ಇವಿ ಕಾರುಗಳಿಗೆ ಹೆಚ್ಚಿದ ಬೇಡಿಕೆ- ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

ಕಳೆದ ಕೆಲ ದಿನಗಳಿಂದ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ನಿಧಾನವಾಗಿ ಏರಿಕೆ ಕಾಣುತ್ತಿದ್ದು, ಸರ್ಕಾರಿ ಸ್ವಾಮ್ಯದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ದೇಶದ ವಿವಿಧಡೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೆಚ್ಚಿಸಲು ನಿರ್ಧರಿಸಿದೆ.

ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೇಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ. ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಇಇಎಸ್ಎಲ್ ಸಂಸ್ಥೆಯು ದೇಶದ ಪ್ರಮುಖ ನಗರಗಳಲ್ಲಿ 2 ಸಾವಿರ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದೆ.

ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

2020-21ರ ಹಣಕಾಸು ವರ್ಷದಲ್ಲಿ ಒಟ್ಟು 2 ಸಾವಿರ ಚಾರ್ಚಿಂಗ್ ಸ್ಟೇಷನ್‌ಗಳು ನಿರ್ಮಾಣಗೊಳ್ಳಲಿದ್ದು, ಆಯ್ದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಬಳಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ.

ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

ಇಇಎಸ್ಎಲ್ ಸಂಸ್ಥೆಯು ಈಗಾಗಲೇ ದೇಶದ ವಿವಿಧಡೆ 300 ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಾಣ ಮಾಡಿದ್ದು, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 10 ಸಾವಿರ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಾಣದ ಗುರಿಹೊಂದಿದೆ.

ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮೇಲೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೇಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿಗಳನ್ನು ನೀಡುತ್ತಿದ್ದು, ಹಲವಾರು ಆಟೋ ಉತ್ಪಾದನಾ ಕಂಪನಿಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.

ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

ಈ ಹಿನ್ನಲೆಯಲ್ಲಿ ನಗರದ ಪ್ರಮುಖ ಆಯ್ದ ಪ್ರದೇಶಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌‌ಗಳ ನಿರ್ಮಾಣವು ಜೋರಾಗಿದ್ದು, ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ಎಲೆಕ್ಟ್ರಿಕ್ ಕಾರು ಖರೀದಿದಾರರನ್ನು ಆಕರ್ಷಿಸುವುದರಲ್ಲಿ ಎರಡು ಮಾತಿಲ್ಲ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಶೀಘ್ರದಲ್ಲೇ 2 ಸಾವಿರ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಸಿದ್ದತೆ

ಇನ್ನು ಸರ್ಕಾರಿ ಸ್ವಾಮ್ಯದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯು ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳ ಅಧಿಕೃತ ವಾಹನಗಳನ್ನು ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಂತ ಹೆಚ್ಚಾಗಿ ಎಲೆಕ್ಟ್ರಿಕ್ ಕಾರುಗಳನ್ನೇ ಖರೀದಿ ಮಾಡುವ ಮೂಲಕ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಗಳಿಗೆ ಉತ್ತೇಜನ ನೀಡುತ್ತಿದೆ.

Most Read Articles

Kannada
English summary
EESL Plans To Setup 2000 Charging Facilities In India By Next-Year. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X