ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಸಿಟ್ರನ್ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗಾಗಿ ಸಿದ್ದತೆ ನಡೆಸಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗಗೊಂಡಿದೆ.

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಭಾರತದಲ್ಲಿ 2021ರ ಆರಂಭದಲ್ಲಿ ಮೊದಲ ಹಂತವಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿರುವ ಸಿಟ್ರನ್ ಕಂಪನಿಯು ಸ್ಥಳೀಯವಾಗಿಯೇ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಮಾತ್ರವೇ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಿದೆ. ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿವೆ.

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಕಾರನ್ನು ಬಿಡುಗಡೆ ಮಾಡಲಿದೆ.

MOST READ: ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯು ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್‌ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಬಿಎಸ್-6 ಪ್ರೇರಿತ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳುವುದು ಖಚಿತವಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಆದರೆ ಹೊಸ ಕಾರಿನಲ್ಲಿ ಪೆಟ್ರೋಲ್ ಮಾದರಿಯ ಬಿಡುಗಡೆಯ ಕುರಿತು ಯಾವುದೇ ನಿಖರ ಮಾಹಿತಿಗಳಿಲ್ಲವಾದರೂ ಗ್ರಾಹಕರ ಬೇಡಿಕೆ ಅನುಸಾರವಾಗಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ ಅನ್ನು ಫಿಯೆಟ್ ಕಂಪನಿಯಿಂದ ಎರವಲು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16 ಲಕ್ಷದಿಂದ ರೂ.20 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಸಿಟ್ರನ್ ಬಹುನೀರಿಕ್ಷಿತ ಸಿ5 ಏರ್‌ಕ್ರಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ

ಇನ್ನು ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಸಿಟ್ರನ್ ಕಾರುಗಳ ಬೆಲೆ ಇಳಿಕೆ ಹೊಸ ಯೋಜನೆ ರೂಪಿಸಿರುವ ಮಾತೃಸಂಸ್ಥೆ ಪಿಎಸ್ಎ ಗ್ರೂಪ್ ಕಂಪನಿಯು ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆದಿದ್ದು, ಸ್ಥಳೀಯವಾಗಿ ಲಭ್ಯವಾಗುವ ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.

Most Read Articles

Kannada
English summary
Citroen C5 Aircross To Get Only 2.0 Diesel Engine. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X