1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ. ಅನೇಕ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಕಾಲಿಟ್ಟಿವೆ. ದಿನೇ ದಿನೇ ಹೆಚ್ಚುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ ಹಾಗೂ ವಾಯುಮಾಲಿನ್ಯದಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಕಳೆದ ಮೂರು ವರ್ಷಗಳಲ್ಲಿ ಭಾರತದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು 1360%ನಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಮಹಾರಾಷ್ಟ್ರ ರಾಜ್ಯವು 407%ನಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಇದು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ತೋರಿಸುತ್ತದೆ. ಮಹಾರಾಷ್ಟ್ರದ ಸಾರಿಗೆ ಇಲಾಖೆಯು ಬಿಡುಗಡೆಗೊಳಿಸಿರುವ ಅಂಕಿ ಅಂಶಗಳ ಪ್ರಕಾರ 2017 - 2018ರಲ್ಲಿ 1,459 ಎಲೆಕ್ಟ್ರಿಕ್ ಕಾರು ಹಾಗೂ ಬೈಕುಗಳನ್ನು ರಿಜಿಸ್ಟರ್ ಮಾಡಲಾಗಿದೆ.

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಈ ಅಂಕಿ-ಅಂಶವು 2019 - 2020ರಲ್ಲಿ 7,400 ಯುನಿಟ್‌ಗಳಿಗೆ ಏರಿದೆ. ಮುಂಬೈನಲ್ಲಿ 2017 - 2018ರಲ್ಲಿ 46 ಯುನಿಟ್ ಹಾಗೂ 2019 - 2020ರಲ್ಲಿ 672 ಯುನಿಟ್ ಗಳನ್ನು ಮಾರಾಟ ಮಾಡಲಾಗಿದೆ.

MOST READ:ಒಂದು ಸಾವಿರ ರೂಪಾಯಿ ಪಾವತಿಸಿ ಈ ಸ್ಕೂಟರ್ ಬುಕ್ ಮಾಡಿ

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಮುಂಬಯಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಉಪನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಶೋರೂಂಗಳು ತಲೆ ಎತ್ತುತ್ತಿವೆ. ಇದೊಂದು ಒಳ್ಳೆಯ ಬೆಳೆವಣಿಗೆ ಎಂದು ಸಾರಿಗೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಎಲೆಕ್ಟ್ರಿಕ್ ವಾಹನಗಳು ಶಬ್ದವಿಲ್ಲದೆ ಚಲಿಸುತ್ತವೆ. ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಇದು ಸಹ ಒಂದು ಕಾರಣವಾಗಿದೆ. ಪೆಟ್ರೋಲ್ - ಡೀಸೆಲ್ ಕಾರಿಗಳಲ್ಲಿ ಒಂದು ಕಿ.ಮೀ ಪ್ರಯಾಣಕ್ಕೆ 3-4 ರೂಪಾಯಿ ವೆಚ್ಚವಾದರೆ, ಎಲೆಕ್ಟ್ರಿಕ್ ಕಾರುಗಳಲ್ಲಿ ಕೇವಲ 50 ಪೈಸೆ ಖರ್ಚಾಗುತ್ತದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಸಾಮಾನ್ಯ ಎಲೆಕ್ಟ್ರಿಕ್ ಕಾರು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದರೆ ಸರಾಸರಿ 120 ಕಿ.ಮೀ ದೂರಗಳಷ್ಟು ಚಲಿಸುತ್ತದೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಮೆಂಟೆನೆನ್ಸ್ ಸಮಸ್ಯೆ ಇರುವುದಿಲ್ಲ.

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಎಲೆಕ್ಟ್ರಿಕ್ ವಾಹನಗಳ ಖರೀದಿ, ನೋಂದಣಿ ಮುಂತಾದವುಗಳಿಗೆ ಸರ್ಕಾರಗಳು ವಿವಿಧ ರಿಯಾಯಿತಿಗಳನ್ನು ನೀಡುತ್ತವೆ. ಈ ಕಾರಣದಿಂದಾಗಿ ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್ ಡೀಸೆಲ್ ವಾಹನಗಳಿಗಿಂತ ಉತ್ತಮ ಆಯ್ಕೆಯಾಗಿವೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಮುಂಬೈನಲ್ಲಿ 2017-18ರಲ್ಲಿ 46, 2018-19ರಲ್ಲಿ 132 ಹಾಗೂ 2019-20ರಲ್ಲಿ 672 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ. ಮಹಾರಾಷ್ಟ್ರದಲ್ಲಿ 2017-18ರಲ್ಲಿ 1459, 2018-19ರಲ್ಲಿ 6300 ಹಾಗೂ 2019-20ರಲ್ಲಿ 7400 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ.

1360%ನಷ್ಟು ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣ

ಇತ್ತೀಚೆಗೆ ದೆಹಲಿಯಲ್ಲಿ ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದು ಎಲೆಕ್ಟ್ರಿಕ್ ವಾಹನಗಳಿಗೆ ಅನೇಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿಯೂ ಇದೇ ರೀತಿಯ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೆ ಬಂದರೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

Most Read Articles

Kannada
English summary
Electric vehicle sales increased 1360 percent in Mumbai. Read in Kannada.
Story first published: Saturday, August 22, 2020, 15:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X