಚ್ಬ್ಯಾಕ್ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿದೆ.
ಹೊಸ ಕಾರುಗಳ ಉತ್ಪಾದನೆಗಾಗಿ ಈಗಾಗಲೇ ಅಧಿಕೃತವಾಗಿ ಚಾಲನೆ ನೀಡಿರುವ ಸಿಟ್ರನ್ ಕಂಪನಿಯು ಟ್ರಯಲ್ ವರ್ಷನ್ ಉತ್ಪಾದನಾ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಸಿ5 ಏರ್ಕ್ರಾಸ್ ಎಸ್ಯುವಿಯೊಂದಿಗೆ ಎಂಪಿವಿ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಸಹ ಕೈಗೊಂಡಿದೆ.
ಮಾಹಿತಿಗಳ ಪ್ರಕಾರ, ಸಿಟ್ರನ್ ಕಂಪನಿಯು 2021ರ ಆರಂಭದಲ್ಲಿ ಸಿ5 ಏರ್ಕ್ರಾಸ್ ಬಿಡುಗಡೆಯ ನಂತರ ಕಂಪ್ಯಾಕ್ಟ್ ಎಸ್ಯುವಿ ಮಾದರಿಯೊಂದರ ಬಿಡುಗಡೆಯ ಯೋಜನೆ ರೂಪಿಸಿದ್ದು, ತದನಂತರವಷ್ಟೇ ಎಂಪಿವಿ ಮಾದರಿಯೊಂದನ್ನು ರಸ್ತೆಗಿಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇದಕ್ಕೆ ಪೂರಕ ಎಂಬಂತೆ ಭಾರತದಲ್ಲಿ ತನ್ನ ಜನಪ್ರಿಯ ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯಾದ ಬೆರ್ಲಿಂಗೊ ಎಕ್ಸ್ಎಲ್ ಕಾರನ್ನು ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹಲವು ವಿಶೇಷ ಸೌಲಭ್ಯಗಳನ್ನು ಹೊಂದಿರುವ ಬೆರ್ಲಿಂಗೊ ಕಾರು ಭಾರತದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿದೆ.
ಭಾರತದಲ್ಲಿ ಬಿಡುಗಡೆಯಾಗಲಿರುವ ಬೆರ್ಲಿಂಗೊ ಎಕ್ಸ್ಎಲ್ ಕಾರಿನ ಕಾರಿನ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಹೊಸ ಕಾರು ಮಾರುತಿ ಸುಜುಕಿ ಎರ್ಟಿಗಾ ಮತ್ತು ಮಹೀಂದ್ರಾ ಮಾರಾಜೋ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಮಧ್ಯಮ ಕ್ರಮಾಂಕದ ಎಂಪಿವಿ ಆವೃತ್ತಿಯಾಗಿರುವ ಬೆರ್ಲಿಂಗೊ ಎಕ್ಸ್ಎಲ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಒಳಾಂಗಣ ಸೌಲಭ್ಯದೊಂದಿಗೆ 7 ಸೀಟರ್ ಆಸನ ಸೌಲಭ್ಯ ಹೊಂದಿದ್ದು, 4,753-ಎಂಎಂ ಉದ್ದ, 1,848-ಎಂಎಂ ಅಗಲ, 1,879-ಎಂಎಂ ಎತ್ತರದೊಂದಿಗೆ 2+3+2 ಮಾದರಿಯಲ್ಲಿ ಆಸನ ಸೌಲಭ್ಯವನ್ನು ಪಡೆದುಕೊಂಡಿದೆ.
ಬೆರ್ಲಿಂಗೊ ಕಾರು ಮಾದರಿಯು ವ್ಯಯಕ್ತಿಕ ಬಳಕೆಗೆ ಮಾತ್ರವಲ್ಲದೆ ಫ್ಲಿಟ್ ಸಂಚಾರಕ್ಕೂ ಉತ್ತಮ ಆಯ್ಕೆಯಾಗಲಿದ್ದು, ಭಾರತದಲ್ಲಿ ಮಾರಾಟದಿಂದ ಸ್ಥಗಿತವಾಗಿರುವ ಷವರ್ಲೆ ಎಂಜಾಯ್ ಕಾರು ಮಾದರಿಯಲ್ಲಿ ಟೂರಿಸ್ಟ್ ವಾಹನ ಮಾದರಿಯಾಗಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ
ಹೊಸ ಕಾರು ಭಾರತದಲ್ಲಿ ರೂ.10 ಲಕ್ಷದಿಂದ ರೂ.13 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದ್ದು, 1.2-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ. ಹಾಗೆಯೇ ಹೊಸ ಕಾರಿನಲ್ಲಿ ಸ್ಲೈಡ್ ಡೋರ್ ಮತ್ತು ಡ್ಯಾಶ್ ಮೌಂಟೆಡ್ ಗೇರ್ಶಿಫ್ಟ್ ಸಿಕ್ಟ್ ಫೀಚರ್ಸ್ ಹೊಂದಿದೆ.