ಮೊದಲ 2 ವರ್ಷದಲ್ಲಿ ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ಸಿಟ್ರನ್ ಶೀಘ್ರದಲ್ಲೇ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಗ್ರಾಹಕರ ಬೇಡಿಕೆ ವಿವಿಧ ಮಾದರಿಯ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌‌ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ.

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಭಾರತದಲ್ಲಿ ಈಗಾಗಲೇ ಹೊಸ ಕಾರು ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಸಿಟ್ರನ್ ಮಾತೃಸಂಸ್ಥೆ ಪಿಎಸ್ಎ ಗ್ರೂಪ್ ಕಂಪನಿಯು ವಿವಿಧ ಹಂತದ ಮಾರುಕಟ್ಟೆ ಅಧ್ಯಯನಗಳನ್ನು ಪೂರ್ಣಗೊಳಿಸುತ್ತಿದ್ದು, 2021ರ ಆರಂಭದಲ್ಲಿ ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದೆ.

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಹೊಸ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಸಮೂಹ ಕಂಪನಿಗಳು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, 2021-23ರ ಆರ್ಥಿಕ ವರ್ಷದಲ್ಲಿ ಒಟ್ಟು ನಾಲ್ಕು ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಮತ್ತು ಸಿಸಿ21 ಕೋಡ್ ನೆಮ್‌ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಸೇರಿದಂತೆ ವಿವಿಧ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಳ್ಳಲಿದ್ದು, ಸಿ5 ಏರ್‌ಕ್ರಾಸ್ ಕಾರು ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಕಾರುಗಳಿಗೆ ಸರಿಸಮನಾದ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಲಿದ್ದರೆ ಸಿ3 ಏರ್‌ಕ್ರಾಸ್ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದೆ.

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಸದ್ಯ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರುನ್ನು ಭಾರತ ಸಿಸಿ21 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಆರಂಭಿಕವಾಗಿ ರೂ.6.50 ಲಕ್ಷದಿಂದ ಟಾಪ್ ಮಾದರಿಗಳು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಇದನ್ನೇ ಪ್ರಧಾನವಾಗಿಟ್ಟುಕೊಂಡಿರುವ ಸಿಟ್ರನ್ ಕಂಪನಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿರುವ ಸಿ3 ಏರ್‌ಕ್ರಾಸ್ ಕಾರನ್ನು ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದೆ.

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಸಿ3 ಏರ್‌ಕ್ರಾಸ್ ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಸಿಟ್ರನ್ ಇಂಡಿಯಾ

ಹಾಗೆಯೇ ಸಿ5 ಏರ್‌ಕ್ರಾಸ್ ಕಾರು ಮಾದರಿಯು 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದ್ದು, ಹೊಸ ಕಾರು ರೂ. 18 ಲಕ್ಷದಿಂದ ರೂ.22 ಲಕ್ಷ ಬೆಲೆ ಅಂತರದೊಂದಿಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಾದ ಜೀಪ್ ಕಂಪಾಸ್, ಟಾಟಾ ಹ್ಯಾರಿಯರ್, ಫೋಕ್ಸ್‌ವ್ಯಾಗನ್ ಟಿ-ರಾಕ್ ಮತ್ತು ಸ್ಕೋಡಾ ಕರೋಕ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
Citroen Planning 4 Models For India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X