ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳು ಖರೀದಿಗೆ ಲಭ್ಯವಿದ್ದು, ಬಹುತೇಕ ಇವಿ ಕಾರುಗಳು ಸಾಮಾನ್ಯ ಕಾರು ಮಾದರಿಗಿಂತಲೂ ಎರಡು ಪಟ್ಟು ದುಬಾರಿ ಬೆಲೆ ಹೊಂದಿವೆ. ಇದರಿಂದ ಎಲೆಕ್ಟ್ರಿಕ್ ಕಾರು ಮಾರಾಟವು ಮಂದಗತಿಯಲ್ಲಿ ಸಾಗಿದ್ದು, ಎಲೆಕ್ಟ್ರಿಕ್ ಕಾರುಗಳ ಬೆಲೆ ಇಳಿಕೆಗೆ ನೀತಿ ಆಯೋಗವು ಹೊಸ ಯೋಜನೆ ರೂಪಿಸುತ್ತಿದೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳು ಮಾಲಿನ್ಯ ತಗ್ಗಿಸುವ ಉದ್ದೇಶದಿಂದ 2030ರ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಮುಂದಾಗಿದ್ದು, ಕೇಂದ್ರ ಸರ್ಕಾರವು ಸಹ ಇದೇ ನಿಟ್ಟಿನಲ್ಲಿ ಯೋಜನೆ ರೂಪಿಸಿರುವುದಲ್ಲದೇ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಫೇಮ್ 1 ಮತ್ತು ಫೇಮ್ 2 ಯೋಜನೆಗಳ ಮೂಲಕ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮಾಡುವ ಕಂಪನಿಗಳಿಗೆ ಮಾತ್ರವಲ್ಲದೇ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ನೀಡುತ್ತಿದೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ಫೇಮ್ ಯೋಜನೆಯ ಆಫರ್‌ಗಳ ಹೊರತಾಗಿಯೂ ಎಲೆಕ್ಟ್ರಿಕ್ ವಾಹನಗಳ ಮಾರಾಟವು ನಿಗದಿತ ಮಟ್ಟಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಮಾರಾಟವಾಗುತ್ತಿದ್ದು, ಈ ಕುರಿತು ನೀತಿ ಆಯೋಗವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ಎಲೆಕ್ಟ್ರಿಕ್ ವಾಹನಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯ ಬೆಲೆ ತಗ್ಗಿಸಲು ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದ್ದು, ಭಾರತದಲ್ಲೇ ಉತ್ಪಾದನೆ ಮಾಡಲು ಈಗಾಗಲೇ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿವೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ಲೀಥಿಯಂ ಬ್ಯಾಟರಿ ಸಂಪನ್ಮೂಲಕ್ಕಾಗಿ ಶೇ.100ರಷ್ಟು ಚೀನಿ ಮತ್ತು ತೈವಾನ್ ಮಾರುಕಟ್ಟೆಗಳನ್ನೇ ಅವಂಭಿಸಿರುವ ಭಾರತದ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಸಂಸ್ಥೆಗಳು ಸ್ಥಳೀಯವಾಗಿ ಅಭಿವೃದ್ದಿಗೊಳಿಸಲಾದ ಲೀಥಿಯಂ ಅಯಾನ್ ಬ್ಯಾಟರಿ ಸಂಪನ್ಮೂಲಕ್ಕಾಗಿ ಎದುರು ನೋಡುತ್ತಿದ್ದು, ಸದ್ಯ ಹೊಸ ಬ್ಯಾಟರಿ ಉತ್ಪಾದನಾ ಘಟಕಗಳ ನಿರ್ಮಾಣದ ಹೂಡಿಕೆ ಮಾಡುತ್ತಿರುವ ಆಟೋ ಉತ್ಪಾದನಾ ಸಂಸ್ಥೆಗಳು ಮುಂದಿನ ಎರಡು ವರ್ಷಗಳ ಅವಧಿಯೊಳಗೆ ಬ್ಯಾಟರಿ ಪೂರೈಕೆಗೆ ಸಿದ್ದವಾಗಲಿವೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ತದನಂತರವಷ್ಟೇ ಎಲೆಕ್ಟ್ರಿಕ್ ಕಾರುಗಳು ಮತ್ತು ದ್ವಿಚಕ್ರ ವಾಹನಗಳ ಬೆಲೆ ಇಳಿಕೆಯನ್ನು ನೀರಿಕ್ಷಿಸಲಾಗುತ್ತಿದ್ದು, ಭಾರತದಲ್ಲಿ ಸದ್ಯ ನಿರ್ಮಾಣವಾಗುತ್ತಿರುವ ಬ್ಯಾಟರಿ ಉತ್ಪಾದನಾ ಸಂಸ್ಥೆಗಳಿಗೆ ಪೂರಕವಾಗಿ ಮತ್ತಷ್ಟು ಹೊಸ ಸರಳ ನೀತಿ ನಿಯಮಗಳನ್ನು ಜಾರಿಗೆ ತರುವುದಾಗಿ ನೀತಿ ಆಯೋಗವು ಭರವಸೆ ನೀಡಿದೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

2030ರ ವೇಳೆ ಡೀಸೆಲ್-ಪೆಟ್ರೋಲ್ ವಾಹನಗಳನ್ನು ತಗ್ಗಿಸಲು ಈಗಿನಿಂದಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸಲೇಬೇಕಿದ್ದು, ಪ್ರಮುಖವಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿನ ಬದಲಾವಣೆಗಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಅನಿರ್ವಾಯವಿರುವುದಾಗಿ ನೀತಿ ಆಯೋಗವು ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ಹೊಸ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳನ್ನು ಎಲೆಕ್ಟ್ರಿಕ್‌ನತ್ತ ಬದಲಾಯಿಸುವ ಬಗ್ಗೆಯು ಮಾತನಾಡಿರುವ ನೀತಿ ಆಯೋಗವು ಬ್ಯಾಟರಿ ಉತ್ಪಾದನಾ ಸಂಸ್ಥೆಗಳಿಗೆ ಅಗತ್ಯ ಸೌಲಭ್ಯದ ಜೊತೆಗೆ ಉತ್ಪಾದನಾ ನಿಯಮಗಳನ್ನು ಮತ್ತಷ್ಟು ಸರಳಗೊಳಿಸುವುದಾಗಿ ಭರವಸೆ ನೀಡಿದೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ಒಟ್ಟಿನಲ್ಲಿ 2025ರ ವೇಳೆಗೆ ಶೇ.70ರಷ್ಟು ಎಲೆಕ್ಟ್ರಿಕ್ ವಾಹನಗಳೇ ಮಾರಾಟ ಮಾಡುವಂತೆ ಯೋಜನೆ ಜಾರಿಗೆ ತರಲಾಗುತ್ತಿದ್ದು, ಸ್ಥಳೀಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಬಳಕೆ ಶುರುವಾದಲ್ಲಿ ಎಲೆಕ್ಟ್ರಿಕ್ ಕಾರುಗಳ ಬೆಲೆಯು ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ.

ಶೀಘ್ರದಲ್ಲೇ ಡೀಸೆಲ್ ಕಾರುಗಳಿಂತಲೂ ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ..!

ಇನ್ನು ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸಲು ಫೇಮ್-2 ಯೋಜನೆ ಅಡಿ ಕೇಂದ್ರ ಸರ್ಕಾರವು 2019-21ರ ಅವಧಿಗಾಗಿ ರೂ.10 ಸಾವಿರ ಕೋಟಿ ಬಿಡುಗಡೆ ಮಾಡಿದ್ದು, ಎಲೆಕ್ಟ್ರಿಕ್ ವಾಹನ ಖರೀದಿಗೆ ಆಕರ್ಷಕ ಸಬ್ಸಡಿ, ತೆರಿಗೆ ವಿನಾಯ್ತಿ, ಅತಿ ಕಡಿಮೆ ಜಿಎಸ್‌ಟಿ ಮತ್ತು ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಮಾಡುವ ಖಾಸಗಿ ಸಂಸ್ಥೆಗಳಿಗೆ ಶೀಘ್ರ ಸಾಲಗಳ ಜೊತೆ ಆಕರ್ಷಕ ಸಬ್ಸಡಿ ಸಹ ನೀಡಲಾಗುತ್ತಿದೆ.

Article Published On: Monday, February 3, 2020, 11:41 [IST]
English summary
EV Prices Will Come Cheaper Than Combustion Vehicles With 3 Years. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+