ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸಿಟ್ರನ್ ಕಾರು ಉತ್ಪಾದನಾ ಕಂಪನಿಯು ಭಾರತದಲ್ಲಿ ಹೊಸ ಕಾರುಗಳ ಉತ್ಪಾದನಾ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡುತ್ತಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ವಿವಿಧ ಮಾದರಿಯ ಹಲವು ಜನಪ್ರಿಯ ಕಾರುಗಳನ್ನು ಬಿಡುಗಡೆ ಮಾಡಲಿದೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಭಾರತದಲ್ಲಿ ಈಗಾಗಲೇ ಹೊಸ ಕಾರು ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಪಿಎಸ್ಎ ಗ್ರೂಪ್ ಕಂಪನಿಯು ತನ್ನ ಅಂಗಸಂಸ್ಥೆಯಾದ ಸಿಟ್ರನ್ ಕಾರುಗಳ ಮೂಲಕ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, 2021ರ ಆರಂಭದಲ್ಲಿ ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಿದೆ. ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಹೊಸ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಸಮೂಹ ಕಂಪನಿಗಳು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಕಾರುಗಳು ಬಿಡುಗಡೆಗೊಳ್ಳಲಿರುವ ನಗರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸುತ್ತಿದೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಸಂಸ್ಥೆಯು ಮೊದಲು ಸಿ5 ಏರ್‌ಕ್ರಾಸ್ ಎಸ್‌ಯುವಿ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಕಂಪನಿಯು ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್‌ಕ್ರಾಸ್ ಮತ್ತು ಸಿ3 ಏರ್‌ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಏರ್‌ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸಿ5 ಏರ್‌ಕ್ರಾಸ್ ಕಾರು ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಕಾರುಗಳಿಗೆ ಸರಿಸಮನಾದ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಲಿದ್ದರೆ ಸಿ3 ಏರ್‌ಕ್ರಾಸ್ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿ ಬಹುತೇಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಆರಂಭಿಕವಾಗಿ ರೂ.6.50 ಲಕ್ಷದಿಂದ ಟಾಪ್ ಮಾದರಿಗಳು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಇದನ್ನೇ ಪ್ರಧಾನವಾಗಿಟ್ಟುಕೊಂಡಿರುವ ಸಿಟ್ರನ್ ಕಂಪನಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿರುವ ಸಿ3 ಏರ್‌ಕ್ರಾಸ್ ಕಾರನ್ನು ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಮರುಬಿಡುಗಡೆಯಾಗಿ ಚಿಂತನೆ ನಡೆಸಿದೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸದ್ಯಕ್ಕೆ ಸಿ3 ಏರ್‌ಕ್ರಾಸ್ ಕಾರನ್ನು ಭಾರತದಲ್ಲಿ ಸ್21 ಕೋಡ್ ಸಂಖ್ಯೆಯ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆಯನ್ನು ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.

ವಿಟಾರಾ ಬ್ರೆಝಾ, ವೆನ್ಯೂ ಪ್ರತಿಸ್ಪರ್ಧಿ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಹೊಸ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16 ಲಕ್ಷದಿಂದ ರೂ.20 ಲಕ್ಷಕ್ಕೆ ಮತ್ತು ಸಿ3 ಏರ್‌ಕ್ರಾಸ್ ಕಾರು ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
English summary
Citroen C21 SUV Launch Confirmed in 2021. Read in Kannada.
Story first published: Wednesday, April 8, 2020, 18:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X