ಭಾರತದಲ್ಲಿ ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ಸಿಟ್ರನ್ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಮಾತೃಸಂಸ್ಥೆಯಾದ ಪಿಎಸ್ಎ ಗ್ರೂಪ್ ಜೊತೆಗೂಡಿ ಟ್ರಯಲ್ ವರ್ಷನ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ತಮಿಳುನಾಡಿನ ತಿರುವಲ್ಲೂರ್‌ನಲ್ಲಿ ಹೊಸ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಪಿಎಸ್ಎ ಗ್ರೂಪ್ ಕಂಪನಿಯು ತನ್ನ ಅಂಗಸಂಸ್ಥೆಯಾದ ಸಿಟ್ರನ್ ಸೇರಿದಂತೆ ವಿವಿಧ ಬ್ರಾಂಡ್ ಕಾರುಗಳ ಮಾರಾಟವನ್ನು ಭಾರತದಲ್ಲಿ ಹೊಸದಾಗಿ ಆರಂಭಿಸುತ್ತಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯು ಹಲವು ವಿಶೇಷತೆಗಳೊಂದಿಗೆ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಭಾರತದಲ್ಲಿ 2021ರ ಆರಂಭದಲ್ಲಿ ಮೊದಲ ಹಂತವಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿರುವ ಸಿಟ್ರನ್ ಕಂಪನಿಯು ಸ್ಥಳೀಯವಾಗಿಯೇ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಮಾತ್ರವೇ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಿದೆ.

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಕಾರನ್ನು ಬಿಡುಗಡೆ ಮಾಡುತ್ತಿದೆ.

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್‌ಗಳು ಯುರೋಪ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಕಾರುಗಳಾಗಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್‌ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ.

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಬಿಎಸ್-6 ಎಮಿಷನ್ ಪ್ರೇರಿತ 1.5-ಲೀಟರ್ ಡೀಸೆಲ್ ಅಥವಾ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಆದರೆ ಹೊಸ ಕಾರಿನಲ್ಲಿ ಪೆಟ್ರೋಲ್ ಮಾದರಿಯ ಬಿಡುಗಡೆಯ ಕುರಿತು ಯಾವುದೇ ನಿಖರ ಮಾಹಿತಿಗಳಿಲ್ಲವಾದರೂ ಗ್ರಾಹಕರ ಬೇಡಿಕೆ ಅನುಸಾರವಾಗಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ ಅನ್ನು ಫಿಯೆಟ್ ಕಂಪನಿಯಿಂದ ಎರವಲು ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬರಲಿರುವ ಹೊಸ ವಿಮಾ ನೀತಿ..

ಸಿ5 ಏರ್‌ಕ್ರಾಸ್ ಕಾರಿನ ಟ್ರಯಲ್ ವರ್ಷನ್ ಉತ್ಪಾದನೆಗೆ ಚಾಲನೆ

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 22 ಲಕ್ಷದಿಂದ ರೂ. 25 ಲಕ್ಷ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

More from DriveSpark

Article Published On: Friday, July 31, 2020, 11:36 [IST]
English summary
Citroen C5 Aircross SUV India Trial Production Started. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+