ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಮಹಾಮಾರಿ ಕರೋನಾ ವೈರಸ್ ಹರಡುವಿಕೆ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ವಿಧಿಸಿರುವ ಕೇಂದ್ರ ಸರ್ಕಾರವು ಪರಿಸ್ಥಿತಿಗೆ ಅನುಗುಣವಾಗಿ ಮತ್ತಷ್ಟು ದಿನ ವಿಸ್ತರಿಸುವ ಸುಳಿವು ನೀಡಿದ್ದು, ಈ ಮಧ್ಯೆ ಗೂಡ್ಸ್ ಸಾಗಾಣಿಕೆ ಮಾಡುತ್ತಿದ್ದ ಸುಮಾರು 3.50 ಲಕ್ಷಕ್ಕೂ ಹೆಚ್ಚು ಲಾರಿಗಳು ಮಾರ್ಗಮಧ್ಯದಲ್ಲೇ ಉಳಿದಿರುವುದು ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ.

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಲಾಕ್ ಡೌನ್ ಹಿನ್ನಲೆಯಲ್ಲಿ ಅಂತರಾಜ್ಯ ಸಂಪರ್ಕವನ್ನು ಕಡಿತಗೊಳಿಸಿರುವ ಬಹುತೇಕ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗಿದ್ದು, ಅಗತ್ಯ ಸೇವೆಯ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವಾಹನಗಳಿಗೂ ಅವಕಾಶ ನೀಡುತ್ತಿಲ್ಲ. ಆದರೆ ಲಾಕ್ ಡೌನ್ ವಿಧಿಸುವುದಕ್ಕೂ ಮುನ್ನವೇ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳತ್ತ ಚಲಿಸುತ್ತಿದ್ದ ಬಹುತೇಕ ಗೂಡ್ಸ್ ಲಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲೇ ತಡೆಹಿಡಿದಿರುವುದು ಉತ್ಪಾದಕ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗುತ್ತಿದೆ.

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಆದರೆ ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ಪಾಲನೆ ಮಾಡಲೇಬೇಕಾದ ಅನಿವಾರ್ಯತೆಗಳಿದ್ದು, ಆಹಾರ ಪದಾರ್ಥಗಳು ಮತ್ತು ಅಗತ್ಯ ಸೇವೆಯ ವಾಹನಗಳನ್ನು ಹೊರತುಪಡಿಸಿ ಗೃಹಬಳಕೆಯ ವಸ್ತುಗಳು ಮತ್ತು ಆಟೋ ಉತ್ಪಾದನಾ ಸರಕು ಸಾಗಾಣಿಕೆಯ ವಾಹನಗಳಿಗೆ ಭಾರೀ ಹೊಡೆತ ಬೀಳುತ್ತಿದೆ.

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಅಂದಾಜು ಒಂದರ ಪ್ರಕಾರ, ಕೇವಲ ಆಟೋ ಉತ್ಪಾದನಾ ಕಂಪನಿಗಳಿಗೆ ಮಾತ್ರ ಸಂಬಂಧಿಸಿದ ರೂ.35 ಸಾವಿರ ಕೋಟಿ ಮೌಲ್ಯದ ಹೊಸ ವಾಹನಗಳು ಮತ್ತು ಬಿಡಿಭಾಗಗಳನ್ನು ಹೊತ್ತಬರುತ್ತಿರುವ ವಾಹನಗಳು ಮಾರ್ಗ ಮಧ್ಯದಲ್ಲೇ ಸಿಲುಕಿಕೊಂಡಿವೆ.

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇನ್ನು ಸಿಮೆಂಟ್, ಕಬ್ಬಿಣ ಮತ್ತು ಲೈಫ್‌ಸ್ಟೈಲ್ ಸರಕು ಹೊತ್ತು ಬರುತ್ತಿರುವ ಸರಕು ವಾಹನಗಳು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಇದರ ನಡುವೆ ಹೆದ್ದಾರಿಗಳಲ್ಲಿ ಕಳ್ಳತನ ಪ್ರಕರಣಗಳು ಕೂಡಾ ಲಾರಿ ಚಾಲಕರ ನಿದ್ದೆಗೆಡಿಸಿದೆ.

MOST READ: ಲಾಕ್ ಡೌನ್: ‌‌‌‌‌‌ಮಗನಿಗಾಗಿ 1400 ಕಿ.ಮೀ ಪ್ರಯಾಣಿಸಿದ ತಾಯಿ

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಹೌದು, ಲಾಕ್ ಡೌನ್ ನಂತರ ಹೆದ್ದಾರಿಗಳಲ್ಲೇ ವಾಸ್ತವ್ಯ ಹೂಡಿರುವ ಲಾರಿ ಚಾಲಕರಿಗೆ ಒಂದು ಕಡೆ ದಿನನಿತ್ಯದ ಆಹಾರ ವ್ಯವಸ್ಥೆ ಮಾಡಿಕೊಳ್ಳುವುದು ಒಂದು ಸಮಸ್ಯೆಯಾದರೆ ಮತ್ತೊಂದು ಕಡೆ ಪ್ರತಿ ಟ್ರಕ್‌ಗಳಲ್ಲೂ ಲೋಡ್ ಮಾಡಲಾಗಿರುವ ಲಕ್ಷಾಂತರ ರೂಪಾಯಿ ಮೌಲ್ಯದ ಸರಕುಗಳನ್ನು ಕಾಯ್ದುಕೊಳ್ಳುವುದು ಮತ್ತೊಂದು ಸವಾಲಾಗಿದೆ.

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕೆಲವು ಕಡೆಗಳಲ್ಲಿ ಚಾಲಕರನ್ನು ಬೆದರಿಸಿ ಸರಕು ಕಳ್ಳತನ ಮಾಡಿರುವ ಪ್ರಕರಣಗಳು ಕೂಡಾ ಈಗಾಗಲೇ ದಾಖಲಾಗಿದ್ದು, ಮುಂದಿನ ಆದೇಶದ ವರೆಗೂ ಟ್ರಕ್ ಚಾಲಕರು ಸರಕ ಅನ್ನು ಕಾಪಾಡಿಕೊಳ್ಳಬೇಕಿರುವ ದೊಡ್ಡಸವಾಲಾಗಿದೆ.

MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇನ್ನು ಸ್ಟಾಕ್ ಇರುವ ಬಿಎಸ್-4 ವಾಹನಗಳು ಆಟೋ ಕಂಪನಿಗಳು ಭಾರೀ ಪ್ರಮಾಣದ ನಷ್ಟ ಉಂಟು ಮಾಡಲಿದ್ದು, ಏಪ್ರಿಲ್ 1ರಿಂದ ಬಿಎಸ್-6 ವಾಹನಗಳ ಮಾರಾಟವು ಕಡ್ಡಾಯವಾಗಿ ಜಾರಿ ಮಾಡಿರುವುದು ವಾಹನ ಉತ್ಪಾದನಾ ಕಂಪನಿಗಳಿಗೆ ಹಳೆಯ ಸ್ಟಾಕ್ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬಿಎಸ್-4 ವಾಹನಗಳನ್ನು ಬ್ಯಾನ್ ಮಾಡಲಾಗಿದ್ದರೂ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಸದ್ಯಕ್ಕೆ ಕೆಲವು ವಿನಾಯ್ತಿಗಳನ್ನು ನೀಡಿರುವ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

2018ರಲ್ಲೇ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.

MOST READ: ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..!

ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ. ಹೀಗಿರುವಾಗ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಾಣಿಕೆಯಾಗುತ್ತಿದ್ದ ಆಟೋ ಬಿಡಿಭಾಗಗಳು ಮತ್ತು ಹೊಸ ವಾಹನಗಳು ಮಾರ್ಗಮಧ್ಯದಲ್ಲೇ ತುಕ್ಕು ಹಿಡಿಯುತ್ತಿವೆ.

More from DriveSpark

Article Published On: Saturday, April 11, 2020, 21:20 [IST]
English summary
Coronavirus Lockdown: Cars, Two Wheelers, Goods Worth Rs.35,000 Crores Stuck On The Road In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+