Just In
- 3 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
Don't Miss!
- Movies "ಸದಾ ನನ್ನ ಹಿಂಭಾಗವನ್ನೇ ಸದಾ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಟ್ಸನ್ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ
ದಟ್ಸನ್ ಇಂಡಿಯಾ ಕಂಪನಿಯು ಕೂಡಾ ತನ್ನ ವಿವಿಧ ಕಾರು ಮಾದರಿಗಳ ಮೇಲೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ಹೊಸ ಕಾರುಗಳ ಖರೀದಿ ಮೇಲೆ ಗ್ರಾಹಕರು ಗರಿಷ್ಠ ರೂ.51 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.
ಕೋವಿಡ್-19 ಪರಿಣಾಮ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಪ್ರಮುಖ ಆಟೋ ಕಂಪನಿಗಳು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ದೀಪಾವಳಿಯ ನಂತರವು ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಕಾರು ಖರೀದಿ ಯೋಜನೆಯಿಂದ ಹಿಂದೆ ಸರಿದಿದ್ದ ಹಲವು ಗ್ರಾಹಕರು ಇದೀಗ ಕಾರು ಖರೀದಿಗೆ ಮುಂದಾಗುತ್ತಿರುವುದು ಕಾರು ಕಂಪನಿಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.
ಹೊಸ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಕಾರು ಖರೀದಿ ಮೇಲೆ ಗರಿಷ್ಠ ಆಫರ್ ಜೊತೆಗೆ ಸರಳ ಸಾಲ-ಸೌಲಭ್ಯ ನೀಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ದಟ್ಸನ್ ಸಹ ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ.
ದಟ್ಸನ್ ಕಂಪನಿಯು ವಿವಿಧ ಕಾರುಗಳ ಖರೀದಿ ಮೇಲೆ ಗರಿಷ್ಠ ರೂ. 51 ಸಾವಿರದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್ಗಳಲ್ಲಿ ಕ್ಯಾಶ್ಬ್ಯಾಕ್, ಎಕ್ಸ್ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್ಗಳ ಮೇಲೆ ಆಫರ್ಗಳನ್ನು ಪಡೆದುಕೊಳ್ಳಬಹುದಾಗಿದೆ.
ಹೊಸ ಆಫರ್ಗಳು ಅಂತ್ಯವರೆಗೆ ಲಭ್ಯವಿದ್ದು, ರೆಡಿ-ಗೊ, ಗೊ ಮತ್ತು ಗೊ ಪ್ಲಸ್ ಮಾದರಿಗಳ ಮೇಲೆ ಆಫರ್ ಲಭ್ಯವಿದೆ. ಹೊಸ ಆಫರ್ಗಳಲ್ಲಿ ರೆಡಿ-ಗೊ ಎಂಟ್ರಿ ಲೆವಲ್ ಹ್ಯಾಚ್ಬ್ಯಾಕ್ ಮಾದರಿಯು ರೂ.38,000 ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರಲ್ಲಿ ರೂ. 15 ಸಾವಿರ ಎಕ್ಸ್ಚೆಂಜ್ ಆಫರ್, ರೂ.11 ಸಾವಿರ ಇಯರ್ ಎಂಡ್ ಬೋನಸ್ ಮತ್ತು ರೂ.7 ಸಾವಿರ ಕ್ಯಾಶ್ ಆಫರ್ ಒಳಗೊಂಡಿದೆ.
ಜೊತೆಗೆ ದಟ್ಸನ್ ನಿರ್ಮಾಣದ ಯಾವುದೇ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ಜೊತೆಗೆ ಹೆಚ್ಚುವರಿಯಾಗಿ ರೂ. 5 ಸಾವಿರ ಕಾರ್ಪೋರೇಟ್ ಆಫರ್ ಲಭ್ಯವಿರಲಿದ್ದು, ರೆಡಿ-ಗೊ ಕಾರು ಮಾದರಿಯು ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 2.83 ಲಕ್ಷದಿಂದ ರೂ. 4.77 ಲಕ್ಷ ಬೆಲೆ ಹೊಂದಿದೆ.
ದಟ್ಸನ್ ಕಂಪನಿಯು ರೆಡಿ-ಗೊ ಮಾದರಿಯಂತೆ ಗೊ ಹ್ಯಾಚ್ಬ್ಯಾಕ್ ಕಾರು ಮಾದರಿಯ ಮೇಲೂ ಆಕರ್ಷಕ ಡಿಸ್ಕೌಂಟ್ ಆಫರ್ ನೀಡುತ್ತಿದ್ದು, ರೂ. 51 ಸಾವಿರ ಮೌಲ್ಯದ ವಿವಿಧ ಆಫರ್ಗಳನ್ನು ನೀಡುತ್ತಿದೆ. ಇದರಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 20 ಸಾವಿರ ಎಕ್ಸ್ಚೆಂಜ್ ಬೋನಸ್ ಮತ್ತು ರೂ. 11 ಸಾವಿರ ಇಯರ್ ಎಂಡ್ ಬೋನಸ್ ಆಫರ್ ದೊರೆಯಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ
ರೆಡಿ-ಗೊ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 3.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 6.45 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದಿರುವ ಬಜೆಟ್ ಬೆಲೆಯ ಕಾರು ಮಾದರಿಯಾಗಿದೆ.
ಇನ್ನು ಗೊ ಪ್ಲಸ್ ಕಾರು ಮಾದರಿಯು ದಟ್ಸನ್ ನಿರ್ಮಾಣದ ಎಂಟ್ರಿ ಲೆವಲ್ ಕಂಪ್ಯಾಕ್ಟ್ ಎಂಪಿವಿ ಕಾರು ಮಾದರಿಯಾಗಿದ್ದು, ಗೊ ಪ್ಲಸ್ ಕಾರು ಮಾದರಿಯ ಮೇಲೆ ರೂ. 46 ಸಾವಿರ ಡಿಸ್ಕೌಂಟ್ ಲಭ್ಯವಿದೆ. ಜೊತೆಗೆ ನಿದಗಿತ ಅವಧಿಯಲ್ಲಿ ಕಾರು ಖರೀದಿ ಮಾಡುವ ಗ್ರಾಹಕರಿಗೆ ರೂ. 11 ಸಾವಿರ ಇಯರ್ ಎಂಡ್ ಬೋನಸ್ ಲಭ್ಯವಿದ್ದು, ಕಾರು ಖರೀದಿಗೆ ಉತ್ತಮ ಅವಕಾಶ ಎನ್ನಬಹುದು.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು
ಗೊ ಪ್ಲಸ್ ಕಾರು ಮಾದರಿಯು ಗೊ ಹ್ಯಾಚ್ಬ್ಯಾಕ್ ಕಾರು ಮಾದರಿಯಲ್ಲಿರುವಂತೆಯೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.