ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

2020ರ ದೀಪಾವಳಿ ವಿಶೇಷತೆಗಾಗಿ ಬಹುತೇಕ ಕಾರು ಕಂಪನಿಗಳು ಗರಿಷ್ಠ ಪ್ರಮಾಣದ ಆಫರ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ದಟ್ಸನ್ ಇಂಡಿಯಾ ಕಂಪನಿಯು ಕೂಡಾ ತನ್ನ ವಿವಿಧ ಕಾರು ಮಾದರಿಗಳ ಮೇಲೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಕೋವಿಡ್-19 ಪರಿಣಾಮ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಪ್ರಮುಖ ಆಟೋ ಕಂಪನಿಗಳು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ದೀಪಾವಳಿ ಹಬ್ಬದ ಪ್ರಯಕ್ತ ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಲಾಕ್‌ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಕಾರು ಖರೀದಿ ಯೋಜನೆಯಿಂದ ಹಿಂದೆ ಸರಿದಿದ್ದ ಹಲವು ಗ್ರಾಹಕರು ಇದೀಗ ಕಾರು ಖರೀದಿಗೆ ಮುಂದಾಗುತ್ತಿರುವುದು ಕಾರು ಕಂಪನಿಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಕಾರು ಖರೀದಿ ಮೇಲೆ ಗರಿಷ್ಠ ಆಫರ್ ಜೊತೆಗೆ ಸರಳ ಸಾಲ-ಸೌಲಭ್ಯ ನೀಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ದಟ್ಸನ್ ಸಹ ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ.

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ದಟ್ಸನ್ ಕಂಪನಿಯು ವಿವಿಧ ಕಾರುಗಳ ಖರೀದಿ ಮೇಲೆ ಗರಿಷ್ಠ ರೂ. 48 ಸಾವಿರದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಅಕ್ಟೋಬರ್ 1ರಿಂದ ಅಕ್ಟೋಬರ್ 31ರ ತನಕ ಹೊಸ ಆಫರ್ ಲಭ್ಯವಿದ್ದು, ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ಲಭ್ಯವಿದೆ. ಹೊಸ ಆಫರ್‌ಗಳಲ್ಲಿ ರೆಡಿ-ಗೊ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯು ರೂ.34,500 ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರಲ್ಲಿ ರೂ. 7 ಸಾವಿರ ಕ್ಯಾಶ್ ಆಫರ್, ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ.5 ಸಾವಿರ ಕಾರ್ಪೊರೇಟ್ ಆಫರ್ ಒಳಗೊಂಡಿದೆ.

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಜೊತೆಗೆ ಅಕ್ಟೋಬರ್ 15ರ ಒಳಗಾಗಿ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ಮೇಲಿನ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 7,500 ಹೆಚ್ಚುವರಿ ಕ್ಯಾಶ್‌ಬ್ಯಾಕ್ ಆಫರ್ ದೊರೆಯಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 2.83 ಲಕ್ಷದಿಂದ ರೂ. 4.77 ಲಕ್ಷ ಬೆಲೆ ಹೊಂದಿದೆ.

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ದಟ್ಸನ್ ಕಂಪನಿಯು ರೆಡಿ-ಗೊ ಮಾದರಿಯಂತೆ ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೂ ಆಕರ್ಷಕ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ರೂ. 47,500 ಮೌಲ್ಯದ ವಿವಿಧ ಆಫರ್‌ಗಳನ್ನು ನೀಡುತ್ತಿದೆ. ಇದರಲ್ಲಿ ರೂ.20 ಸಾವಿರ ಕ್ಯಾಶ್‌ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ಅ.15 ರ ಒಳಗಾಗಿ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿಯಾಗಿ ರೂ. 7,500 ಕ್ಯಾಶ್‌ಬ್ಯಾಕ್ ಆಫರ್ ದೊರೆಯಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ರೆಡಿ-ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 3.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.45 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೆ ರೂ. 42,500 ಡಿಸ್ಕೌಂಟ್ ಲಭ್ಯವಿದೆ. ಜೊತೆಗೆ ನಿದಗಿತ ಅವಧಿಯಲ್ಲಿ ಕಾರು ಖರೀದಿ ಮಾಡುವ ಗ್ರಾಹಕರಿಗೆ ರೂ.7,500 ಕ್ಯಾಶ್‌ಬ್ಯಾಕ್ ಲಭ್ಯವಿದ್ದು, ಕಾರು ಖರೀದಿಗೆ ಉತ್ತಮ ಅವಕಾಶ ಎನ್ನಬಹುದು.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ದೀಪಾವಳಿ ಸ್ಪೆಷಲ್: ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

More from DriveSpark

Article Published On: Tuesday, October 6, 2020, 20:41 [IST]
English summary
Datsun Car Discounts For October 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+