2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ಸಿಟ್ರನ್ ಶೀಘ್ರದಲ್ಲೇ ಹೊಸ ಕಾರುಗಳ ಮಾರಾಟ ಆರಂಭಿಸುವ ಯೋಜನೆಯಲ್ಲಿದ್ದು, ಗ್ರಾಹಕರ ಬೇಡಿಕೆ ವಿವಿಧ ಮಾದರಿಯ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌‌ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆಗೆ ಸಿದ್ದವಾಗಿದೆ.

2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಈಗಾಗಲೇ ಹೊಸ ಕಾರು ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಸಿಟ್ರನ್ ಮಾತೃಸಂಸ್ಥೆ ಪಿಎಸ್ಎ ಗ್ರೂಪ್ ಕಂಪನಿಯು ವಿವಿಧ ಹಂತದ ಮಾರುಕಟ್ಟೆ ಅಧ್ಯಯನಗಳನ್ನು ನಡೆಸುತ್ತಿದ್ದು, 2021ರ ಆರಂಭದಲ್ಲಿ ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಹೊಸ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಸಮೂಹ ಕಂಪನಿಗಳು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಕಾರುಗಳು ಬಿಡುಗಡೆಗೊಳ್ಳಲಿರುವ ನಗರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸುತ್ತಿದೆ.

2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಎಸ್‌ಯುವಿ ತದನಂತರ ಸಿಸಿ21 ಕೋಡ್ ನೆಮ್‌ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಳ್ಳಲಿದ್ದು, ಸಿ5 ಏರ್‌ಕ್ರಾಸ್ ಕಾರು ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಕಾರುಗಳಿಗೆ ಸರಿಸಮನಾದ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಲಿದ್ದರೆ ಸಿ3 ಏರ್‌ಕ್ರಾಸ್ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಹೊಸ ಕಾರುನ್ನು ಭಾರತ ಸಿಸಿ21 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಆರಂಭಿಕವಾಗಿ ರೂ.6.50 ಲಕ್ಷದಿಂದ ಟಾಪ್ ಮಾದರಿಗಳು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಇದನ್ನೇ ಪ್ರಧಾನವಾಗಿಟ್ಟುಕೊಂಡಿರುವ ಸಿಟ್ರನ್ ಕಂಪನಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿರುವ ಸಿ3 ಏರ್‌ಕ್ರಾಸ್ ಕಾರನ್ನು ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಿ3 ಏರ್‌ಕ್ರಾಸ್ ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
English summary
Citroen CC21 Smart Car Could Be Launch in 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X