Just In
Don't Miss!
- News
ಖಾತೆ ಹಂಚಿಕೆ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡ ಎಲೆಕ್ಟ್ರಿಕ್ ವಾಹನ ಮಾರಾಟ
2020 ಎಲೆಕ್ಟ್ರಿಕ್ ವಾಹನಗಳ ಪಾಲಿಗೆ ಉತ್ತಮವಾಗಿದ್ದು, ಎಲೆಕ್ಟ್ರಿಕ್ ವಾಹನಗಳು ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿವೆ. 2020ರಲ್ಲಿ ಹಲವು ಕಂಪನಿಗಳು ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಿವೆ.

ಸದ್ಯಕ್ಕೆ ಭಾರತದಲ್ಲಿ ಎಂಜಿ ಮೋಟಾರ್, ಟಾಟಾ ಮೋಟಾರ್ಸ್, ಹ್ಯುಂಡೈ ಹಾಗೂ ಮಹೀಂದ್ರಾ ಅಂಡ್ ಮಹೀಂದ್ರಾದಂತಹ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿವೆ. ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಜನಪ್ರಿಯ ಹೆಚ್ಚುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ.

ಭಾರತದಲ್ಲಿ ಟಾಟಾ ಮೋಟಾರ್ಸ್ ಕಂಪನಿಯ ನೆಕ್ಸಾನ್ ಇವಿ, ಟಿಗೋರ್, ಎಂಜಿ ಮೋಟಾರ್ಸ್ ಕಂಪನಿಯ ಝಡ್ಎಸ್ ಇವಿ, ಹ್ಯುಂಡೈ ಕಂಪನಿಯ ಕೋನಾ ಇವಿ, ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಇ-ವೆರಿಟೊ ಕಾರುಗಳನ್ನು ಮಾರಾಟ ಮಾಡಲಾಗುತ್ತಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಇವುಗಳಲ್ಲಿ ನೆಕ್ಸಾನ್ ಇವಿಯು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಮಾರಾಟವು ಸ್ಥಿರವಾಗಿ ಏರಿಕೆಯಾಗುತ್ತಿದೆ. ಟಾಟಾ ನೆಕ್ಸಾನ್ ಇವಿಯು ಮೇ ತಿಂಗಳಿನಲ್ಲಿ 78, ಜೂನ್ ತಿಂಗಳಿನಲ್ಲಿ 188, ಜುಲೈ ತಿಂಗಳಿನಲ್ಲಿ 286, ಆಗಸ್ಟ್ ತಿಂಗಳಿನಲ್ಲಿ 296 ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ 303 ಯೂನಿಟ್ ಗಳಷ್ಟು ಮಾರಾಟವಾಗಿದೆ.

ಇನ್ನು ಎಂಜಿ ಮೋಟಾರ್ಸ್ ಕಂಪನಿಯ ಝಡ್ಎಸ್ ಇವಿ ಮೇ ತಿಂಗಳಲ್ಲಿ 38, ಜೂನ್ ತಿಂಗಳಿನಲ್ಲಿ 145, ಜುಲೈ ತಿಂಗಳಿನಲ್ಲಿ 85, ಆಗಸ್ಟ್ ತಿಂಗಳಿನಲ್ಲಿ 119 ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ 127 ಯುನಿಟ್ ಗಳಷ್ಟು ಮಾರಾಟವಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈ ಎರಡೂ ವಾಹನಗಳ ಮಾರಾಟವು ಭಾರತದಲ್ಲಿ ಹೆಚ್ಚಾಗುತ್ತಿರುವ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಸೂಚಿಸುತ್ತವೆ. 2020ರ ಮೇ ಹಾಗೂ ಸೆಪ್ಟೆಂಬರ್ ತಿಂಗಳ ನಡುವೆ ದೇಶಾದ್ಯಂತ ಒಟ್ಟು 1874 ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗಿವೆ.

ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹಾಗೂ ಚಾರ್ಜರ್ ಖರೀದಿಗೆ ಫೇಮ್ -2 ಯೋಜನೆಯಡಿಯಲ್ಲಿ ರಿಯಾಯಿತಿ ನೀಡಲಾಗುತ್ತದೆ. ಇದರ ಜೊತೆಗೆ ರಾಜ್ಯ ಸರ್ಕಾರಗಳು ಸಹ ಹಲವು ರಿಯಾಯಿತಿಗಳನ್ನು ನೀಡುತ್ತವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ದೆಹಲಿ, ಕರ್ನಾಟಕ ಹಾಗೂ ರಾಜಸ್ಥಾನದಂತಹ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತರಲಾಗಿದೆ. ಇದರ ಅಡಿಯಲ್ಲಿ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ಖರೀದಿಗೆ ವಿವಿಧ ರೀತಿಯ ರಿಯಾಯಿತಿಯನ್ನು ನೀಡುತ್ತವೆ.

ಈ ರಿಯಾಯಿತಿಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿವೆ. ಇವುಗಳಲ್ಲಿ ಉಚಿತ ಚಾರ್ಜರ್ ಹಾಗೂ ಉಚಿತ ನೋಂದಣಿಗಳು ಸೇರಿವೆ. ಇನ್ನು ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬಗ್ಗೆ ಹೇಳುವುದಾದರೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದಲ್ಲಿಯೂ ಭಾರಿ ಪ್ರಮಾಣದ ಏರಿಕೆ ಕಂಡುಬಂದಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಥರ್, ರಿವೋಲ್ಟ್ ಸೇರಿದಂತೆ ಹಲವು ಹೊಸ ಕಂಪನಿಗಳು ಹಾಗೂ ಕೆಲವು ಹಳೆಯ ಕಂಪನಿಗಳು ಈ ಸೆಗ್ ಮೆಂಟಿಗೆ ಕಾಲಿಟ್ಟಿವೆ. ಈ ಕಂಪನಿಗಳು ಹಲವು ನಗರಗಳಲ್ಲಿ ತಮ್ಮ ವಾಹನಗಳನ್ನು ಮಾರಾಟ ಮಾಡುತ್ತಿದ್ದು, ಹಲವೆಡೆ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಿವೆ.

ಹೆಚ್ಚಿನ ಸಂಖ್ಯೆಯ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವಂತೆ ಮಾಡಲು ದೇಶದ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜರ್‌ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರವು ಇತ್ತೀಚೆಗೆ ಘೋಷಿಸಿದೆ. 2021 ಎಲೆಕ್ಟ್ರಿಕ್ ವಾಹನಗಳ ಪಾಲಿಗೆ ಕ್ರಾಂತಿಕಾರಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.