Just In
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿಟ್ರನ್ ಮೊದಲ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಂಜಿನ್ ಮಾಹಿತಿ ಬಹಿರಂಗ
ಭಾರತದಲ್ಲಿ ಹೊಸಾದಾಗಿ ಕಾರು ಉತ್ಪಾದನೆ ಮತ್ತು ಮಾರಾಟ ಮಾಡುವ ಯೋಜನೆಯಲ್ಲಿರುವ ಸಿಟ್ರನ್ ಕಂಪನಿಯು 2021ರ ಮೇ ನಲ್ಲಿ ತನ್ನ ಮೊದಲ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಮಾಹಿತಿ ನೀಡಿದ್ದು, ಹೊಸ ಕಾರಿನ ಪ್ರಮುಖ ತಾಂತ್ರಿಕ ಮಾಹಿತಿಗಳನ್ನು ಬಹಿರಂಗಪಡಿಸಿದೆ.

ಈ ವರ್ಷದ ಮಧ್ಯಂತರದಲ್ಲಿ ಹೊಸ ವಾಹನ ಮಾರಾಟಕ್ಕೆ ಚಾಲನೆ ನೀಡುವ ಯೋಜನೆಯಲ್ಲಿದ್ದ ಸಿಟ್ರನ್ ಕಂಪನಿಯು ಕರೋನಾ ವೈರಸ್ ಪರಿಣಾಮ ಹೊಸ ಯೋಜನೆಯನ್ನು ಮುಂದೂಡಿಕೆ ಮಾಡಿದ್ದು, 2021ರ ಮಧ್ಯಂತರದಲ್ಲಿ ಮೊದಲ ಕಾರು ಮಾದರಿಯಾಗಿ ಸಿ5 ಏರ್‌ಕ್ರಾಸ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿರುವ ಹೊಸ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಕಾರನ್ನು ಬಿಡುಗಡೆ ಮಾಡುತ್ತಿದೆ.

ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್‌ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್‌ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಬಿಎಸ್-6 ಎಮಿಷನ್ ಪ್ರೇರಿತ 2.0-ಲೀಟರ್ ಇನ್‌ಲೈನ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, ಹೊಸ ಎಂಜಿನ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಬಹುದಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹಾಗೆಯೇ ಕಾರಿನ ಒಳಭಾಗದ ವಿನ್ಯಾಸಗಳು ಕೂಡಾ ಐಷಾರಾಮಿ ವೈಶಿಷ್ಟ್ಯತೆಯೊಂದಿಗೆ ಆಕರ್ಷಕ ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಲೆದರ್ ಆಸನಗಳು, ಸ್ಟೀರಿಂಗ್ ಮೌಂಟೆಡ್ ವೀಲ್ಹ್, 8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, 12-ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳಿರಲಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್, 360 ಡಿಗ್ರಿ ವ್ಯೂ ಕ್ಯಾಮೆರಾ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಕೀ ಲೆಸ್ ಎಂಟ್ರಿ, ಸ್ಟಾರ್ಟ್/ಸ್ಟಾಪ್ ಬಟನ್, ಹಿಲ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್, ಪಾರ್ಕಿಂಗ್ ಅಸಿಸ್ಟ್ ಸೇರಿದಂತೆ ಆಫ್ ರೋಡ್ ಕೌಶಲ್ಯಕ್ಕಾಗಿ 4x4 ಡ್ರೈವ್ ಸಿಸ್ಟಂ ಪಡೆದುಕೊಳ್ಳುವ ಸಾಧ್ಯತೆಗಳಿವೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಈ ಮೂಲಕ ಮಧ್ಯಮ ಕ್ರಮಾಂಕರ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಆಯ್ಕೆಯಾಗಲಿರುವ ಸಿಟ್ರನ್ ಸಿ5 ಏರ್‌ಕ್ರಾಸ್ ಮಾದರಿಯು ಜೀಪ್ ಕಂಪಾಸ್, ಸ್ಕೋಡಾ ಕರೋಕ್ ಮತ್ತು ಹ್ಯುಂಡೈ ಟಕ್ಸನ್ ಕಾರು ಮಾದರಿಗಳಿಗೆ ಪ್ರಬಲ ಪೈಪೋಟಿ ನೀಡಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.22 ಲಕ್ಷದಿಂದ ರೂ. 25 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.