ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ದಟ್ಸನ್ ಕಂಪನಿಯು ತನ್ನ ಎಂಟ್ರಿ ಲೆವೆಲ್ ರೆಡಿ ಗೋ ಫೇಸ್‍‍ಲಿಫ್ಟ್ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ಹೊಸ ರೆಡಿ ಗೋ ಕಾರನ್ನು ಈ ವರ್ಷದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ದಟ್ಸನ್ ಕಂಪನಿಯು ರೆಡಿ ಗೋ ಫೇಸ್‍ಲಿಫ್ಟ್ ಕಾರನ್ನು ಬಿಡುಗಡೆಗೊಳಿಸುವ ಮೊದಲು ಭಾರತೀಯ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಹೊಸ ರೆಡಿ ಗೋ ಫೇಸ್‍ಲಿಫ್ಟ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಆಟೋಕಾರ್ ಇಂಡಿಯಾ ಬಹಿರಂಗಪಡಿಸಿದೆ. ಹೊಸ ಕಾರನ್ನು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಹೊಸ ರೆಡಿ ಗೋ ಫೇಸ್‍ಲಿಫ್ಟ್ ಕಾರು ಅಗ್ರೆಸಿವ್ ಲುಕ್ ಅನ್ನು ಹೊಂದಿದೆ ಎಂದು ನಿರೀಕ್ಷಿಸುತ್ತೇವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ರೆಡಿ ಗೋ ಹಿಂದಿನ ಮಾದರಿಗೆ ಹೋಲಿಸಿದರೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ ಎಂದು ನಿರೀಕ್ಷಿಸುತ್ತೇವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಜಾರಿಗೆ ಬಂದ ಕ್ರ್ಯಾಶ್ ಟೆಸ್ಟ್ ನಿಯಮವನ್ನು ಅನುಸರಿಸಲು ಈ ಕಾರು ಹೊಸ ವಿನ್ಯಾಸವನ್ನು ಹೊಂದಿರಲಿದೆ. ಈ ರೆಡಿ ಗೋ ಕಾರು ಹೊಸ ಬಿ‍ಎಸ್-6 ಮಾಲಿನ್ಯ ನಿಯಮವನ್ನು ಅನುಸರಿಸಲು ಇದು 800ಸಿಸಿ ಮತ್ತು 1.0 ಲೀಟರ್ ಎಂಜಿನ್ ಅನ್ನು ನವೀಕರಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ದಟ್ಸನ್ ರೆಡಿ ಗೋ ಕಾರು 0.8-ಲೀಟರ್ ಅಂದರೆ 799 ಸಿಸಿ ಅಥವಾ 1.0 ಲೀಟರ್ ಪೆಟ್ರೋಲ್ ಎಂಜಿನ್‍‍ಗಳನ್ನು ಹೊಂದಿದೆ. 799ಸಿಸಿ ಎಂಜಿನ್ 54 ಬಿಹೆಚ್‌ಪಿ ಹಾಗೂ 72 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.0 ಲೀಟರ್ ಎಂಜಿನ್ 68 ಬಿಹೆಚ್‌ಪಿ ಹಾಗೂ 91 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಎರಡೂ ಎಂಜಿನ್‌ಗಳಲ್ಲಿ ಸ್ಟಾಂಡರ್ಡ್ 5 ಸ್ಪೀಡ್ ಗೇರ್‌ಬಾಕ್ಸ್‌ಗೆ ಅಳವಡಿಸಲಾಗಿದೆ. 1.0ಲೀಟರ್ ಎಂಜಿನ್ ಹೆಚ್ಚುವರಿಯಾಗಿ ಸ್ಮಾರ್ಟ್ ಡ್ರೈವ್ ಆಟೋ ಟ್ರಾನ್ಸ್ ಮಿಷನ್ ಹೊಂದಿರಲಿದೆ. ದಟ್ಸನ್ ರೆಡಿ ಗೋ ಅತ್ಯುತ್ತಮವಾದ ಫ್ಯೂಯಲ್ ಎಫಿಶಿಯನ್ಸಿ ಅಂಕಿಅಂಶಗಳನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಎಂಜಿನ್ ಅನ್ನು ಬಿ‍ಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕವು ಹಳೆಯ ಮಾದರಿಯ ರೀತಿಯಲ್ಲೇ ಪವರ್ ಅನ್ನು ಉತ್ಪಾದಿಸಬಹುದು. ಬಿ‍ಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಇದೇ ಮಾದರಿಯ ಎಂಜಿನ್ ತನ್ನ ಪ್ರತಿ ಸ್ಪರ್ಧಿ ರೆನಾಲ್ಟ್ ಕ್ವಿಡ್ ನಲ್ಲಿ ಕಾಣಿಸಿಕೊಂಡಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಏರ್‍‍ಬ್ಯಾಗ್, ಇ‍‍ಬಿ‍‍ಡಿ ಹೊಂದಿರುವ ಎ‍‍ಬಿ‍ಎಸ್, ರೇರ್ ಪಾರ್ಕಿಂಗ್ ಅಸಿಸ್ಟ್ ಸೆನ್ಸಾರ್, ಹೈ ಸ್ಪೀಡ್ ವಾರ್ನಿಂಗ್, ಚಾಲಕ ಹಾಗೂ ಸಹ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ರಿಮ್ಯಾಂಡರ್‍‍ಗಳನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಹೊಸ ರೆಡಿ ಗೋ ಕಾರಿನಲ್ಲಿ ಎಲ್‍ಇ‍ಡಿ ಡಿಆರ್‍ಎಲ್‍, ದೊಡ್ಡ ಇನ್ಫೋಟೈನ್‍‍ಮೆಂಟ್ ಸಿಸ್ಟಂ ಜೊತೆಯಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಮತ್ತು ಟಾಕೊಮೀಟರ್ ಅನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ರೆಡಿ ಗೋ ಫೇಸ್‍‍ಲಿಫ್ಟ್ ಕಾರು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳುಸಲಾಗುತ್ತಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ರೆನಾಲ್ಟ್ ಕ್ವಿಡ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
Read more on ದಟ್ಸನ್ datsun
English summary
Datsun Redigo Facelift Spied Testing Ahead Of Launch. Read in Kananda.
Story first published: Tuesday, March 10, 2020, 11:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X