ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಇ-ಕಾಮರ್ಸ್‌ ಕ್ಷೇತ್ರದ ದೈತ್ಯ ಕಂಪನಿಗಳಲ್ಲಿ ಒಂದಾಗಿರುವ ಅಮೆಜಾನ್‌ ಇದೇ ಮೊದಲ ಬಾರಿಗೆ ಆಟೋ ಉದ್ಯಮಕ್ಕೂ ಕಾಲಿಡಲು ಸಿದ್ದವಾಗುತ್ತಿದ್ದು, ಜಗತ್ತಿನಾದ್ಯಂತ ಪೆಡಂಭೂತವಾಗಿ ಕಾಡುತ್ತಿರುವ ಮಾಲಿನ್ಯವನ್ನು ತಡೆಯುವುದಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದನೆ ಮಾಡುವುದಾಗಿ ಹೇಳಿಕೊಂಡಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

2030ರ ವೇಳೆಗೆ ವಿಶ್ವದ ಪ್ರಮುಖ ರಾಷ್ಟ್ರಗಳು ಹೆಚ್ಚುತ್ತಿರುವ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ತಗೆದುಕೊಳ್ಳುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳನ್ನು ತಗ್ಗಿಸುವುದಕ್ಕಾಗಿ ಎಲೆಕ್ಟ್ರಿಕ್ ವಾಹನ ಬಳಕೆಯತ್ತ ಹೆಚ್ಚು ಗಮನಹರಿಸುತ್ತಿವೆ. ಇದಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದನೆ ಮತ್ತು ಮಾರಾಟವನ್ನು ಉತ್ತೇಜಿಸಲು ಆಕರ್ಷಕ ಸಬ್ಸಡಿ, ಅತಿ ಕಡಿಮೆ ಜಿಎಸ್‌ಟಿ ಯೋಜನೆಗಳನ್ನು ಪರಿಚಯಿಸುತ್ತಿರುವುದು ಮಹತ್ವದ ಬದಲಾವಣೆ ಕಾರಣವಾಗುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೆಚ್ಚಿಸಲು ಜಾರಿಗೆ ತಂದಿರುವ ಫೇಮ್ 2 ಯೋಜನೆಯು ಇದೀಗ ವಾಹನ ಉದ್ಯಮದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದು, ಇ-ಕಾಮರ್ಸ್‌ ಕ್ಷೇತ್ರದ ದೈತ್ಯ ಅಮೆಜಾನ್ ಕೂಡಾ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಆಸಕ್ತಿ ವಹಿಸಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

3 ದಿನಗಳ ಕಾಲ ಭಾರತ ಪ್ರವಾಸದಲ್ಲಿದ್ದ ಅಮೆಜಾನ್ ಸಿಇಒ ಜೆಫ್ ಬೆಜೋಸ್ ಅವರೇ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಭಾರತದಲ್ಲಿ ಹೆಚ್ಚಿರುವ ಮಾಲಿನ್ಯವನ್ನು ತಡೆಯಲು ಅಮೆಜಾನ್ ಬದ್ದವಾಗಿದೆ ಎಂದಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಮಾಲಿನ್ಯವನ್ನು ತಡೆಯಲು ಮೊದಲಿಗೆ ವ್ಯವಸ್ಥೆಯ ಬದಲಾವಣೆ ಮುಖ್ಯವಾಗಿದ್ದು, ಅಮೆಜಾನ್ ಸಂಸ್ಥೆಯೇ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ರಿಕ್ಷಾಗಳನ್ನು ಪರಿಚಯಿಸುವ ಮೂಲಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡುವ ಯೋಜನೆ ಹಮ್ಮಿಕೊಂಡಿರುವುದಾಗಿ ಜೆಫ್ ಬೆಜೋಸ್ ಅವರು ಸುದ್ದಿ ಸಂಸ್ಥೆಗಳ ಸಂದರ್ಶನದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಇನ್ನು ಭಾರತದಲ್ಲಿ ಈಗಾಗಲೇ ಕೆನಿಟಿಕ್, ಹೀರೋ ಮತ್ತು ಮಹೀಂದ್ರಾ ಮತ್ತು ಪಿಯಾಜಿಯೋ ಸೇರಿದಂತೆ ಹಲವು ವಾಹನ ಉತ್ಪಾದನಾ ಸಂಸ್ಥೆಗಳು ಇ-ರಿಕ್ಷಾ ಮಾರಾಟ ಮಾಡುತ್ತಿದ್ದು, ಚಾರ್ಜಿಂಗ್ ಸ್ಟೆಷನ್‌ಗಳ ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಬಹುತೇಕ ಗ್ರಾಹಕರು ಇವಿ ವಾಹನಗಳ ಖರೀದಿ ಯೋಜನೆಯಿಂದ ಹಿಂದೆ ಸರಿಯುತ್ತಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಆಕರ್ಷಕ ಬಡ್ಡಿದರಗಳಲ್ಲಿ ಸಾಲ ಸೌಲಭ್ಯದ ಜೊತಗೆ ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಗಳನ್ನು ಘೋಷಣೆ ಮಾಡಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಜೊತೆಗೆ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ಸಹ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಫೇಮ್ 2 ಯೋಜನೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಬೆಳವಣಿಗಾಗಿ ರೂ. 10 ಸಾವಿರ ಕೋಟಿ ಮೀಸಲು ಇರಿಸಲಾಗಿದ್ದು, 2018-19, 2019-20 ಮತ್ತು 2020-21ರ ಆರ್ಥಿಕ ವರ್ಷದ ಅವಧಿಗಾಗಿ ಈ ಮೀಸಲು ಹಣವನ್ನು ಖರ್ಚು ಮಾಡಲು ನಿರ್ಧರಿಸಲಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆಗೆ ಸಿದ್ದವಾದ ಅಮೆಜಾನ್

ಈ ಮೂಲಕ 2030ರ ವೇಳೆಗೆ ಶೇ.100 ರಷ್ಟು ವಾಹನಗಳನ್ನು ರಸ್ತೆಗಿಳಿಸಬೇಕೆಂಬ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ವಾಹನ ಉತ್ಪಾದನಾ ಸಂಸ್ಥೆಗಳು ಕೈಜೋಡಿಸಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಪ್ರಯಾಣಿಕ ಬಳಕೆಯ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಸಾರ್ವಜನಿಕ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಪರಿಚಯಿಸುತ್ತಿವೆ.

Most Read Articles

Kannada
English summary
Amazon is Building Electric Rickshaws in India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X