2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಕಾರು ಮಾರಾಟದಲ್ಲಿ ಹೊಸ ನೀರಿಕ್ಷೆಯಲ್ಲಿರುವ ಸಿಟ್ರನ್ ಕಂಪನಿಯು ಶೀಘ್ರದಲ್ಲೇ ಹೊಸ ಕಾರುಗಳ ಮಾರಾಟ ಆರಂಭಿಸುವ ಯೋಜನೆಯಲ್ಲಿದ್ದು, ಗ್ರಾಹಕರ ಬೇಡಿಕೆ ವಿವಿಧ ಮಾದರಿಯ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌‌ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆ ಮಾಡಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಈಗಾಗಲೇ ಹೊಸ ಕಾರು ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಸಿಟ್ರನ್ ಮಾತೃಸಂಸ್ಥೆ ಪಿಎಸ್ಎ ಗ್ರೂಪ್ ಕಂಪನಿಯು ವಿವಿಧ ಹಂತದ ಮಾರುಕಟ್ಟೆ ಅಧ್ಯಯನಗಳನ್ನು ನಡೆಸುತ್ತಿದ್ದು, 2021ರ ಆರಂಭದಲ್ಲಿ ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಹೊಸ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಸಮೂಹ ಕಂಪನಿಗಳು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಕಾರುಗಳು ಬಿಡುಗಡೆಗೊಳ್ಳಲಿರುವ ನಗರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸುತ್ತಿದೆ.

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಕಂಪನಿಯು ಮೊದಲು ಸಿ5 ಏರ್‌ಕ್ರಾಸ್ ಎಸ್‌ಯುವಿ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಕಂಪನಿಯು ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್‌ಕ್ರಾಸ್ ಮತ್ತು ಸಿ3 ಏರ್‌ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಳ್ಳಲಿವೆ.

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಕಾರು ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಕಾರುಗಳಿಗೆ ಸರಿಸಮನಾದ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಲಿದ್ದರೆ ಸಿ3 ಏರ್‌ಕ್ರಾಸ್ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಹೊಸ ಕಾರುನ್ನು ಭಾರತ ಸಿ21 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಬಹುತೇಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಆರಂಭಿಕವಾಗಿ ರೂ.6.50 ಲಕ್ಷದಿಂದ ಟಾಪ್ ಮಾದರಿಗಳು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಇದನ್ನೇ ಪ್ರಧಾನವಾಗಿಟ್ಟುಕೊಂಡಿರುವ ಸಿಟ್ರನ್ ಕಂಪನಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿರುವ ಸಿ3 ಏರ್‌ಕ್ರಾಸ್ ಕಾರನ್ನು ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಕಾರು 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದ್ದರೆ, ಸಿ3 ಏರ್‌ಕ್ರಾಸ್ ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇನ್ನು ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆಯನ್ನು ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.

2021ಕ್ಕೆ ಬಿಡುಗಡೆಯಾಗಲಿದೆ ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಹೊಸ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16 ಲಕ್ಷದಿಂದ ರೂ.20 ಲಕ್ಷಕ್ಕೆ ಮತ್ತು ಸಿ3 ಏರ್‌ಕ್ರಾಸ್ ಕಾರು ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

More from DriveSpark

Article Published On: Friday, April 24, 2020, 8:45 [IST]
English summary
Citroen C21 Sub-4m SUV Launching Next Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+