ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಹೆದ್ದಾರಿಗಳಲ್ಲಿ ಶುಲ್ಕ ಪಾವತಿಸಲು ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ್ದರೂ ಸಹ ವಾಹನ ಸವಾರರು ಮಾತ್ರ ದುಪ್ಪಟ್ಟು ಹಣ ಪಾವತಿಸುತ್ತಿದ್ದಾರೆ. ಇದೇ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕೋಟಿ-ಕೋಟಿ ಆದಾಯ ಹರಿದುಬಂದಿದ್ದು, ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದರೂ ಸಹ ವಾಹನ ಸವಾರರು ಮಾತ್ರ ಹೊಸ ಸೌಲಭ್ಯ ಅಳವಡಿಕೆಗೆ ಮುಂದಾಗುತ್ತಿಲ್ಲ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಸುಮಾರು ಮೂರು ಗಡವುಗಳ ನಂತರ ಜನವರಿ 15ರಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಿದ್ದರೂ ಸಹ ಇದುವರೆಗೂ ಸುಮಾರು ಶೇ. 50ರಷ್ಟು ವಾಹನಗಳಲ್ಲೂ ಹೊಸ ಸೌಲಭ್ಯವು ಅಳಡಿಕೆಯಾಗಿಲ್ಲ. ಇದರ ಪರಿಣಾಮ ಹೆದ್ದಾರಿ ಪ್ರಾಧಿಕಾರದ ಆದಾಯದಲ್ಲಿ ಭಾರೀ ಏರಿಕೆಯಾಗಿದ್ದು, ಎಲೆಕ್ಟ್ರಾನಿಕ್ ಟೋಲ್ ಲೈನ್‌ಗಳಲ್ಲಿ ಹಾಯ್ದು ಹೋಗುವ ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳಿಂದ ಬರೋಬ್ಬರಿ ರೂ.20 ಕೋಟಿ ಹೆಚ್ಚುವರಿ ಆದಾಯ ಸಂಗ್ರಹವಾಗಿದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಜನವರಿ 15ರಿಂದ ಇದುವರೆಗೆ ರೂ.20 ಕೋಟಿ ಹೆಚ್ಚುವರಿ ಆದಾಯವನ್ನು ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳಿಂದ ಸಂಗ್ರಹಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಕಡ್ಡಾಯವಾಗಿ ಅಳವಡಿಕೆ ಮಾಡಿಕೊಳ್ಳುವಂತೆ ಮತ್ತೊಂದು ಅವಕಾಶ ನೀಡಿದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ದೇಶಾದ್ಯಂತ ಇದುವರೆಗೆ ಸುಮಾರು 1.55 ಕೋಟಿ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಇನ್ನು ಶೇ.50 ವಾಹನಗಳಲ್ಲಿ ಹೊಸ ಫಾಸ್ಟ್‌ಟ್ಯಾಗ್ ಅಳವಡಿಸಿಕೊಳ್ಳದಿರುವುದು ಟೋಲ್‌ಬೂತ್‌ಗಳಲ್ಲಿ ಟ್ರಾಫಿಕ್ ಸಮಸ್ಯೆ ತಗ್ಗುವ ಬದಲು ಹೆಚ್ಚಾಗಿದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಇದಕ್ಕೆ ಕಾರಣ, ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳು ಫಾಸ್ಟ್‌ಟ್ಯಾಗ್ ಲೈನ್‌ಗಳಿಗೆ ನುಗ್ಗುವುದು ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚುತ್ತಿದ್ದು, ಸಮಸ್ಯೆ ಬಗೆಹರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮತ್ತೊಂದು ಹಂತದಲ್ಲಿ ಉಚಿತ ಫಾಸ್ಟ್‌ಟ್ಯಾಗ್‌ಗಳನ್ನು ವಿತರಣೆ ಮಾಡುತ್ತಿದೆ. ಫೆಬ್ರುವರಿ 15ರಿಂದಲೇ ಆರಂಭವಾಗಿರುವ ಉಚಿತ ಫಾಸ್ಟ್‌ಟ್ಯಾಗ್ ವಿತರಣೆಯು 29ರ ತನಕ ಲಭ್ಯವಿರಲಿದ್ದು, ರೂ.500ರ ಬದಲಿಗೆ ರೂ.100ಕ್ಕೆ ನಿಮ್ಮ ಹೊಸ ಫಾಸ್ಟ್‌ಟ್ಯಾಗ್ ಖಾತೆಯನ್ನು ತೆರೆಯಬಹುದಾಗಿದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ರೂ.100 ಫಾಸ್ಟ್‌ಟ್ಯಾಗ್ ಖಾತೆಯಲ್ಲಿ ಇರಬೇಕಾದ ಕನಿಷ್ಠ ಮೊತ್ತವಾಗಿದ್ದು, ಹೊಸ ಖಾತೆಯನ್ನು ತೆರೆಯುವುದಕ್ಕಾಗಿ ಯಾವುದೇ ಹೆಚ್ಚುವರಿ ಮೊತ್ತವನ್ನು ನೀವು ನೀಡಬೇಕಾಗಿಲ್ಲ. ಹೀಗಾಗಿ ಇದುವರೆಗೂ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಹೊಂದಿರದ ವಾಹನ ಸವಾರರಿಗೆ ಹೊಸ ಖಾತೆ ತೆರೆಯಲು ಸಾಕಷ್ಟು ಅನುಕೂಲಕರವಾಗಲಿದ್ದು, ಫೆಬ್ರುವರಿ 29ರ ನಂತರ ಮತ್ತೆ ಹೆಚ್ಚುವರಿ ಮೊತ್ತವನ್ನೇ ಪಾವತಿ ಮಾಡಬೇಕಾಗುತ್ತದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಜೊತೆಗೆ ಫಾಸ್ಟ್‌ಟ್ಯಾಗ್ ಸೌಲಭ್ಯ ವಿತರಣೆಯ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪೆಟ್ರೋಲ್ ಬಂಕ್, ಆರ್‌ಟಿಒ ಆಫೀಸ್ ಮತ್ತು ಟೋಲ್ ಪ್ಲಾಜಾಗಳಲ್ಲಿ ಹೆಚ್ಚುವರಿ ಸಿಬ್ಬಂದಿಯೊಂದಿಗೆ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ತುರ್ತಾಗಿ ವಿತರಣೆ ಮಾಡುತ್ತಿದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಇನ್ನು ಫಾಸ್ಟ್‌ಟ್ಯಾಗ್ ಪರಿಚಯಿಸುವುದಕ್ಕೂ ಮುನ್ನ ವಾಹನ ಸವಾರರು ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿಗಾಗಿ ಸರಾಸರಿಯಾಗಿ 12 ನಿಮಿಷ ಕಾಯಬೇಕಿತ್ತು. ಇದೀಗ ಅದು ಸರಾಸರಿ 6 ನಿಮಿಷಕ್ಕೆ ಇಳಿಕೆಯಾಗಿದ್ದರೂ ಕೂಡಾ ಫಾಸ್ಟ್‌ಟ್ಯಾಗ್‌ ಲೈನ್‌ಗಳ ಬಳಕೆಯಲ್ಲಿನ ಗೊಂದಲದಿಂದಾಗಿ ವಾಹನ ಸವಾರರು ಮತ್ತು ಟೋಲ್ ಸಿಬ್ಬಂದಿ ನಡುವೆ ಆಗಾಗ ವಾಗ್ವಾದಗಳು ನಡೆಯುತ್ತಿವೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದ ಭರ್ಜರಿ ಆದಾಯ

ಫಾಸ್ಟ್‌ಟ್ಯಾಗ್ ಅಳವಡಿಕೆಗೂ ಮುನ್ನ ಪ್ರತಿದಿನ ರೂ.68 ಕೋಟಿ ಸರಾಸರಿ ಆದಾಯ ಗಳಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಇದೀಗ ಪ್ರತಿದಿನ ಸರಾಸರಿಯಾಗಿ ರೂ.82 ಕೋಟಿಯಷ್ಟು ಆದಾಯ ಗಳಿಕೆ ಮಾಡುತ್ತಿರುವುದಾಗಿ ಅಧಿಕೃತ ಹೇಳಿಕೆ ನೀಡಿದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಫಾಸ್ಟ್‌ಟ್ಯಾಗ್ ಸೌಲಭ್ಯವು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯಾಗಿದ್ದು, ಟೋಲ್ ಪ್ಲಾಜಾಗಳ ಮೂಲಕ ಹಾದುಹೋಗುವಾಗ ಟೋಲ್‌ಗಳಲ್ಲಿನ ಆರ್‌ಎಫ್‌ಐಡಿ ರಾಡರ್ ಮೂಲಕ ಆಟೋಮ್ಯಾಟಿಕ್ ಆಗಿ ಶುಲ್ಕ ಕಡಿತಗೊಳ್ಳುತ್ತದೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಈ ವ್ಯವಸ್ಥೆಯನ್ನು ಭಾರತದಲ್ಲಿ ಮೊದಲ ಬಾರಿಗೆ 2014ರಲ್ಲಿ ಪರಿಚಯಿಸಲಾಯಿತು. ಈ ಸೌಲಭ್ಯ ಹೊಂದಿರುವ ವಾಹನಗಳು ಯಾವುದೇ ಟೋಲ್ ಪ್ಲಾಜಾ ಮೂಲಕ ಹಾದುಹೋಗುವಾಗ ಗಂಟೆಗಟ್ಟಲೇ ಟೋಲ್‍‍ಗಳಲ್ಲಿ ನಿಲ್ಲುವ ಅಗತ್ಯವಿಲ್ಲ. ದೇಶದಲ್ಲಿರುವ ಅನೇಕ ಬ್ಯಾಂಕ್‌ಗಳು ಆನ್‌ಲೈನ್‌ನಲ್ಲಿ ಫಾಸ್ಟ್‌ಟ್ಯಾಗ್‍ ಖರೀದಿಸುವ ಸೌಲಭ್ಯವನ್ನು ಒದಗಿಸುತ್ತಿವೆ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಗ್ರಾಹಕರು ರೂ.100ನಿಂದ ರೂ.1 ಲಕ್ಷದವರೆಗೆ ರೀಚಾರ್ಜ್ ಮಾಡಬಹುದಾಗಿದ್ದು, ಸುಲಭವಾಗಿ ರೀಚಾರ್ಜ್ ಮಾಡಲು ಬೇರೆ ಬೇರೆ ಏಜೆನ್ಸಿಗಳು ಬೇರೆ ಬೇರೆ ವಿಧಾನಗಳನ್ನು ಹಾಗೂ ಆಯ್ಕೆಗಳನ್ನು ನೀಡಲಾಗಿದೆ. ಹೀಗಾಗಿ ಇದೊಂದು ಅತಿ ಸುಲಭವಾಗಿ ಉಪಯೋಗಿಸಬಹುದಾದ ಸೌಲಭ್ಯವಾಗಿದ್ದು, ಒಂದು ಫಾಸ್ಟ್‌ಟ್ಯಾಗ್ ಖಾತೆಯನ್ನು ಮತ್ತೊಂದು ವಾಹನಕ್ಕೆ ಬಳಕೆ ಮಾಡುವಂತಿಲ್ಲ.

ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಂದ ಕೋಟಿ-ಕೋಟಿ ದಂಡ ವಸೂಲಿ..!

ಇದರಿಂದ ವಾಹನ ಮಾಲೀಕರು ಹೊಸ ಸೌಲಭ್ಯವನ್ನು ವಿವಿಧ ವಾಹನಗಳಿಗೆ ಪ್ರತ್ಯೇಕ ಖಾತೆ ಹೊಂದಿರಬೇಕಿದ್ದು, ಫಾಸ್ಟ್‌ಟ್ಯಾಗ್ ಬೇಡವಾದಲ್ಲಿ ಡಿಆಕ್ಟಿವೆಟ್ ಮಾಡಬೇಕಾಗುತ್ತದೆ.

Most Read Articles

Kannada
English summary
NHAI collects Rs 20 crore from 18 lakh defaulters entering FASTag lanes. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X