ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ ನೀಡಿದ ದೆಹಲಿ ಸರ್ಕಾರ

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಇತ್ತೀಚೆಗೆ ದೆಹಲಿ ಸರ್ಕಾರವು ಹೊಸ ಇವಿ ವಾಹನ ನೀತಿಯನ್ನು ಜಾರಿಗೊಳಿಸಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಹೊಸ ಇವಿ ವಾಹನ ನೀತಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆ ತೆರಿಗೆಯಿಂದ ವಿನಾಯ್ತಿ ನೀಡಿದ್ದು, 2025ರ ವೇಳೆಗೆ ಶೇ.25ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಹೊಂದುವ ಗುರಿಹೊಂದಲಾಗಿದೆ. ಸದ್ಯ ದೆಹಲಿಯಲ್ಲಿ ಶೇ. 029ರಷ್ಟು ಮಾತ್ರವೇ ಎಲೆಕ್ಟ್ರಿಕ್ ವಾಹನಗಳ ಓಡಾಡುತ್ತಿದ್ದು, ಪರಿಣಾಮಕಾಗಿಯಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಲು ಹೊಸ ಕ್ರಮ ಪ್ರಕಟಿಸಲಾಗಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ದೆಹಲಿ ಸರ್ಕಾರವು ಕೇಂದ್ರದ ಫೇಮ್ 2 ಯೋಜನೆಯ ಜೊತೆ ಜೊತೆಗೆ ರಾಜ್ಯ ಸರ್ಕಾರದ ಎಲೆಕ್ಟ್ರಿಕ್ ವಾಹನಗಳ ನೀತಿ ಹಲವಾರು ವಿನಾಯ್ತಿಗಳನ್ನು ಘೋಷಣೆ ಮಾಡಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಹೆಚ್ಚುತ್ತಿರುವ ಡೀಸೆಲ್ ಮತ್ತು ಪೆಟ್ರೋಲ್ ಚಾಲಿಕ ವಾಹನಗಳಿಂದಾಗಿ ದೆಹಲಿಯಲ್ಲಿ ಭಾರೀ ಪ್ರಮಾಣದ ಮಾಲಿನ್ಯ ಉತ್ಪತ್ತಿಯಾಗುತ್ತಿರುವ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು, ರಾಜ್ಯ ಇವಿ ವಾಹನ ನೀತಿ ಅಡಿ ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸಲಾಗುತ್ತಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ದೆಹಲಿ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ ರಸ್ತೆ ತೆರಿಗೆಯಿಂದಲೂ ವಿನಾಯ್ತಿ ನೀಡಿರುವ ಮಹತ್ವದ ನಿರ್ಧಾರವಾಗಿದೆ. ಇದು ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಪೂರಕವಾದ ಅಂಶವಾಗಿದ್ದು, ಗ್ರಾಹಕರು ಕೂಡಾ ಡೀಸೆಲ್ ಮತ್ತು ಪೆಟ್ರೋಲ್ ಬದಲಾಗಿ ಇವಿ ವಾಹನಗಳ ಖರೀದಿಯತ್ತ ಗಮಮಸೆಳೆಯಲು ಸಹಕಾರಿಯಾಗಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಹಾಗೆಯೇ ಇವಿ ವಾಹನಗಳ ಖರೀದಿಗೆ ಉತ್ತೇಜಿಸಲು ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಶೀಘ್ರದಲ್ಲೇ ಕನಿಷ್ಠ 200 ಇವಿ ನಿಲ್ದಾಣಗಳಿಗೆ ಚಾಲನೆ ನೀಡುವುದಾಗಿ ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಇವಿ ನೀತಿ ಅಡಿ ನಿರ್ಮಾಣ ಮಾಡಲಾಗುತ್ತಿರುವ ಹೊಸ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ದೆಹಲಿ ಮಾಹಾನಗರ ಪಾಲಿಕೆ, ದೆಹಲಿ ಅಭಿವೃದ್ದಿ ಪ್ರಾಧಿಕಾರ, ದೆಹಲಿ ಸಾರಿಗೆ ನಿಗಮ ಸಂಸ್ಥೆಗಳ ಅಧೀನದಲ್ಲಿರುವ ಕಚೇರಿಗಳ ಆವರಣಗಳಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ದರ ಪಟ್ಟಿಯನ್ನು ನಿಗದಿಪಡಿಸಲಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ದೆಹಲಿಯಲ್ಲಿ ಈಗಾಗಲೇ ಹಲವಾರು ಖಾಸಗಿ ಕಂಪನಿಗಳು ಖಾಸಗಿ ಪೆಟ್ರೋಲ್ ಬಂಕ್‌ಗಳೊಂದಿಗೆ ಜೊತೆಗೂಡಿ ಆಯ್ದ ಪ್ರದೇಶಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುತ್ತಿದ್ದು, ಇದೀಗ ದೆಹಲಿ ಸರ್ಕಾರವೇ ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿರುವುದು ಇವಿ ವಾಹನಗಳ ಬಳಕೆ ಹೆಚ್ಚಲು ಪ್ರಮುಖ ಕಾರಣವಾಗಲಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಸಹ ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರೆತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್‌ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಸ್ವಂತ ಬಳಕೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.

ದೆಹಲಿಯಲ್ಲಿ ಇವಿ ಮಾರಾಟ ಹೆಚ್ಚಳಕ್ಕಾಗಿ ಬೃಹತ್ ಯೋಜನೆಗೆ ಚಾಲನೆ

ಖಾಸಗಿ ಕಂಪನಿಗಳ ಅಧೀನದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲೂ ಕಡ್ಡಾಯವಾಗಿ 1 ಚಾರ್ಜಿಂಗ್ ಪಾಯಿಂಟ್ ತೆರೆಯುವಂತೆ ವಿವಿಧ ಪೆಟ್ರೋಲ್ ಪೂರೈಕೆ ಕಂಪನಿಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರದ ಇಂಧನ ಸಚಿವಾಲಯವು ಮುಂದಿನ ಒಂದು ವರ್ಷದಲ್ಲಿ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದೆ.

Article Published On: Monday, October 12, 2020, 20:57 [IST]
English summary
Delhi Government has announced road tax excemption on Battery-Operated electric vehicles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+