ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಜಾಗತಿಕ ಮಾರುಕಟ್ಟೆಯಲ್ಲಿ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಫಿಯೆಟ್ ಕ್ರೈಸ್ಲರ್ ಆಟೋಮೊಬೈಲ್(ಎಫ್‌ಸಿಎ ಕಂಪನಿಯು ಭಾರತದಲ್ಲಿ ಮೊದಲ ಬಾರಿಗೆ ಐಟಿ ಕೇಂದ್ರ ತೆರೆಯುವ ಸಿದ್ದತೆಯಲ್ಲಿದ್ದು, ಹೊಸ ಯೋಜನೆಯು ಶೀಘ್ರದಲ್ಲೇ ಜಾರಿಗೆ ಬರಲಿದೆ.

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ವಿಶ್ವದ ಪ್ರಮುಖ ಆಟೋ ಬ್ರಾಂಡ್‌ಗಳನ್ನು ಒಳಗೊಂಡಿರುವ ಫಿಯೆಟ್ ಕ್ರೈಸ್ಲರ್ ಆಟೋಮೊಬೈಲ್ ಸಮೂಹ ಸಂಸ್ಥೆಯು ಹೊಸ ವಾಹನಗಳಲ್ಲಿನ ಕನೆಕ್ಟೆಡ್ ಫೀಚರ್ಸ್‌ಗಳ ಅಭಿವೃದ್ದಿ ಮತ್ತು ನಿರ್ವಹಣೆಗಾಗಿ ಪ್ರತ್ಯೇಕವಾದ ಮಾಹಿತಿ ತಂತ್ರಜ್ಞಾನ ಕೇಂದ್ರವನ್ನು ತೆರೆಯಲು ಉದ್ದೇಶಿಸಿದ್ದು, ಹೊಸ ಐಟಿ ಕೇಂದ್ರ ಚಾಲನೆಗೂ ಈಗಾಗಲೇ ಅಂತಿಮ ಹಂತದ ಸಿದ್ದತೆಗಳನ್ನು ನಡೆಸಲಾಗುತ್ತಿದೆ.

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಮಾಹಿತಿಗಳ ಪ್ರಕಾರ ಫಿಯೆಟ್ ಕ್ರೈಸ್ಲರ್ ಆಟೋಮೊಬೈಲ್ ಕಂಪನಿಯು ತನ್ನ ಹೊಸ ಐಟಿ ಕೇಂದ್ರವನ್ನು ಹೈದ್ರಾಬಾದ್‌ನ ರಾಯದುರ್ಗದಲ್ಲಿ ನಿರ್ಮಾಣ ಮಾಡುತ್ತಿದ್ದು, ಸುಮಾರು 2 ಸಾವಿರ ಉದ್ಯೋಗಿಗಳು ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಫಿಯೆಟ್ ಕ್ರೈಸ್ಲರ್ ಆಟೋಮೊಬೈಲ್ ಕಂಪನಿಯು ಭಾರತದಲ್ಲಿ ಈಗಾಗಲೇ ಎಂಜಿನಿಯರಿಂಗ್ ಸೆಂಟರ್ ಮೂಲಕ ಪ್ರಮುಖ ಕಾರು ಮಾದರಿಗಳಿಗಾಗಿ ಎಂಜಿನ್ ಸಂಪನ್ಮೂಲ ಒದಗಿಸುತ್ತಿದ್ದು, ಇದೀಗ ಹೊಸ ವಾಹನಗಳಲ್ಲಿ ಹೆಚ್ಚು ಜನಪ್ರಿಯವಾಗುತ್ತಿರುವ ಕನೆಕ್ಟೆಡ್ ಫೀಚರ್ಸ್‌ಗಳ ಅಭಿವೃದ್ದಿ ಮತ್ತು ನಿರ್ವಹಣೆಗಾಗಿ ಹೊಸ ಐಟಿ ಸೆಂಟರ್ ತೆರೆಯುತ್ತಿದೆ.

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಫಿಯೆಟ್ ಕ್ರೈಸ್ಲರ್ ಆಟೋಮೊಬೈಲ್ ಗ್ರೂಪ್ ಅಡಿಯಲ್ಲಿ ಜೀಪ್, ಕ್ರೈಸ್ಲರ್, ಅಬಾರ್ಥ್, ಅಲ್ಫಾ ರೋಮಿಯೊ, ಫಿಯೆಟ್, ಫಿಯೆಟ್ ಫ್ರೋಪೆಷನಲ್, ಡೊಡ್ಜಿ, ಲ್ಯಾನ್ಸಿಯಾ, ಮೆಸಾರಟಿ, ಮೊಪಾರ್, ರ‍್ಯಾಮ್ ಮತ್ತು ಎಸ್ಆರ್‌ಟಿ ಬ್ರಾಂಡ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ವಿಶ್ವಾದ್ಯಂತ ಸುಮಾರು 100ಕ್ಕೂ ಹೆಚ್ಚು ಉತ್ಪಾದನಾ ಘಟಕಗಳು, 40ಕ್ಕೂ ಹೆಚ್ಚು ಸಂಶೋಧನಾ ಮತ್ತು ಅಭಿವೃದ್ದಿ ಕೇಂದ್ರಗಳನ್ನು ಹೊಂದಿದೆ.

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಭವಿಷ್ಯದಲ್ಲಿ ಹೊಸ ವಾಹನಗಳ ಅಭಿವೃದ್ದಿ ಮತ್ತು ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆಗಾಗಿ ಹಲವಾರು ಹೊಸ ಬದಲಾವಣೆಗಳನ್ನು ತರಲಾಗುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಭಾರತದಲ್ಲಿ ಹೊಸ ಮಾಹಿತಿ ತಂತ್ರಜ್ಞಾನ ಕೇಂದ್ರವನ್ನು ಸ್ಥಾಪನೆ ಮಾಡುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಜೊತೆ ಆಟೋನೊಮಸ್ ವಾಹನಗಳು ಸಹ ಹೊಸ ಭರವಸೆ ಮೂಡಿಸುತ್ತಿದ್ದು, ಇದಕ್ಕೆ ಪೂರಕವಾಗಿ ತಂತ್ರಜ್ಞಾನ ನಿರ್ವಹಣೆಗಾಗಿ ಪ್ರತ್ಯೇಕ ಸೌಲಭ್ಯವು ಅವಶ್ಯವಿದೆ.

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಇದಕ್ಕಾಗಿ ನುರಿತ ತಂತ್ರಜ್ಞರದೊಂದಿಗೆ ಭಾರತದಲ್ಲಿ ಮೊದಲ ಐಟಿ ಕೇಂದ್ರವನ್ನು ತೆರೆಯುತ್ತಿರುವ ಫಿಯೆಟ್ ಕ್ರೈಸ್ಲರ್ ಆಟೋಮೊಬೈಲ್ ಕಂಪನಿಯು ಭಾರತದಿಂದಲೇ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳಿಗೆ ಕಾರ್ ಕನೆಕ್ಟೆಡ್ ಫೀಚರ್ಸ್‌ಗಳ ಸೇವೆ ಮತ್ತು ನಿರ್ವಹಣೆ ಕೈಗೊಳ್ಳಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತೆರೆಯಲಿದೆ ಎಫ್‌ಸಿಎ ಗ್ರೂಪ್

ಇನ್ನು ವಿಶ್ವದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಹೊಸ ವಾಹನಗಳ ಚಾಲನೆಯನ್ನು ಸರಳಗೊಳಿಸುವುದರ ಜೊತೆಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡಲು ಹಲವಾರು ಕನೆಕ್ಟೆಡ್ ಫೀಚರ್ಸ್‌ಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಫಿಯೆಟ್ ಕ್ರೈಸ್ಲರ್ ಆಟೋಮೊಬೈಲ್ ಕಂಪನಿಯು ಕೂಡಾ ತನ್ನದೆ ಪ್ರತ್ಯೇಕ ಕನೆಕ್ವೆಡ್ ಫೀಚರ್ಸ್‌ಗಳನ್ನು ಅಭಿವೃದ್ದಿಗೊಳಿಸುತ್ತಿದೆ.

Most Read Articles

Kannada
English summary
Fiat Chrysler To Set Up IT Centre In India. Read in Kannada.
Story first published: Saturday, November 14, 2020, 15:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X