ರಾಜಧಾನಿ ದೆಹಲಿಯಲ್ಲಿ ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣಗಳು

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ವಿವಿಧ ರಾಜ್ಯ ಸರ್ಕಾರಗಳು ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಸಹಭಾಗೀತ್ವದಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದ್ದು, ದೆಹಲಿ ಸರ್ಕಾರವು ಸಹ ವಿವಿಧ ಸರ್ಕಾರಿ ಸಂಸ್ಥೆಗಳೊಂದಿಗೆ ಶೀಘ್ರದಲ್ಲೇ 200ಕ್ಕೂ ಇವಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡುತ್ತಿರುವುದಾಗಿ ಖಚಿತಪಡಿಸಿದೆ.

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಇತ್ತೀಚೆಗೆ ದೆಹಲಿ ಸರ್ಕಾರವು ಇವಿ ವಾಹನ ನೀತಿಯನ್ನು ಜಾರಿಗೊಳಿಸುವ ಮೂಲಕ ಎಲೆಕ್ಟ್ರಿಕ್ ಬಳಕೆಯನ್ನು ಉತ್ತೇಜಿಸಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದಕ್ಕೆ ಪೂರಕವಾಗಿ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಶೀಘ್ರದಲ್ಲೇ ಕನಿಷ್ಠ 200 ಇವಿ ನಿಲ್ದಾಣಗಳಿಗೆ ಚಾಲನೆ ನೀಡುವುದಾಗಿ ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ.

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಇವಿ ನೀತಿ ಅಡಿ ನಿರ್ಮಾಣ ಮಾಡಲಾಗುತ್ತಿರುವ ಹೊಸ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ದೆಹಲಿ ಮಾಹಾನಗರ ಪಾಲಿಕೆ, ದೆಹಲಿ ಅಭಿವೃದ್ದಿ ಪ್ರಾಧಿಕಾರ, ದೆಹಲಿ ಸಾರಿಗೆ ನಿಗಮ ಸಂಸ್ಥೆಗಳ ಅಧೀನದಲ್ಲಿರುವ ಕಚೇರಿಗಳ ಆವರಣಗಳಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ದರ ಪಟ್ಟಿಯನ್ನು ನಿಗದಿಪಡಿಸಲಿದೆ.

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ದೆಹಲಿಯಲ್ಲಿ ಈಗಾಗಲೇ ಹಲವಾರು ಖಾಸಗಿ ಕಂಪನಿಗಳು ಖಾಸಗಿ ಪೆಟ್ರೋಲ್ ಬಂಕ್‌ಗಳೊಂದಿಗೆ ಜೊತೆಗೂಡಿ ಆಯ್ದ ಪ್ರದೇಶಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುತ್ತಿದ್ದು, ಇದೀಗ ದೆಹಲಿ ಸರ್ಕಾರವೇ ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿರುವುದು ಇವಿ ವಾಹನಗಳ ಬಳಕೆ ಹೆಚ್ಚಲು ಪ್ರಮುಖ ಕಾರಣವಾಗಲಿದೆ.

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರೆತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್‌ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಸ್ವಂತ ಬಳಕೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಇದಕ್ಕಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಮುಂದಿನ ಕೆಲವೇ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್‌ಗಳು ಸೇರಿದಂತೆ ಖಾಸಗಿ ಕಂಪನಿಗಳ ಪೆಟ್ರೋಲ್ ಬಂಕ್‌ಗಳನ್ನು ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲು ನಿರ್ಧರಿಸಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಿವೆ 200 ಇವಿ ಚಾರ್ಜಿಂಗ್ ನಿಲ್ದಾಣ

ಖಾಸಗಿ ಕಂಪನಿಗಳ ಅಧೀನದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲೂ ಕಡ್ಡಾಯವಾಗಿ 1 ಚಾರ್ಜಿಂಗ್ ಪಾಯಿಂಟ್ ತೆರೆಯುವಂತೆ ವಿವಿಧ ಪೆಟ್ರೋಲ್ ಪೂರೈಕೆ ಕಂಪನಿಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರದ ಇಂಧನ ಸಚಿವಾಲಯವು ಮುಂದಿನ ಒಂದು ವರ್ಷದಲ್ಲಿ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದೆ.

Article Published On: Saturday, September 19, 2020, 14:34 [IST]
English summary
Delhi Government Working On Setting Up 200 New EV Charging Stations. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+