Just In
- 5 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 6 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 7 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 7 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2021ಕ್ಕೆ ಬಿಡುಗಡೆಯಾಗಲಿದೆ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್ಯುವಿ
ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ಸಿಟ್ರನ್ ಶೀಘ್ರದಲ್ಲೇ ಹೊಸ ಕಾರುಗಳ ಮಾರಾಟ ಆರಂಭಿಸುವ ಯೋಜನೆಯಲ್ಲಿದ್ದು, ಗ್ರಾಹಕರ ಬೇಡಿಕೆ ವಿವಿಧ ಮಾದರಿಯ ಹ್ಯಾಚ್ಬ್ಯಾಕ್, ಸೆಡಾನ್, ಎಸ್ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆಗೆ ಸಿದ್ದವಾಗಿದೆ.
ಭಾರತದಲ್ಲಿ ಈಗಾಗಲೇ ಹೊಸ ಕಾರು ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಸಿಟ್ರನ್ ಮಾತೃಸಂಸ್ಥೆ ಪಿಎಸ್ಎ ಗ್ರೂಪ್ ಕಂಪನಿಯು ವಿವಿಧ ಹಂತದ ಮಾರುಕಟ್ಟೆ ಅಧ್ಯಯನಗಳನ್ನು ನಡೆಸುತ್ತಿದ್ದು, 2021ರ ಆರಂಭದಲ್ಲಿ ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್ಯುವಿ, ಹ್ಯಾಚ್ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದೆ.
ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಹೊಸ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಸಮೂಹ ಕಂಪನಿಗಳು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಕಾರುಗಳು ಬಿಡುಗಡೆಗೊಳ್ಳಲಿರುವ ನಗರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸುತ್ತಿದೆ.
ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್ಕ್ರಾಸ್ ಎಸ್ಯುವಿ ತದನಂತರ ಸಿಸಿ21 ಕೋಡ್ ನೆಮ್ ಹೊಂದಿರುವ ಕಂಪ್ಯಾಕ್ಟ್ ಎಸ್ಯುವಿ ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.
ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಳ್ಳಲಿದ್ದು, ಸಿ5 ಏರ್ಕ್ರಾಸ್ ಕಾರು ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಕಾರುಗಳಿಗೆ ಸರಿಸಮನಾದ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಲಿದ್ದರೆ ಸಿ3 ಏರ್ಕ್ರಾಸ್ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು
ಸದ್ಯ ಹೊಸ ಕಾರುನ್ನು ಭಾರತ ಸಿಸಿ21 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಂಪ್ಯಾಕ್ಟ್ ಎಸ್ಯುವಿ ಕಾರುಗಳು ಆರಂಭಿಕವಾಗಿ ರೂ.6.50 ಲಕ್ಷದಿಂದ ಟಾಪ್ ಮಾದರಿಗಳು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಇದನ್ನೇ ಪ್ರಧಾನವಾಗಿಟ್ಟುಕೊಂಡಿರುವ ಸಿಟ್ರನ್ ಕಂಪನಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿರುವ ಸಿ3 ಏರ್ಕ್ರಾಸ್ ಕಾರನ್ನು ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ಗೆ ಭರ್ಜರಿ ಆಫರ್ ನೀಡಿದ ಟಾಟಾ
ಸಿ3 ಏರ್ಕ್ರಾಸ್ ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.