ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್ ಸಿ5 ಏರ್‌ಕ್ರಾಸ್

ಫ್ರೆಂಚ್ ಆಟೋ ಉತ್ಪಾದನಾ ಕಂಪನಿಯಾದ ಸಿಟ್ರನ್ ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಸದ್ಯ ಯುರೋಪ್ ಮಾರುಕಟ್ಟೆಯಲ್ಲಿರುವ ಸಿ5 ಏರ್‌ಕ್ರಾಸ್ ಕಾರು ವಾಹನ ಸ್ಥಿರತೆ ಪರೀಕ್ಷೆ ಅತ್ಯುತ್ತಮ ಪ್ರದರ್ಶನ ತೋರುವ ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಯಾಗಿದ್ದರೂ ಐಷಾರಾಮಿ ಕಾರುಗಳ ಮಾದರಿಯಲ್ಲಿ ಮೊಸ್ ಟೆಸ್ಟಿಂಗ್(ವಾಹನ ಸ್ಥಿರತೆ ಪರೀಕ್ಷೆ)ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದು, ವೇಗದ ಚಾಲನೆ ವೇಳೆಯೂ ಅಪಘಾತದ ಸಂದರ್ಭಗಳನ್ನು ಸಮರ್ಥವಾಗಿ ನಿಭಾಯಿಸುವದರ ಜೊತೆಗೆ ವಾಹನದ ಮೇಲೆ ಹಿಡಿತ ಸಾಧಿಸುವುದೇ ಈ ಪರೀಕ್ಷೆಯ ಪ್ರಮುಖ ಅಂಶವಾಗಿದೆ. ಮೊಸ್ ಪರೀಕ್ಷೆಯಲ್ಲಿ ವಿವಿಧ ಹಂತದ ವೇಗಗಳಲ್ಲಿ ಪರೀಕ್ಷೆ ನಡೆಸಲಿದ್ದು, ಯಾವ ಹಂತದ ವೇಗದಲ್ಲಿ ನಿಖರವಾದ ಸ್ಥಿರತೆ ಹೊಂದಿರಲಿದೆ ಎಂಬುವುದನ್ನು ನಿರ್ಧರಿಸಲಾಗುತ್ತದೆ.

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು ಕೂಡಾ ಪ್ರತಿ ಗಂಟೆಗೆ 73ಕಿ.ಮೀ, 79 ಕಿ.ಮೀ, 81ಕಿ.ಮೀ ಮತ್ತು ಅಂತಿಮವಾಗಿ 84 ವೇಗದಲ್ಲೂ ಸಕಾರಾತ್ಮಕ ಪ್ರದರ್ಶನ ತೋರಿದ್ದು, ಹೆಚ್ಚಿನ ವೇಗದಲ್ಲೂ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್ ಮೂಲಕ ವಾಹನದ ಮೇಲೆ ನಿಖರವಾಗಿ ಹಿಡಿತ ಸಾಧಿಸಬಹುದಾಗಿದೆ.

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತ್ಯುತ್ತಮ ತಾಂತ್ರಿಕ ಅಂಶಗಳೊಂದಿಗೆ ಸದ್ದು ಮಾಡುತ್ತಿರುವ ಸಿ5 ಏರ್‌ಕ್ರಾಸ್ ಮಾದರಿಯು ಭಾರತದಲ್ಲೂ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಜೀಪ್ ಕಂಪಾಸ್, ಎಂಜಿ ಹೆಕ್ಟರ್ ಮತ್ತು ಟಾಟಾ ಹ್ಯಾರಿಯರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಬಹುದಾಗಿದೆ.

ಭಾರತದಲ್ಲಿ 2021ರ ಆರಂಭದಲ್ಲಿ ಮೊದಲ ಹಂತವಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿರುವ ಸಿಟ್ರನ್ ಕಂಪನಿಯು ಸ್ಥಳೀಯವಾಗಿಯೇ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಮಾತ್ರವೇ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಿದೆ.

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿವೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಕಾರನ್ನು ಬಿಡುಗಡೆ ಮಾಡುತ್ತಿದೆ.

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಬಿಎಸ್-6 ಎಮಿಷನ್ ಪ್ರೇರಿತ 1.5-ಲೀಟರ್ ಡೀಸೆಲ್ ಅಥವಾ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಆದರೆ ಹೊಸ ಕಾರಿನಲ್ಲಿ ಪೆಟ್ರೋಲ್ ಮಾದರಿಯ ಬಿಡುಗಡೆಯ ಕುರಿತು ಯಾವುದೇ ನಿಖರ ಮಾಹಿತಿಗಳಿಲ್ಲವಾದರೂ ಗ್ರಾಹಕರ ಬೇಡಿಕೆ ಅನುಸಾರವಾಗಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ ಅನ್ನು ಫಿಯೆಟ್ ಕಂಪನಿಯಿಂದ ಎರವಲು ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ವಾಹನ ಸ್ಥಿರತೆ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡು ಸಿಟ್ರನ್

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 18 ಲಕ್ಷದಿಂದ ರೂ.22 ಲಕ್ಷ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Citroen C5 Aircross SUV Performs Moose Test. Read in Kannada.
Story first published: Monday, July 27, 2020, 8:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X