ತ್ವರಿತಗೊಂಡ ದೇಶದ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ ಕಾಮಗಾರಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇ ನಿರ್ಮಾಣ ಯೋಜನೆಯಲ್ಲಿ ತೊಡಗಿರುವ ಕಂಪನಿಗಳಿಗೆ ಹಣಕಾಸು ಒದಗಿಸಲು ಆರಂಭಿಸಿದೆ. ಕಂಪನಿಗಳಿಗೆ ಹಣಕಾಸು ಒದಗಿಸಲು ಎನ್‌ಹೆಚ್‌ಎಐ ಸ್ಪೆಷಲ್ ಪರ್ಪಸ್ ವೆಹಿಕಲ್ ಗಳನ್ನು (ಎಸ್‌ಪಿವಿ) ರಚಿಸಿದೆ.

ತ್ವರಿತಗೊಂಡ ದೇಶದ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ ಕಾಮಗಾರಿ

1,250 ಕಿಮೀ ಉದ್ದದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ದೇಶದ ವಾಣಿಜ್ಯ ರಾಜಧಾನಿ ಮುಂಬೈ ನಗರಗಳ ನಡುವೆ ಸಂಪರ್ಕವನ್ನು ಕಲ್ಪಿಸುತ್ತದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿರವರು ಸುಷ್ಮಾ ಸ್ವರಾಜ್ ಹಾಗೂ ಅರುಣ್ ಜೇಟ್ಲಿರವರ ಜೊತೆಗೂಡಿ 2019ರ ಮಾರ್ಚ್ ತಿಂಗಳಿನಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದರು.

ತ್ವರಿತಗೊಂಡ ದೇಶದ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ ಕಾಮಗಾರಿ

ಈ ಎಕ್ಸ್‌ಪ್ರೆಸ್ ವೇ ಯೋಜನೆಯನ್ನು 2024ರ ವೇಳೆಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ 8 ಪಥಗಳಿಂದ ಕೂಡಿದ್ದು, ನಂತರ 12 ಪಥಗಳಿಗೆ ವಿಸ್ತರಿಸಲಾಗುವುದು. ಈ ಎಕ್ಸ್‌ಪ್ರೆಸ್ ವೇ ದೇಶದ ಮೊದಲ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಎಂದು ಹೇಳಲಾಗಿದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ತ್ವರಿತಗೊಂಡ ದೇಶದ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ ಕಾಮಗಾರಿ

ಈ ಎಕ್ಸ್‌ಪ್ರೆಸ್‌ ವೇಯಲ್ಲಿ ಸಂಚರಿಸುವ ವಾಹನಗಳು ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲಿಸುತ್ತವೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇಯನ್ನು ಭಾರತ್ ಮಾಲಾ ಯೋಜನೆಯಡಿಯಲ್ಲಿ ಸೇರಿಸಲಾಗಿದೆ. ಭಾರತ್ ಮಾಲಾ ಯೋಜನೆಯಡಿ ದೇಶಾದ್ಯಂತ 28,000 ಕಿ.ಮೀ ಎಕ್ಸ್‌ಪ್ರೆಸ್ ವೇ ಹಾಗೂ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ.

ತ್ವರಿತಗೊಂಡ ದೇಶದ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ ಕಾಮಗಾರಿ

ಎಕ್ಸ್‌ಪ್ರೆಸ್‌ ವೇಯ ಎರಡೂ ಬದಿಗಳಲ್ಲಿ ಪ್ರತಿ 50 ಕಿ.ಮೀ ಅಂತರದಲ್ಲಿ ಯೋಜಿತ ರೀತಿಯಲ್ಲಿ ಎಲ್ಲಾ ರೀತಿಯ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗುವುದು. ಈ ಯೋಜನೆಗಾಗಿ ರೂ.82,514 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಭೂಸ್ವಾಧೀನಕ್ಕಾಗಿ ರೂ.20,928 ಕೋಟಿ ವ್ಯಯಿಸಲಾಗುತ್ತಿದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ತ್ವರಿತಗೊಂಡ ದೇಶದ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ ಕಾಮಗಾರಿ

ಯೋಜನೆಯ ಮಹತ್ವವನ್ನು ನೋಡಿದ ಎನ್‌ಹೆಚ್‌ಎಐ ಪೂರ್ಣ ಷೇರುಗಳನ್ನು ಹೂಡಿಕೆ ಮಾಡಿ, ಅಭಿವೃದ್ಧಿ ಪಡಿಸಲು ಮುಂದಾಗಿದೆ. ಇತರ ದೊಡ್ಡ ಹೆದ್ದಾರಿ ಯೋಜನೆಗಳಿಗೂ ಇದೇ ರೀತಿಯ ಎಸ್‌ಪಿವಿಗಳನ್ನು ನಿರ್ಮಿಸಲು ಎನ್‌ಹೆಚ್‌ಎಐ ಚಿಂತಿಸುತ್ತಿದೆ.

ತ್ವರಿತಗೊಂಡ ದೇಶದ ಅತಿ ಉದ್ದದ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ ಕಾಮಗಾರಿ

ಮಾಹಿತಿಗಳ ಪ್ರಕಾರ, ಎಸ್‌ಪಿವಿಗಳು ದೊಡ್ಡ ಯೋಜನೆಗಳಿಗೆ ಸಹಕಾರಿಯಾಗಲಿವೆ. ಯೋಜನೆಯನ್ನು ಸಮಯಕ್ಕೆ ಪೂರ್ಣಗೊಳಿಸಲು ಇವುಗಳು ಎನ್‌ಹೆಚ್‌ಎಐಗೆ ಸಹಾಯ ಮಾಡುತ್ತವೆ.

ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.

Most Read Articles

Kannada
English summary
Delhi Mumbai greenfield expressway construction begins. Read in Kannada.
Story first published: Saturday, August 15, 2020, 10:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X