ಐದು ವರ್ಷಗಳಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಭಾರತದಲ್ಲಿ ಇಂಧನ ಬೇಡಿಕೆಯು ಕಳೆದ ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜುಲೈ ತಿಂಗಳಿನಲ್ಲಿ ದಾಖಲೆ ಸಂಖ್ಯೆಯಲ್ಲಿ ಕುಸಿತ ಕಂಡಿದೆ. ದೇಶದಲ್ಲಿ ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇದರಿಂದಾಗಿ ದೇಶದ ಹಲವು ಭಾಗಗಳಲ್ಲಿ ಆರ್ಥಿಕ ಚಟುವಟಿಕೆಗಳು ಸ್ತಬ್ಧಗೊಂಡಿವೆ.

ಐದು ವರ್ಷಗಳಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಇದರ ಜೊತೆಗೆ ಅನೇಕ ರಾಜ್ಯಗಳಲ್ಲಿ ಪ್ರವಾಹದಿಂದಾಗಿ ವ್ಯವಹಾರವು ಸ್ಥಗಿತಗೊಂಡಿದೆ. ಇನ್ನು ಕೆಲವೆಡೆ ರಸ್ತೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಎಲ್ಲಾ ಕಾರಣದಿಂದಾಗಿ ಜುಲೈ ತಿಂಗಳಿನಲ್ಲಿ ಇಂಧನ ಬಳಕೆಯ ಪ್ರಮಾಣವು 15.68 ದಶಲಕ್ಷ ಟನ್‌ಗಳಿಗೆ ಇಳಿದಿದೆ. ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಈ ವರ್ಷದ ಜುಲೈ ತಿಂಗಳಿನಲ್ಲಿ ಈ ಪ್ರಮಾಣವು 11.7%ನಷ್ಟು ಕಡಿಮೆಯಾಗಿದೆ. ಈ ವರ್ಷದ ಜೂನ್‌ ತಿಂಗಳಿಗೆ ಹೋಲಿಸಿದರೆ ಜುಲೈ ತಿಂಗಳಿನಲ್ಲಿ ಇಂಧನ ಬಳಕೆ ಪ್ರಮಾಣವು 3.5%ನಷ್ಟು ಕಡಿಮೆಯಾಗಿದೆ.

ಐದು ವರ್ಷಗಳಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಭಾರತದಲ್ಲಿ ಡೀಸೆಲ್ ಬಳಕೆ ಪ್ರಮಾಣವು ಮೂರನೇ ಎರಡರಷ್ಟಿದ್ದು, ಸಾರಿಗೆ ಹಾಗೂ ನೀರಾವರಿಗಳಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ಜೂನ್‌ ತಿಂಗಳಿನಲ್ಲಿ 6.31 ದಶಲಕ್ಷ ಟನ್‌ಗಳಷ್ಟಿದ್ದ ಡೀಸೆಲ್ ಮಾರಾಟ ಪ್ರಮಾಣವು ಜುಲೈ ತಿಂಗಳಿನಲ್ಲಿ 5.52 ದಶಲಕ್ಷ ಟನ್‌ಗಳಿಗೆ ಇಳಿದಿದೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಐದು ವರ್ಷಗಳಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ವರ್ಷದ ಆಧಾರದ ಮೇಲೆ, ಡೀಸೆಲ್ ಬೇಡಿಕೆ ಪ್ರಮಾಣವು ಕಳೆದ ವರ್ಷದ ಜುಲೈ ತಿಂಗಳಿಗಿಂತ 19.3%ನಷ್ಟು ಕಡಿಮೆಯಾಗಿದೆ. ಪೆಟ್ರೋಲ್ ಮಾರಾಟ ಪ್ರಮಾಣವು ಹಿಂದಿನ ವರ್ಷಕ್ಕಿಂತ 10.3%ಗಳಷ್ಟು ಕುಸಿದು 2.26 ದಶಲಕ್ಷ ಟನ್‌ಗಳಿಗೆ ತಲುಪಿದೆ. ಈ ವರ್ಷದ ಜೂನ್‌ ತಿಂಗಳಿನಲ್ಲಿ 2.28 ದಶಲಕ್ಷ ಟನ್‌ಗಳಾಗಿತ್ತು. ಜೂನ್ ತಿಂಗಳಿಗೆ ಹೋಲಿಸಿದರೆ 0.8%ನಷ್ಟು ಕುಸಿತವಾಗಿದೆ.

ಐದು ವರ್ಷಗಳಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಭಾರತವು ಇಂಧನ ಬಳಕೆಯಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಇಂಧನ ಬೆಲೆ ಒಂದೇ ಸಮನೆ ಏರಿಕೆ ಕಾಣುತ್ತಿದೆ. ಕರೋನಾ ವೈರಸ್ ಭಾರತದ ಜನ ಜೀವನವನ್ನು ತತ್ತರಿಸುವಂತೆ ಮಾಡಿದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಐದು ವರ್ಷಗಳಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಇದರ ಜೊತೆಗೆ ಭಾರೀ ಮಳೆಯಿಂದ ಉಂಟಾದ ಪ್ರವಾಹವು ಸಹ ಲಕ್ಷಾಂತರ ಜನರ ಮೇಲೆ ಪರಿಣಾಮವನ್ನು ಬೀರಿದೆ. ಈ ಎಲ್ಲಾ ಸಂಗತಿಗಳು ಭಾರತದ ಕೈಗಾರಿಕಾ ಹಾಗೂ ನಿರ್ಮಾಣ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿವೆ.

ಐದು ವರ್ಷಗಳಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ತೈಲ ಬೇಡಿಕೆ ಕಡಿಮೆಯಾಗುವುದರಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿಯು ತನ್ನ ಸಂಸ್ಕರಣಾಗಾರಗಳ ಸಾಮರ್ಥ್ಯವನ್ನು ಕಡಿಮೆಗೊಳಿಸುತ್ತದೆ ಎಂದು ಭಾರತದ ಟಾಪ್ ರಿಫೈನರಿ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಹೇಳಿದೆ.

Most Read Articles

Kannada
English summary
Demand for fuel falls says Indian oil corporation. Read in Kannada.
Story first published: Wednesday, August 12, 2020, 18:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X