Just In
- 14 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 18 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 20 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 30 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹಿರಂಗವಾಯ್ತು ದಟ್ಸನ್ ರೆಡಿ ಗೋ ಫೇಸ್ಲಿಫ್ಟ್ ಕಾರಿನ ಮಾಹಿತಿ
ದಟ್ಸನ್ ಕಂಪನಿಯು ತನ್ನ ಎಂಟ್ರಿ ಲೆವೆಲ್ ರೆಡಿ ಗೋ ಫೇಸ್ಲಿಫ್ಟ್ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ಹೊಸ ರೆಡಿ ಗೋ ಫೇಸ್ಲಿಫ್ಟ್ ಕಾರಿನ ಮಾಹಿತಿಯು ಆನ್ಲೈನ್ನಲ್ಲಿ ಬಹಿರಂಗವಾಗಿದೆ.
ಹೊಸ ರೆಡಿ ಗೋ ಫೇಸ್ಲಿಫ್ಟ್ ಕಾರಿನ ಬಗ್ಗೆ ಆನ್ಲೈನ್ನಲ್ಲಿ ಬಹಿರಂಗವಾಗಿರುವ ಮಾಹಿತಿಯ ಪ್ರಕಾರ, ಈ ಹೊಸ ಕಾರು ಡಿ, ಎ, ಟಿ ಮತ್ತು ಟಿ (ಒ) ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಇನ್ನು ದಟ್ಸನ್ ಕಂಪನಿಯು ಇತ್ತೀಚೆಗೆ ರೆಡಿ ಗೋ ಫೇಸ್ಲಿಫ್ಟ್ ಕಾರಿನ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ. ಹೊಸ ರೆಡಿ ಗೋ ಫೇಸ್ಲಿಫ್ಟ್ ಕಾರಿನ ಬುಕ್ಕಿಂಗ್ ಅನ್ನು ಶೀಘ್ರದಲ್ಲೇ ಆರಂಭಿಸಲಿದೆ. ರೆಡಿ ಗೋ ಫೇಸ್ಲಿಫ್ಟ್ ಕಾರು ಆಕರ್ಷಕ ವಿನ್ಯಾಸವನ್ನು ಹೊಂದಿದೆ.
ರೆಡಿ ಗೋ ಫೇಸ್ಲಿಫ್ಟ್ ಕಾರು ಸ್ಲೀಮರ್ ಹೆಡ್ ಲ್ಯಾಂಪ್ ಸೇರಿದಂತೆ ಕಾರಿನ ಮುಂಭಾಗವನ್ನು ಟೀಸರ್ ಚಿತ್ರದಲ್ಲಿ ಪ್ರದರ್ಶಿಸಿದ್ದಾರೆ. ಹೊಸ ರೆಡಿ ಗೋ ಫೇಸ್ಲಿಫ್ಟ್ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಕಾರಿನ ಮುಂಭಾಗದಲ್ಲಿ ಕ್ರೋಮ್ ಸರೌಂಡ್ ನೊಂದಿಗೆ ದಟ್ಸನ್ ಲೋಗೊವನ್ನು ಅಳವಡಿಸಿದ್ದಾರೆ. ಹೊಸ ದಟ್ಸನ್ ರೆಡಿ ಗೋ ಫೇಸ್ಲಿಫ್ಟ್ ಕಾರಿನಲ್ಲಿ ದೊಡ್ಡ ಎಲ್ ಆಕಾರದ ಡಿಆರ್ಎಲ್ಗಳು ಹೊಂದಿದೆ.
MOST READ: 400 ಕಿ.ಮೀ ಮೈಲೇಜ್ ನೀಡುತ್ತದೆ ಟೊಯೊಟಾದ ಈ ಎಲೆಕ್ಟ್ರಿಕ್ ಕಾರು
ರೆಡಿ ಗೋ ಹಿಂದಿನ ಮಾದರಿಗೆ ಹೋಲಿಸಿದರೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ ಎಂದು ನಿರೀಕ್ಷಿಸುತ್ತೇವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಜಾರಿಗೆ ಬಂದ ಕ್ರ್ಯಾಶ್ ಟೆಸ್ಟ್ ನಿಯಮವನ್ನು ಅನುಸರಿಸಲು ಈ ಕಾರು ಹೊಸ ವಿನ್ಯಾಸವನ್ನು ಹೊಂದಿದೆ. ಈ ರೆಡಿ ಗೋ ಕಾರು ಹೊಸ ಬಿಎಸ್-6 ಮಾಲಿನ್ಯ ನಿಯಮವನ್ನು ಅನುಸರಿಸಲು ಇದು 800ಸಿಸಿ ಮತ್ತು 1.0 ಲೀಟರ್ ಎಂಜಿನ್ ಅನ್ನು ನವೀಕರಿಸಲಾಗಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ದಟ್ಸನ್ ರೆಡಿ ಗೋ ಕಾರು 0.8-ಲೀಟರ್ ಅಂದರೆ 799 ಸಿಸಿ ಅಥವಾ 1.0 ಲೀಟರ್ ಪೆಟ್ರೋಲ್ ಎಂಜಿನ್ಗಳನ್ನು ಹೊಂದಿದೆ. 799ಸಿಸಿ ಎಂಜಿನ್ 54 ಬಿಹೆಚ್ಪಿ ಹಾಗೂ 72 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.0 ಲೀಟರ್ ಎಂಜಿನ್ 68 ಬಿಹೆಚ್ಪಿ ಹಾಗೂ 91 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್
ಎರಡೂ ಎಂಜಿನ್ಗಳಲ್ಲಿ ಸ್ಟಾಂಡರ್ಡ್ 5 ಸ್ಪೀಡ್ ಗೇರ್ಬಾಕ್ಸ್ಗೆ ಅಳವಡಿಸಲಾಗಿದೆ. 1.0ಲೀಟರ್ ಎಂಜಿನ್ ಹೆಚ್ಚುವರಿಯಾಗಿ ಸ್ಮಾರ್ಟ್ ಡ್ರೈವ್ ಆಟೋ ಟ್ರಾನ್ಸ್ ಮಿಷನ್ ಹೊಂದಿರಲಿದೆ. ದಟ್ಸನ್ ರೆಡಿ ಗೋ ಅತ್ಯುತ್ತಮವಾದ ಫ್ಯೂಯಲ್ ಎಫಿಶಿಯನ್ಸಿ ಅಂಕಿಅಂಶಗಳನ್ನು ಹೊಂದಿದೆ.
ಹೊಸ ದಟ್ಸನ್ ರೆಡಿ ಗೋ ಕಾರಿನಲ್ಲಿ ಎಂಟು ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಪಿಯಾನೋ ಬ್ಲ್ಯಾಕ್ ಫಿನಿಶ್ ಮತ್ತು ಸಿಲ್ವರ್ ಬೆಜೆಲ್ಗಳು, ಎರಡು-ಟೋನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಮ್ಯಾನುವಲ್ ಆಗಿ ಹೊಂದಾಣಿಕೆ ಮಾಡಬಹುದಾದ ಮಿರರ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಸ್ಕಾರ್ಪಿಯೋ ಎಸ್ಯುವಿ
ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕವು ಹಳೆಯ ಮಾದರಿಯ ರೀತಿಯಲ್ಲೇ ಪವರ್ ಅನ್ನು ಉತ್ಪಾದಿಸಬಹುದು. ಹೊಸ ರೆಡಿ ಗೋ ಫೇಸ್ಲಿಫ್ಟ್ ಏರ್ಬ್ಯಾಗ್, ಇಬಿಡಿ ಹೊಂದಿರುವ ಎಬಿಎಸ್, ರೇರ್ ಪಾರ್ಕಿಂಗ್ ಅಸಿಸ್ಟ್ ಸೆನ್ಸಾರ್, ಹೈ ಸ್ಪೀಡ್ ವಾರ್ನಿಂಗ್, ಚಾಲಕ ಹಾಗೂ ಸಹ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ರಿಮ್ಯಾಂಡರ್ಗಳನ್ನು ಹೊಂದಿರಲಿದೆ.
ದಟ್ಸನ್ ಕಂಪನಿಯು ರೆಡಿ ಗೋ ಫೇಸ್ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ರೆನಾಲ್ಟ್ ಕ್ವಿಡ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ.