ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಪ್ರಕಟಿಸಿದ್ದಾರೆ. ಈಗ ಜಾರಿಗೊಳಿಸಲಾಗುತ್ತಿರುವ ಎಲೆಕ್ಟ್ರಿಕ್ ವಾಹನ ನೀತಿಯು ದೇಶದ ಅತ್ಯಂತ ಪ್ರಗತಿಪರ ಎಲೆಕ್ಟ್ರಿಕ್ ವಾಹನ ನೀತಿಯಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು ಈ ನೀತಿಯ ಮುಖ್ಯ ಉದ್ದೇಶವಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 3 ವರ್ಷಗಳ ಕಾಲ ಈ ಎಲೆಕ್ಟ್ರಿಕ್ ವಾಹನ ನೀತಿ ಜಾರಿಯಲ್ಲಿರಲಿದೆ. ನಂತರ ಈ ನೀತಿಯನ್ನು ಪರಿಶೀಲಿಸಲಾಗುವುದು. ಈ ನೀತಿಯು ಕೇಂದ್ರ ಸರ್ಕಾರದ ಫೇಮ್ -2 ಯೋಜನೆಯಡಿ ಇರಲಿದೆ ಎಂದು ಅವರು ಹೇಳಿದರು.

ಈ ನೀತಿಯಡಿ ದೆಹಲಿಯ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುವುದು. ಯಾವ ಪ್ರಕಾರದ ಎಲೆಕ್ಟ್ರಿಕ್ ವಾಹನ ಎಂಬ ಆಧಾರದ ಮೇಲೆ ಸಬ್ಸಿಡಿಯನ್ನು ನೀಡಲಾಗುವುದು. ಈ ನೀತಿಯಡಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಎಲೆಕ್ಟ್ರಿಕ್ ಆಟೋರಿಕ್ಷಾ ಹಾಗೂ ಇ-ರಿಕ್ಷಾಗಳ ಖರೀದಿಗೆ ರೂ.30,000 ರಿಯಾಯಿತಿ ನೀಡಲಾಗುವುದು.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ರೂ.1.5 ಲಕ್ಷಗಳ ರಿಯಾಯಿತಿ ನೀಡಲಾಗುವುದು. ಜೊತೆಗೆ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನಗಳ ರಸ್ತೆ ತೆರಿಗೆ ಹಾಗೂ ರಿಜಿಸ್ಟ್ರೇಷನ್ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು.

ಕಮರ್ಷಿಯಲ್ ಎಲೆಕ್ಟ್ರಿಕ್ ವಾಹನಗಳ ಮೇಲಿನ ಸಾಲದ ಬಡ್ಡಿಯನ್ನು ಸಹ ಮನ್ನಾ ಮಾಡಲಾಗುತ್ತದೆ. ದೆಹಲಿಯ ಎಲೆಕ್ಟ್ರಿಕ್ ವಾಹನ ನೀತಿಯನ್ನು ಕಾರ್ಯರೂಪಕ್ಕೆ ತರಲು ಸರ್ಕಾರವು ಕಳೆದ 2.5 ವರ್ಷಗಳಿಂದ ಸರ್ಕಾರ ಶ್ರಮಿಸುತ್ತಿದ್ದು, ಅನೇಕ ತಜ್ಞರನ್ನು ಸಂಪರ್ಕಿಸಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಹೊಸ ಎಲೆಕ್ಟ್ರಿಕ್ ವಾಹನ ನೀತಿಯು ಆರ್ಥಿಕತೆಯನ್ನು ಉತ್ತೇಜಿಸುವ ನಿರೀಕ್ಷೆಗಳಿವೆ. ದೆಹಲಿ ಸರ್ಕಾರವು ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಪ್ರತ್ಯೇಕವಾದ ಎಲೆಕ್ಟ್ರಿಕ್ ವೆಹಿಕಲ್ ಬೋರ್ಡ್, ಎಲೆಕ್ಟ್ರಿಕ್ ವೆಹಿಕಲ್ ಫಂಡ್ ಹಾಗೂ ಎಲೆಕ್ಟ್ರಿಕ್ ವೆಹಿಕಲ್ ಸೆಲ್ ಗಳನ್ನು ಸ್ಥಾಪಿಸಲಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಸರ್ಕಾರವು ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸುತ್ತಿದೆ. ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಎಲೆಕ್ಟ್ರಿಕ್ ವಾಹನಗಳು ರಿಜಿಸ್ಟರ್ ಆಗುವ ನಿರೀಕ್ಷೆಗಳಿವೆ ಎಂದು ಅವರು ಹೇಳಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಇದರ ಜೊತೆಗೆ ಸರ್ಕಾರವು ಪ್ರತಿ 3 ಕಿ.ಮೀಗಳಿಗೆ ಒಂದರಂತೆ ವರ್ಷಕ್ಕೆ 200 ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ದೆಹಲಿ ಸರ್ಕಾರವು ಹಳೆಯ ವಾಹನಗಳಿಗಾಗಿ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರಲಿದೆ. ಈ ನೀತಿಯಲ್ಲಿ ಹಳೆಯ ವಾಹನಕ್ಕೆ ಬದಲಿಗೆ ಹೊಸ ಎಲೆಕ್ಟ್ರಿಕ್ ವಾಹನವನ್ನು ನೀಡಲಾಗುವುದು ಎಂದು ಅವರು ಹೇಳಿದರು.


Click it and Unblock the Notifications