ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಕರೋನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ.

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ.

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಜೊತೆಗೆ ಲಾಕ್‌ಡೌನ್‌ಗೂ ಮೊದಲ ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ.

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಸದ್ಯಕ್ಕೆ ವಾಹನ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವ ಬಹುತೇಕ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುತ್ತಿದ್ದು, ಲಾಕ್‌ಡೌನ್ ನಂತರ ವಾಹನ ಮಾರಾಟ ಯೋಜನೆಯಲ್ಲಿದ್ದ ಆಟೋ ಕಂಪನಿಗಳಿಗೆ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುವ ಮೂಲಕ ಮತ್ತೊಂದು ಶಾಕ್ ನೀಡಿದ್ದಾರೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಲಾಕ್‌ಡೌನ್‌ಗೂ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಇದೀಗ ಬುಕ್ಕಿಂಗ್ ಹಣ ವಾಪಸ್‌ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಇದು ಆಟೋ ಕಂಪನಿಗಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಸದ್ಯ ಕರೋನಾ ವೈರಸ್ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಕೂಡಾ ಹೊಸ ವಾಹನಗಳ ಖರೀದಿದಾರರಿಗೂ ಚಿಂತೆಗೀಡು ಮಾಡಿದ್ದು, ವಾಹನ ಖರೀದಿ ನಂತರ ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಾದರೆ ಹೇಗೆ? ಎನ್ನುವ ಭಯ ಕೂಡಾ ಗ್ರಾಹಕರನ್ನು ಕಾಡತೊಡಗಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಹೀಗಾಗಿ ಕರೋನಾ ವೈರಸ್ ಅಬ್ಬರ ತಗ್ಗುವ ತನಕವು ವಾಹನ ಖರೀದಿ ಯೋಜನೆಯನ್ನು ಮುಂದೂಡುವುದೇ ಉತ್ತಮ ಎನ್ನುವ ಯೋಜನೆಯಲ್ಲಿರುವ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುತ್ತಿದ್ದು, ವೈರಸ್ ಅಬ್ಬರ ಒಂದು ಹಂತಕ್ಕೆ ನಿಯಂತ್ರಣ ಬಂದ ನಂತರವೇ ವಾಹನಗಳ ಖರೀದಿ ಮಾಡುವುದು ಉತ್ತಮ ಎನ್ನುವುದು ಬಹುತೇಕ ಗ್ರಾಹಕರ ಅಭಿಪ್ರಾಯವಾಗಿದೆ.

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಇನ್ನು ಕರೋನಾ ಹತ್ತಿಕ್ಕಲು 3ನೇ ಹಂತದ ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ.

MOST READ: ಎರಡು ಚಕ್ರಗಳಲ್ಲಿ ಚಲಿಸಿದ ಟ್ರಾಕ್ಟರ್, ಆನಂದ್ ಮಹೀಂದ್ರಾ ಹೇಳಿದ್ದೇನು?

ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಹಾಗೆಯೇ ವಾಹನ ಮಾರಾಟಕ್ಕೂ ಅವಕಾಶ ನೀಡಲಾಗಿದ್ದು, ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆಯಲಾಗಿದೆ. ವೈರಸ್ ಭೀತಿಯಿಂದಾಗಿ ನೇರ ವಾಹನ ಮಾರಾಟಕ್ಕೆ ಅವಕಾಶವಿಲ್ಲಾದರೂ ಆನ್‌ಲೈನ್ ಮೂಲಕ ಪತ್ರವ್ಯವಹಾರಗಳನ್ನು ಕೈಗೊಂಡು ನೇರವಾಗಿ ಗ್ರಾಹಕ ಮನೆ ಬಾಗಿಲಿಗೆ ಹೊಸ ವಾಹನಗಳನ್ನು ವಿತರಣೆ ಮಾಡಲಾಗುತ್ತಿದೆ.

Most Read Articles

Kannada
English summary
Customers Want Their Booking Amount Refunded For Cars Post Lockdown. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X