Just In
- 3 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 5 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 6 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 7 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies Shrirasthu Shubhamasthu: ಮಹೇಶನ ಎದುರು ಬಯಲಾಯಿತು ಶಾರ್ವರಿ ಎರಡನೇ ಮುಖ; ಮುಂದೇನು?
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಜೆಟ್ ಬೆಲೆಯ ಎಂಪಿವಿ ಕಾರು ಬಿಡುಗಡೆ ಮಾಡಲಿದೆ ಸಿಟ್ರನ್
ಫ್ರೆಂಚ್ ಆಟೋ ಉತ್ಪಾದನಾ ಕಂಪನಿಯಾದ ಸಿಟ್ರನ್ ಭಾರತದಲ್ಲಿ ವಿವಿಧ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಮೊದಲ ಹಂತದಲ್ಲಿ ಸಿ5 ಏರ್ಕ್ರಾಸ್ ಎಸ್ಯುವಿ ಮಾದರಿಯ ಬಿಡುಗಡೆಯೊಂದಿಗೆ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.
ಹೌದು, ಯುರೋಪ್ ಮಾರುಕಟ್ಟೆಯ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಪಿಎಸ್ಎ ಗ್ರೂಪ್ ಅಂಗಸಂಸ್ಥೆಯಾದ ಸಿಟ್ರನ್ ಕಂಪನಿಯು ಭಾರತದಲ್ಲಿ 2021ರ ಆರಂಭದಲ್ಲಿ ಮೊದಲ ಕಾರು ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಎಸ್ಯುವಿ, ಎಂಪಿವಿ ಮತ್ತು ಹ್ಯಾಚ್ಬ್ಯಾಕ್ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿದೆ.
ಹೊಸ ಕಾರುಗಳ ಉತ್ಪಾದನೆಗಾಗಿ ಈಗಾಗಲೇ ಅಧಿಕೃತವಾಗಿ ಚಾಲನೆ ನೀಡಿರುವ ಸಿಟ್ರನ್ ಕಂಪನಿಯು ಟ್ರಯಲ್ ವರ್ಷನ್ ಉತ್ಪಾದನಾ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಸಿ5 ಏರ್ಕ್ರಾಸ್ ಎಸ್ಯುವಿಯೊಂದಿಗೆ ಎಂಪಿವಿ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಸಹ ಕೈಗೊಂಡಿದೆ.
ಮಾಹಿತಿಗಳ ಪ್ರಕಾರ, ಸಿಟ್ರನ್ ಕಂಪನಿಯು 2021ರ ಆರಂಭದಲ್ಲಿ ಸಿ5 ಏರ್ಕ್ರಾಸ್ ಬಿಡುಗಡೆಯ ನಂತರ ಕಂಪ್ಯಾಕ್ಟ್ ಎಸ್ಯುವಿ ಮಾದರಿಯೊಂದರ ಬಿಡುಗಡೆಯ ಯೋಜನೆ ರೂಪಿಸಿದ್ದು, ತದನಂತರವಷ್ಟೇ ಎಂಪಿವಿ ಮಾದರಿಯೊಂದನ್ನು ರಸ್ತೆಗಿಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇದಕ್ಕೆ ಪೂರಕ ಎಂಬಂತೆ ಭಾರತದಲ್ಲಿ ತನ್ನ ಜನಪ್ರಿಯ ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯಾದ ಬೆರ್ಲಿಂಗೊ ಎಕ್ಸ್ಎಲ್ ಕಾರನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹಲವು ವಿಶೇಷ ಸೌಲಭ್ಯಗಳನ್ನು ಹೊಂದಿರುವ ಬೆರ್ಲಿಂಗೊ ಕಾರು ಭಾರತದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿದೆ.
ಭಾರತದಲ್ಲಿ ಬಿಡುಗಡೆಯಾಗಲಿರುವ ಬೆರ್ಲಿಂಗೊ ಎಕ್ಸ್ಎಲ್ ಕಾರಿನ ಕಾರಿನ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಹೊಸ ಕಾರು ಮಾರುತಿ ಸುಜುಕಿ ಎರ್ಟಿಗಾ ಮತ್ತು ಮಹೀಂದ್ರಾ ಮಾರಾಜೋ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..
ಮಧ್ಯಮ ಕ್ರಮಾಂಕದ ಎಂಪಿವಿ ಆವೃತ್ತಿಯಾಗಿರುವ ಬೆರ್ಲಿಂಗೊ ಎಕ್ಸ್ಎಲ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಒಳಾಂಗಣ ಸೌಲಭ್ಯದೊಂದಿಗೆ 7 ಸೀಟರ್ ಆಸನ ಸೌಲಭ್ಯ ಹೊಂದಿದ್ದು, 4,753-ಎಂಎಂ ಉದ್ದ, 1,848-ಎಂಎಂ ಅಗಲ, 1,879-ಎಂಎಂ ಎತ್ತರದೊಂದಿಗೆ 2+3+2 ಮಾದರಿಯಲ್ಲಿ ಆಸನ ಸೌಲಭ್ಯವನ್ನು ಪಡೆದುಕೊಂಡಿದೆ.
ಬೆರ್ಲಿಂಗೊ ಕಾರು ಮಾದರಿಯು ವ್ಯಯಕ್ತಿಕ ಬಳಕೆಗೆ ಮಾತ್ರವಲ್ಲದೆ ಫ್ಲಿಟ್ ಸಂಚಾರಕ್ಕೂ ಉತ್ತಮ ಆಯ್ಕೆಯಾಗಲಿದ್ದು, ಭಾರತದಲ್ಲಿ ಮಾರಾಟದಿಂದ ಸ್ಥಗಿತವಾಗಿರುವ ಷವರ್ಲೆ ಎಂಜಾಯ್ ಕಾರು ಮಾದರಿಯಲ್ಲಿ ಟೂರಿಸ್ಟ್ ವಾಹನ ಮಾದರಿಯಾಗಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಹೊಸ ಕಾರು ಭಾರತದಲ್ಲಿ ರೂ.9 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದ್ದು, 1.2-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ. ಹಾಗೆಯೇ ಹೊಸ ಕಾರಿನಲ್ಲಿ ಸ್ಲೈಡ್ ಡೋರ್ ಮತ್ತು ಡ್ಯಾಶ್ ಮೌಂಟೆಡ್ ಗೇರ್ಶಿಫ್ಟ್ ಸಿಕ್ಟ್ ಫೀಚರ್ಸ್ ಹೊಂದಿದೆ.