Just In
- 32 min ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 1 hr ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 3 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 3 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಮೊದಲ ಬಾರಿಗೆ ಸಿ5 ಏರ್ಕ್ರಾಸ್ ಕಾರಿನ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್
ಸಿಟ್ರನ್ ಕಂಪನಿಯು ತನ್ನ ಸಿ5 ಏರ್ಕ್ರಾಸ್ ಎಸ್ಯುವಿ ಮಾದರಿಯನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಮಾತೃಸಂಸ್ಥೆಯಾದ ಪಿಎಸ್ಎ ಗ್ರೂಪ್ ಜೊತೆಗೂಡಿ ಟ್ರಯಲ್ ವರ್ಷನ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿರುವುದಲ್ಲದೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಸಹ ಆರಂಭಿಸಿದೆ.
ಫ್ರೆಂಚ್ ಮೂಲದ ಪಿಎಸ್ಎ ಗ್ರೂಪ್ ಕಂಪನಿಯು ತನ್ನ ಅಂಗಸಂಸ್ಥೆಯಾದ ಸಿಟ್ರನ್ ಸೇರಿದಂತೆ ವಿವಿಧ ಬ್ರಾಂಡ್ ಕಾರುಗಳ ಮಾರಾಟವನ್ನು ಭಾರತದಲ್ಲಿ ಹೊಸದಾಗಿ ಆರಂಭಿಸುತ್ತಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಸಿ5 ಏರ್ಕ್ರಾಸ್ ಎಸ್ಯುವಿ ಕಾರು ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ವಿಶೇಷತೆಗಳೊಂದಿಗೆ ರಸ್ತೆಗಿಳಿಸುವುದು ಬಹುತೇಕ ಖಚಿತವಾಗಿದೆ.
ತಮಿಳುನಾಡಿನ ತಿರುವಲ್ಲೂರ್ನಲ್ಲಿ ಹೊಸ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಪಿಎಸ್ಎ ಗ್ರೂಪ್ ಕಂಪನಿಯು ವಿವಿಧ ರಾಜ್ಯಗಳಲ್ಲಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರು 2021ರ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ.
ಕಾರು ಬೆಲೆ ಇಳಿಕೆಗಾಗಿ ಸಿಟ್ರನ್ ಕಂಪನಿಯು ಸ್ಥಳೀಯವಾಗಿಯೇ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಮಾತ್ರವೇ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಿದೆ.
ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್ಯುವಿ, ಹ್ಯಾಚ್ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್ಕ್ರಾಸ್ ಕಾರನ್ನು ಬಿಡುಗಡೆ ಮಾಡುತ್ತಿದೆ.
ಸಿಟ್ರನ್ ಕಂಪನಿಯು ಸಿ5 ಏರ್ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.
ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ.
ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್ಕ್ರಾಸ್ ಎಸ್ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಕಂಪ್ಯಾಕ್ಟ್ ಎಸ್ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಸಿ5 ಏರ್ಕ್ರಾಸ್ ಕಾರು ಮಾದರಿಯು ಬಿಎಸ್-6 ಎಮಿಷನ್ ಪ್ರೇರಿತ 1.5-ಲೀಟರ್ ಡೀಸೆಲ್ ಅಥವಾ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.
ಆದರೆ ಹೊಸ ಕಾರಿನಲ್ಲಿ ಪೆಟ್ರೋಲ್ ಮಾದರಿಯ ಬಿಡುಗಡೆಯ ಕುರಿತು ಯಾವುದೇ ನಿಖರ ಮಾಹಿತಿಗಳಿಲ್ಲವಾದರೂ ಗ್ರಾಹಕರ ಬೇಡಿಕೆ ಅನುಸಾರವಾಗಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ ಅನ್ನು ಫಿಯೆಟ್ ಕಂಪನಿಯಿಂದ ಎರವಲು ಪಡೆದುಕೊಳ್ಳುವ ಸಾಧ್ಯತೆಗಳಿವೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..
ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್ಕ್ರಾಸ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 22 ಲಕ್ಷದಿಂದ ರೂ. 25 ಲಕ್ಷ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.