ಭಾರತದಲ್ಲಿ ಬಿಡುಗಡೆಯಾಗಲಿರುವ 4×4 ಆಫ್ ರೋಡ್ ಎಸ್‍ಯುವಿಗಳಿವು
ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಎಸ್‍ಯುವಿಗಳ ಬೇಡಿಕೆಯು ಹೆಚ್ಚಾಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ವಾಹನ ಉತ್ಪಾದನಾ ಕಂಪನಿಗಳು ಎಸ್‍ಯುವಿಯನ್ನು ಬಿಡುಗಡೆಗೊಳಿಸುತ್ತಿವೆ.

ಭಾರತೀಯ ಮಾರುಕಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ 300, ಹ್ಯುಂಡೈ ವೆನ್ಯೂ, ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್ ನಂತಹ ಜನಪ್ರಿಯ ಎಸ್‍ಯುವಿಗಳು ಲಭ್ಯವಿದೆ. ಈ ಜನಪ್ರಿಯ ಕಾಂಪ್ಯಾಕ್ಟ್ ಎಸ್‍ಯುವಿಗಳ ನಡುವೆ ಪೂರ್ಣ ಪ್ರಮಾಣದ ಎಸ್‍ಯುವಿಗಳನ್ನು ಹಲವು ವಾಹನ ಉತ್ಪಾದಕರು ಬಿಡುಗಡೆಗೊಳಿಸುತ್ತಿವೆ, ಇದರ ನಡುವೆ ಭಾರತೀಯ ಮಾರುಕಟ್ಟೆಯಲ್ಲಿ 4×4 ಆಫ್ ರೋಡ್ ಎಸ್‍ಯುವಿಗಳಿಗೆ ಬೇಡಿಕೆ ಹೊಂದಿದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ 4×4 ಆಫ್ ರೋಡ್ ಎಸ್‍ಯುವಿಗಳ ಮಾಹಿತಿ ಇಲ್ಲಿದೆ.

2020ರ ಮಹೀಂದ್ರಾ ಥಾರ್
ಐಕಾನಿಕ್ ಆಫ್-ರೋಡರ್ 2020ರ ಥಾರ್ ಅನ್ನು ಈ ವರ್ಷದ ಮಧ್ಯದಲ್ಲಿ ಬಿಡುಗಡೆಗೊಳಿಸುವುದಾಗಿ ಮಹೀಂದ್ರಾ ಕಂಪನಿಯು ಖಚಿತಪಡಿಸಿದೆ. ಮಹೀಂದ್ರಾ ಕಂಪನಿಯು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಬ್ರಾಂಡ್‌ನ ಉತ್ಪಾದನಾ ಕೇಂದ್ರದ ಬಳಿ ಥಾರ್ ಎಸ್‍ಯುವಿಯ ಸ್ಪಾಟ್ ಟೆಸ್ಟ್ ಅನ್ನು ಇತ್ತೀಚೆಗೆ ನಡೆಸಿದ್ದಾರೆ.
MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍ಯುವಿ

ಹೊಸ ಮಹೀಂದ್ರಾ ಥಾರ್‍ನ 4×4 ಲಿವರ್ ವಿಭಿನ್ನವಾಗಿದೆ. ಇದರಲ್ಲಿ 2ಡಬ್ಲ್ಯುಡಿ(ಆರ್‍ಡಬ್ಲ್ಯುಡಿ) ಹೈ, 4ಡಬ್ಲ್ಯುಡಿ ಹೈ ಮತ್ತು 4 ಡಬ್ಲ್ಯು ಡಿ ಲೋ ಎಂಬ ಮೂರು ಮೋಡ್‍ಗಳಿವೆ. ಹೊಸ ಥಾರ್ 120 ಬಿಹೆಚ್‌ಪಿ ಪವರ್ ಉತ್ಪಾದಿಸುವ 2.0 ಲೀಟರ್ ಡೀಸೆಲ್ ಬಿಎಸ್ 6 ಎಂಜಿನ್ ಹೊಂದಿರಲಿದೆ.

ಮಾರುತಿ ಸುಜುಕಿ ಜಿಮ್ನಿ
ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಜಿಮ್ನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.ಈ ಜಿಮ್ನಿ ಎಸ್‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍ಯುವಿಯ ಉತ್ತರಾಧಿಕಾರಿಯಾಗಲಿದೆ. ಈ ಜಿಮ್ಮಿ ಅರೆಕಾಲಿಕ 4ಡಬ್ಲೂಡಿ ಸೆಟಪ್ ಅನ್ನು ಹೊಂದಿದೆ. ಇದನ್ನು 2ಹೆಚ್/4ಡಬ್ಲ್ಯೂ ಹೈ/4ಡಬ್ಲ ಲೋ ಹೀಗೆ ಬದಲಾಯಿಸಬಹುದುದಾಗಿದೆ.
MOST READ: ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಈ ಹೊಸ ಜಿಮ್ನಿ ಮಿನಿ ಎಸ್‍ಯುವಿಯಲ್ಲಿ 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಜೀಪ್ ಕಾಂಪ್ಯಾಕ್ಟ್ ಎಸ್‍ಯುವಿ
ಐಷಾರಾಮಿ ಕಾರು ತಯಾರಕ ಕಂಪನಿಯಾದ ಜೀಪ್ ಎಂಟ್ರಿ ಲೆವೆಲ್ ಜೀಪ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಅನಾವರಣವಾಗಲಿದೆ.
MOST READ: ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಇದರಲ್ಲಿ ಫೋರ್ ವ್ಹೀಲ್ ಡ್ರೈವ್ ಸಿಸ್ಟಂ ಮತ್ತು ಆಫ್ ರೋಡ್ ಭೂಪ್ರದೇಶದಲ್ಲಿ ಚಲಿಸಲು ಲಾಕಿಂಗ್ ಡಿಫರನ್ಷಿಯಲ್ ಫೀಚರ್ಸ್‍ಗಳನ್ನು ಒಳಗೊಂಡಿರುತ್ತದೆ. ಮುಂದಿನ ಕಾಂಪ್ಯಾಕ್ಟ್ ಎಸ್‍ಯುವಿಯು ಜೀಪ್ ಬ್ರ್ಯಾಂಡ್‍ನ ಆಫ್ ರೋಂಡಿಂಗ್ ವಾಹನಗಳ ಸರಣಿಗೆ ಸೇರುತ್ತದೆ.

2020ರ ಇಸುಝು ವಿ-ಕ್ರಾಸ್ ಎಸ್‍ಯುವಿ
ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಇಸುಝು ತನ್ನ ಬಿಎಸ್-6 ವಿ-ಕ್ರಾಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಬಿಎಸ್-6 ವಿ-ಕ್ರಾಸ್ ಎಸ್‍ಯುವಿಗೆ ಪ್ರಸ್ತುತ ಮಾದರಿಗಿಂತ ರೂ.3 ಲಕ್ಷ ದಷ್ಟು ಬೆಲೆಯು ಹೆಚ್ಚಿರಲಿದೆ.

ಬಿಎಸ್-6 ಫೋರ್ಸ್ ಗೂರ್ಖಾ
ಫೋರ್ಸ್ ಮೋಟಾರ್ಸ್ ಗೂರ್ಖಾ ಆಫ್ ರೋಡ್ ಆವೃತ್ತಿಯನ್ನು ಮಾಲಿನ್ಯ ನಿಯಮ ಅನುಗುಣವಾಗಿ ಬಿಡುಗಡೆಗೊಳಿಸಲು ಸಜ್ಜಾಗಿದೆ. 2.6-ಲೀಟರ್ ಡೀಸೆಲ್ ಎಂಜಿನ್ ಹೊಂದಿರುವ ಹೊಸ ಗೂರ್ಖಾ ಆವೃತ್ತಿಯು ಐದು ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 90-ಬಿಎಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಫೋರ್ ವ್ಝೀಲ್ ಡ್ರೈವ್ ಸ್ಪೀಡ್ ಸಿಸ್ಟಂ ಅನ್ನು ಹೊಂದಿದೆ.


Click it and Unblock the Notifications








