Just In
- 3 min ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 27 min ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 27 min ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 58 min ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾರಿಗೆ ವಾಹನಗಳ ವೇಗದ ಮಿತಿಯ ಬಗ್ಗೆ ಸ್ಪಷ್ಟನೆ ನೀಡಿದ ಹೈಕೋರ್ಟ್
ಭಾರತದಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಜೊತೆಗೆ ರಸ್ತೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಂದಾಗಿ ಪ್ರತಿ ವರ್ಷ ಸುಮಾರು 1.50 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಅಂಕಿ ಅಂಶಗಳಿಂದ ಕಂಡು ಬಂದಿದೆ.
ಸಂಚಾರಿ ನಿಯಮಗಳ ಉಲ್ಲಂಘನೆ, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ರಸ್ತೆ ಅಪಘಾತಗಳು ಸಂಭವಿಸುತ್ತವೆ. ವೇಗವಾಗಿ ವಾಹನ ಚಾಲನೆ ಮಾಡುವಾಗ ಏಕಾಏಕಿ ಯಾರಾದರೂ ಅಡ್ಡ ಬಂದರೆ ವಾಹನಗಳ ಮೇಲೆ ನಿಯಂತ್ರಣ ಸಿಗದೇ ಅಪಘಾತಗಳು ಸಂಭವಿಸುತ್ತವೆ. ಈ ಕಾರಣಕ್ಕೆ ಅತಿ ವೇಗವಾಗಿ ವಾಹನ ಚಾಲನೆ ಮಾಡುವವರಿಗೆ ಮೋಟಾರು ವಾಹನ ಕಾಯ್ದೆಯನ್ವಯ ದಂಡ ವಿಧಿಸಲಾಗುತ್ತದೆ.
ವಾಹನಗಳು ಇಂತಿಷ್ಟೇ ವೇಗದಲ್ಲಿ ಸಾಗಬೇಕು ಎಂದು ಹಲವು ರಾಜ್ಯ ಸರ್ಕಾರಗಳು ವೇಗದ ಮಿತಿಯನ್ನು ನಿಗದಿಪಡಿಸಿವೆ. ದೆಹಲಿ ರಾಜ್ಯ ಸರ್ಕಾರವು 2015ರ ಅಕ್ಟೋಬರ್ ನಂತರ ರಿಜಿಸ್ಟರ್ ಆದ ಸಾರಿಗೆ ವಾಹನಗಳು ಗಂಟೆಗೆ 40 ಕಿ.ಮೀಗಿಂತ ಕಡಿಮೆ ವೇಗವನ್ನು ಹೊಂದಿರಬೇಕು ಎಂಬ ಅಧಿಸೂಚನೆಯನ್ನು ಹೊರಡಿಸಿತ್ತು.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್
ಈ ಅಧಿಸೂಚನೆಯನ್ನು ಪ್ರಶ್ನಿಸಿ ಹಲವು ಸಂಘ, ಸಂಸ್ಥೆಗಳು ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದವು. ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಹಾಗೂ ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರಿಂದ ನ್ಯಾಯಪೀಠವು ದೆಹಲಿ ಸರ್ಕಾರದ ಅಧಿಸೂಚನೆಯನ್ನು ವಜಾಗೊಳಿಸಿದೆ.
ವಾಹನಗಳಿಗೆ ವೇಗದ ಮಿತಿಯನ್ನು ನಿಗದಿಪಡಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿಲ್ಲವೆಂದು ನ್ಯಾಯಪೀಠ ಹೇಳಿದೆ. ಪರಿಷ್ಕೃತ ಕೇಂದ್ರ ಮೋಟಾರು ವಾಹನ ನಿಯಮ 2015 ಹಾಗೂ ಮೋಟಾರು ವಾಹನ ಕಾಯ್ದೆ 1988ರಡಿಯಲ್ಲಿ ಸಾರಿಗೆ ವಾಹನಗಳ ವೇಗದ ಮಿತಿ ಭಿನ್ನವಾಗಿದೆ ಎಂದು ನ್ಯಾಯಪೀಠ ಹೇಳಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್
ಮೋಟಾರು ವಾಹನ ಕಾಯ್ದೆಯನ್ವಯ ಲಘು ಸಾರಿಗೆ ವಾಹನಗಳು ಪ್ರತಿ ಗಂಟೆಗೆ ಗರಿಷ್ಠ 80 ಕಿ.ಮೀ ವೇಗವನ್ನು ನಿಗದಿಪಡಿಸಿರುವ ಸ್ಪೀಡ್ ಗವರ್ನರ್ ಗಳನ್ನು ಹೊಂದಿರಬೇಕು ಎಂದು ಹೈಕೋರ್ಟ್ ನ್ಯಾಯಪೀಠ ಸ್ಪಷ್ಟಪಡಿಸಿದೆ.
ಈ ಗವರ್ನರ್‌ಗಳನ್ನು ವಾಹನಗಳನ್ನು ನಿರ್ಮಿಸುವ ಸಮಯದಲ್ಲಿಯೇ ವಾಹನಗಳಲ್ಲಿ ಅಳವಡಿಸಬೇಕು. ಇದರ ಜೊತೆಗೆ ಈ ಗವರ್ನರ್‌ಗಳನ್ನು ವಾಹನ ಮಾರಾಟಗಾರರು ಸಹ ಅಳವಡಿಸಬಹುದು. ಇದರ ನಂತರವೂ ಈ ವಾಹನಗಳ ಗರಿಷ್ಠ ವೇಗವನ್ನು ಗಂಟೆಗೆ 40 ಕಿ.ಮೀಗಿಂತ ಕಡಿಮೆಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಬಾರದು ಎಂದು ನ್ಯಾಯಪೀಠ ಹೇಳಿದೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ವೇಗದ ಮಿತಿಯ ಕುರಿತು ದೆಹಲಿ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ವಜಾಗೊಳಿಸಿದ ನ್ಯಾಯಪೀಠ, 2015ರ ಅಕ್ಟೋಬರ್ 01ರ ನಂತರ ನೋಂದಾಯಿಸಲಾದ ವಾಹನಗಳಲ್ಲಿ ಸ್ಪೀಡ್ ಗವರ್ನರ್‌ಗಳನ್ನು ಅಳವಡಿಸುವ ಬಗ್ಗೆ ಮೋಟಾರು ವಾಹನ ಕಾಯ್ದೆ ನಿಯಮ 118(1) ರಲ್ಲಿ ಹೇಳಲಾಗಿದೆ.
ಈ ನಿಯಮವೇ ಅಗತ್ಯವಿರುವ ವಿಶೇಷಣಗಳನ್ನು ಪೂರೈಸುತ್ತದೆ. ಅದನ್ನು ರಾಜ್ಯ ಸರ್ಕಾರಗಳು ನಿರ್ಧರಿಸುವಂತಿಲ್ಲ ಎಂದು ಹೇಳಿದೆ. ವಿವಿಧ ವರ್ಗದ ಸಾರಿಗೆ ವಾಹನಗಳಿಗೆ ವಿಭಿನ್ನ ವೇಗದ ಸ್ಪೀಡ್ ಗವರ್ನರ್‌ಗಳನ್ನು ಸಜ್ಜುಗೊಳಿಸಲು ಅವಕಾಶವಿತ್ತು.