ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳು ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಸುಲಭವಾಗಿಸಲು ಸಬ್ಸಡಿ ಯೋಜನೆಗಳನ್ನು ಅಳವಡಿಸಿಕೊಂಡಿವೆ.

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ಭಾರತದಲ್ಲೂ ಸುಮಾರು 10 ಸಾವಿರ ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಖರೀದಿಯನ್ನು ಉತ್ತೇಜಿಸಲು ಫೇಮ್ 2 ಯೋಜನೆ ಮೂಲಕ ಗರಿಷ್ಠ ಸಬ್ಸಡಿ, ಜಿಎಸ್‌ಟಿ ವಿನಾಯ್ತಿ, ತೆರಿಗೆ ವಿನಾಯ್ತಿ ನೀಡಲಾಗುತ್ತಿದ್ದು, ಭಾರತದಲ್ಲಿ ಮಾತ್ರವಲ್ಲ ಹಲವು ರಾಷ್ಟ್ರಗಳು ತಮ್ಮದೆ ಆದ ಎಲೆಕ್ಟ್ರಿಕ್ ವಾಹನಗಳ ನೀತಿ ಮೂಲಕ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಮಾರಾಟ ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಆಕರ್ಷಿಸುತ್ತಿವೆ.

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ಕಾರು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಜರ್ಮನಿಯಲ್ಲೂ ಕೂಡಾ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆ ಕೈಗೊಳ್ಳಲಾಗಿದ್ದು, ಹೊಸ ಯೋಜನೆಗಳ ಪರಿಣಾಮ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರಮಾಣ ಸಾಕಷ್ಟು ಏರಿಕೆಯಾಗಿದೆ.

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ಆದರೆ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಮತ್ತು ಎಲೆಕ್ಟ್ರಿಕ್ ವಾಹನಗಳ ಬೆಲೆ ಹೆಚ್ಚಳದಿಂದಾಗಿ ನಿಗದಿತ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿಲ್ಲ. ಇದರಿಂದಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿಸುವ ಪ್ರೋತ್ಸಾಹಿಸುವ ಸಬ್ಸಡಿ ಯೋಜನೆಯನ್ನು 2025ರ ವರೆಗೆ ಮುಂದುವರಿಸುವುದಾಗಿ ಜರ್ಮನಿ ಸರ್ಕಾರವು ಸ್ಪಷ್ಟನೆ ನೀಡಿದೆ.

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ಸಬ್ಸಡಿ ಯೋಜನೆ ಅಡಿ ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಇವಿ ವಾಹನದ ಬೆಲೆ ಆಧಾರದ ಮೇಲೆ ಸಬ್ಸಡಿ ಮೂಲಕ ಹಣ ಹಿಂದಿರುಗಿಸಲಿದ್ದು, ಭಾರತದಲ್ಲೂ ಕೂಡಾ ಈಗಾಗಲೇ ಫೇಮ್ 2 ಯೋಜನೆ ಅಡಿ ಕೇಂದ್ರ ಸರ್ಕಾರವು ಸಬ್ಸಡಿ ಮತ್ತು ಜಿಎಸ್‌ಟಿ ವಿನಾಯ್ತಿ ನೀಡುತ್ತಿದೆ. ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯೊಂದೆ ಪ್ರಮುಖ ಪರಿಹಾರವಾಗಿದ್ದು, ಈ ಹಿನ್ನಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ಅತಿಯಾದ ಮಾಲಿನ್ಯವು ಹೊಸ ಹೊಸ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದು, ಮಾಲಿನ್ಯ ಸಮಸ್ಯೆಗೆ ಹಲವಾರು ಕಾರಣಗಳಿವೆ. ಇದರಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಬಳಕೆ ಕೂಡಾ ಪ್ರಮುಖ ಕಾರಣವಾಗಿದ್ದು, ಭವಿಷ್ಯದ ದೃಷ್ಠಿಯಿಂದ 2030ರ ವೇಳೆ ಹಲವು ರಾಷ್ಟ್ರಗಳು ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಮಾರಾಟ ಮಾಡಲು ಅವಕಾಶ ನೀಡಲಿವೆ.

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ಇದಕ್ಕಾಗಿಯೇ ಈಗಿನಿಂದಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಪ್ರೋತ್ಸಾಹಿಸಲಾಗುತ್ತಿದ್ದು, ಭಾರತದಲ್ಲೂ ಅತಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವ ಮಾಲಿನ್ಯ ಸಮಸ್ಯೆಗೆ ಎಲೆಕ್ಟ್ರಿಕ್ ವಾಹನ ಬಳಕೆಯು ಮಹತ್ವದ ಪರಿಹಾರ ಕ್ರಮವಾಗಲಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ದೆಹಲಿ ಸರ್ಕಾರವು ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯನ್ನು ಹೊರತುಪಡಿಸಿ ತನ್ನದೇ ಆದ ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಮಹತ್ವದ ಬದಲಾವಣೆಯತ್ತ ಹೆಜ್ಜೆಯಿರಿಸಿದ್ದು, ಫೇಮ್ 2 ಯೋಜನೆಗಿಂತಲೂ ಹೆಚ್ಚಿನ ಮಟ್ಟದ ಸಬ್ಸಡಿ ಯೋಜನೆಗಳನ್ನು ನೀಡುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ದೆಹಲಿ ಸರ್ಕಾರವು ಹೊಸ ಇವಿ ಪಾಲಿಸಿ ಅಡಿ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಸಬ್ಸಡಿ ಜೊತೆಗೆ ನೋಂದಣಿ ಶುಲ್ಕ ವಿನಾಯ್ತಿ, ರಸ್ತೆ ತೆರಿಗೆ ವಿನಾಯ್ತಿ ಸೇರಿದಂತೆ ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರ ಫೇಮ್ 2 ಯೋಜನೆ ಅಡಿಯಲ್ಲಿ ಜಿಎಸ್‌ಟಿ ವಿನಾಯ್ತಿ ಕೂಡಾ ಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ಕಾರುಗಳ ಖರೀದಿ ಹೆಚ್ಚಳಕ್ಕಾಗಿ ಮುಂದುವರೆಯಲಿದೆ ಸಬ್ಸಡಿ ಯೋಜನೆ

ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ಫೇಮ್ 2 ಜೊತೆ ದೆಹಲಿ ಮಾದರಿಯ ಇವಿ ಪಾಲಿಸಿಯು ಇತರೆ ರಾಜ್ಯಗಳು ಅಳವಡಿಸಿಕೊಳ್ಳುವ ಅವಶ್ಯಕತೆಯಿದ್ದು, ಭವಿಷ್ಯ ದೃಷ್ಠಿಯಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಸಾಕಷ್ಟು ಪ್ರಯೋಜನಕಾರಿಯಾಗಲಿದೆ.

Most Read Articles

Kannada
English summary
Electric Car Subsidies Extended Until 2025 In Germany. Read in Kannada.
Story first published: Tuesday, November 17, 2020, 14:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X