Just In
Don't Miss!
- News
ಖಾತೆ ಹಂಚಿಕೆ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೈತರ ಪ್ರತಿಭಟನೆಯಿಂದಾಗಿ ಅಸ್ತವ್ಯಸ್ತಗೊಂಡ ಸಂಚಾರ ವ್ಯವಸ್ಥೆ
ದೆಹಲಿ - ನೋಯ್ಡಾ ಗಡಿಯಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ರಾಷ್ಟ್ರೀಯ ಹೆದ್ದಾರಿ 44 ಅನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. ಇದರಿಂದಾಗಿ ದೆಹಲಿಯಲ್ಲಿ ವ್ಯಾಪಕ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ 44ರ ಮೂಲಕ ದೆಹಲಿಯ ಜೊತೆಗೆ ಸಂಪರ್ಕ ಸಾಧಿಸುತ್ತಿದ್ದ ಹರಿಯಾಣ ಹಾಗೂ ಉತ್ತರ ಪ್ರದೇಶಗಳ ಸಂಪರ್ಕವು ಸ್ಥಗಿತಗೊಂಡಿದೆ. ದೆಹಲಿ ಸಂಚಾರ ಪೊಲೀಸರು ವಾಹನ ಸವಾರರಿಗೆ ಟ್ವಿಟರ್ ಮೂಲಕ ಮಾಹಿತಿ ನೀಡುತ್ತಿದ್ದಾರೆ. ಸಿಂಧು, ಲ್ಯಾಂಪೂರ್, ಸಫಿಯಾಬಾದ್, ಪಿಯಾವೊ ಮಣಿಯಾರಿ ಹಾಗೂ ಸಬೋಲಿ ಗಡಿಗಳನ್ನು ಮುಚ್ಚಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಎರಡೂ ಕಡೆಯಿಂದ ಮುಚ್ಚಲಾಗಿರುವ ಕಾರಣಕ್ಕೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ. ದೆಹಲಿಯಿಂದ ಭೋಪ್ರಾ, ಅಪ್ಸರಾ ಬಾರ್ಡರ್ ಹಾಗೂ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಗಳಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿ 8 ಅನ್ನು ಬಳಸುವಂತೆ ಪೊಲೀಸರು ಟ್ವೀಟ್ ಮಾಡಿದ್ದಾರೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಮುಕರ್ಬಾ ಹಾಗೂ ಜಿಟಿಕೆ ರಸ್ತೆಯಲ್ಲಿನ ಸಂಚಾರವನ್ನು ತಿರುಗಿಸಲಾಗಿದ್ದು, ಮುಕರ್ಬಾ, ಜಿಟಿಕೆ, ಔಟರ್ ರಿಂಗ್ ರೋಡ್ ಹಾಗೂ ಎನ್ಎಚ್ 44ರಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಟಿಕ್ರಿ ಹಾಗೂ ಜರೋಡಾ ಗಡಿಯನ್ನು ಮುಚ್ಚಲಾಗಿದ್ದು, ಬದುಸರಾಯ್ ಗಡಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಜಟಿಕರಾ ಮೂಲಕ ದ್ವಿಚಕ್ರ ವಾಹನಗಳು ಮಾತ್ರ ಸಂಚರಿಸಬಹುದು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹರಿಯಾಣದ ಕಡೆಗೆ ಸಾಗುವವರು ಧನ್ಸಾ, ದೌರಾಲಾ, ಕಪಶೇರಾ, ರಾಜೋಖರಿ ರಾಷ್ಟ್ರೀಯ ಹೆದ್ದಾರಿ 8, ಬಿಜ್ವಾಸನ್ / ಬಜ್ಘೇರಾ, ಪಾಲಂ ವಿಹಾರ್ ಹಾಗೂ ದುಂಡಹೇರಾ ಗಡಿಯ ಮೂಲಕ ಸಾಗಬಹುದು.

ಚಿಲ್ಲಾ ಬಾರ್ಡರ್ ಬಳಿಯ ನೋಯ್ಡಾ ಲಿಂಕ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಲ್ಲಿಸಲಾಗಿದೆ. ಗೌತಮ್ ಬುದ್ಧ ನಗರದ ಗೇಟ್ ಬಳಿ ರೈತರ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಜನರು ನೋಯ್ಡಾ ಲಿಂಕ್ ರಸ್ತೆಯನ್ನು ತಪ್ಪಿಸಿ ಡಿಎನ್‌ಡಿ ಮೂಲಕ ದೆಹಲಿಗೆ ಬರಲು ಸೂಚಿಸಲಾಗಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಪ್ರತಿಭಟನೆಯಿಂದಾಗಿ ಗಾಜಿಪುರ ಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -24ರಲ್ಲಿ ಸಂಚಾರ ಸ್ಥಗಿತಗೊಂಡಿರುವುದರಿಂದ, ಗಾಜಿಯಾಬಾದ್‌ನಿಂದ ದೆಹಲಿಗೆ ಬರುವ ಪ್ರಯಾಣಿಕರಿಗೆ ಅಪ್ಸರಾ ಅಥವಾ ಭೋಪ್ರಾ ಗಡಿ ಅಥವಾ ದೆಹಲಿ-ನೋಯ್ಡಾ ಡೈರೆಕ್ಟ್ ಎಕ್ಸ್‌ಪ್ರೆಸ್‌ವೇ ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ.