Just In
- 1 hr ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 1 hr ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 2 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 4 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2021ಕ್ಕೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಹುನೀರಿಕ್ಷಿತ ಸಿಟ್ರನ್ ಸಿ5 ಏರ್ಕ್ರಾಸ್
ಯುರೋಪಿನ ಎರಡನೇ ಅತಿದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ ಪಿಎಸ್ಎ ಗ್ರೂಪ್ನ ಸಹೋದರ ಕಂಪನಿ ಸಿಟ್ರನ್ ಬ್ರಾಂಡ್ ಭಾರತದಲ್ಲಿ ಹೊಸ ಕಾರು ಉತ್ಪಾದನಾ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡುತ್ತಿದ್ದು, ಈಗಾಗಲೇ ಹೊಸ ಕಾರು ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ ನೀಡಿದೆ.
ಭಾರತದಲ್ಲಿ 2021ರ ಆರಂಭದಲ್ಲಿ ಮೊದಲ ಹಂತವಾಗಿ ಸಿ5 ಏರ್ಕ್ರಾಸ್ ಎಸ್ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿರುವ ಸಿಟ್ರನ್ ಕಂಪನಿಯು ಸ್ಥಳೀಯವಾಗಿಯೇ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಮಾತ್ರವೇ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಿದೆ. ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್ಯುವಿ, ಹ್ಯಾಚ್ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದೆ.
ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಹೊಸ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಸಮೂಹ ಕಂಪನಿಯು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಬಿಡುಗಡೆಗೊಳ್ಳಲಿರುವ ನಗರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸುತ್ತಿದೆ.
ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಸಂಸ್ಥೆಯು ಸಿ5 ಏರ್ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.
ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯು ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್ಕ್ರಾಸ್ ಎಸ್ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಕಂಪ್ಯಾಕ್ಟ್ ಎಸ್ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.
ಸಿ5 ಏರ್ಕ್ರಾಸ್ ಕಾರು ಮಾದರಿಯು ಬಿಎಸ್-6 ಪ್ರೇರಿತ 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಹೊಂದಿರಲಿದ್ದರೆ ಡೀಸೆಲ್ ಎಂಜಿನ್ ಮಾದರಿಯು 1.5-ಲೀಟರ್ ಜೊತೆಗೆ ಪರ್ಫಾಮೆನ್ಸ್ ಉದ್ದೇಶಕ್ಕಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.
ಜೊತೆಗೆ ಹೊಸ ಕಾರುಗಳನ್ನು ಪರಿಚಯಿಸುವುದಕ್ಕೂ ಮುನ್ನ ದೇಶದ 80 ಪ್ರಮುಖ ನಗರಗಳಲ್ಲಿ 'ಎಕ್ಸ್ಪಿರೆನ್ಸ್ ಸ್ಟೋರ್'ಗಳನ್ನು ತೆರೆಯಲಿರುವ ಸಿಟ್ರನ್ ಕಂಪನಿಯು ಗ್ರಾಹಕರನ್ನು ಹೊಸ ಕಾರ್ ಬ್ರಾಂಡ್ನತ್ತ ಸೆಳೆಯುವ ಮಾರುಕಟ್ಟೆ ತಂತ್ರಗಳನ್ನು ರೂಪಿಸುತ್ತಿದೆ.
ಇದಲ್ಲದೇ ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆಯನ್ನು ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.
ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್ಕ್ರಾಸ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 16 ಲಕ್ಷದಿಂದ ರೂ.20 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
ಇನ್ನು ಸಿಟ್ರನ್ ಕಂಪನಿಯು ಸದ್ಯ ಕಾರು ಉತ್ಪಾದನಾ ಘಟಕ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸಿದ್ದು, ಸಿಬ್ಬಂದಿ ನೇಮಕ, ಮಾರುಕಟ್ಟೆ ಅಧ್ಯಯನ ಮತ್ತು ಕಾರು ಮಾರಾಟಕ್ಕೆ ಅನುಕೂಲಕರ ಪ್ರದೇಶಗಳಲ್ಲಿ ಅಧಿಕೃತ ಮಾರಾಟ ಮಳಿಗೆಗಳ ನಿರ್ಮಾಣದ ಮೇಲೆ ಹೆಚ್ಚು ಹೂಡಿಕೆ ಮಾಡುತ್ತಿದೆ.