ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ಜಾರಿಗೆ ಬರಲಿರುವ ಹೊಸ ಎಮಿಷನ್ ನಿಯಮದಂತೆ ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಹೊಸ ಕಾರುಗಳನ್ನು ಬಿಡುಗಡೆಗೆ ಸಿದ್ದವಾಗಿದ್ದು, ಕರೋನಾ ವೈರಸ್ ಹಿನ್ನಲೆಯಲ್ಲಿ ಹೊಸ ಕಾರುಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿವೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ವೈರಸ್ ನಿಯಂತ್ರಣಕ್ಕೆ ಬಂದ ನಂತರವಷ್ಟೇ ಉತ್ಪಾದನಾ ಚಟುವಟಿಕೆಗಳನ್ನು ಮುಂದುವರಿಸಲಿರುವ ಆಟೋ ಕಂಪನಿಗಳು ಹೊಸ ವಾಹನಗಳನ್ನು ಬಿಡುಗಡೆಗೊಳಿಸಲಿದ್ದು, ಬಿಡುಗಡೆಯ ಹಂತದಲ್ಲಿರುವ ಕಾರುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಹೊಸ ಎಮಿಷನ್ ನಿಯಮದಿಂದಾಗಿ ಬಹುತೇಕ ಕಾರು ಕಂಪನಿಗಳು ಡೀಸೆಲ್‌ಗಿಂತ ಹೆಚ್ಚು ಪೆಟ್ರೋಲ್ ಕಾರುಗಳ ಉತ್ಪಾದನೆಗೆ ಆದ್ಯತೆ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಂಪನಿಗಳು ವಿವಿಧ ಮಾದರಿಯ ಟರ್ಬೋ ಪೆಟ್ರೋಲ್ ಕಾರುಗಳನ್ನು ಬಿಡುಗಡೆ ಮಾಡುತ್ತಿವೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ಮಹೀಂದ್ರಾ ಥಾರ್

ಆಫ್ ರೋಡ್ ಕಾರು ಮಾದರಿಗಳಲ್ಲಿ ಮುಂಚೂಣಿಯಲ್ಲಿರುವ ಥಾರ್ ಕಾರು ಈ ಬಾರಿ ಬಿಎಸ್-6 ವೈಶಿಷ್ಟ್ಯತೆಯ 2.2-ಲೀಟರ್ ಡೀಸೆಲ್ ಎಂಜಿನ್‌ ಸೇರಿದಂತೆ ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗುತ್ತಿದ್ದು, ಹೊಸ ಕಾರಿನಲ್ಲಿ ಈ ಬಾರಿ 1.5-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನು ಸಹ ಪರಿಚಯಿಸಲಾಗುತ್ತಿದೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ಇದರೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 6 ಸೀಟರ್ ಆವೃತ್ತಿಗಳು ಖರೀದಿಗೆ ಲಭ್ಯವಿರಲಿದ್ದು, ಡೀಸೆಲ್ ಮಾದರಿಯು ಹಳೆಯ ಆವೃತ್ತಿಗಿಂತ ರೂ.70 ಸಾವಿರದಿಂದ ರೂ.90 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ಕಿಯಾ ಸೊನೆಟ್

ಸ್ಪೋಟಿ ಲುಕ್ ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಸೊನೆಟ್ ಕಾರು ಅಭಿವೃದ್ದಿಗೊಂಡಿದೆ. ಮುಂಬರುವ ಅಗಸ್ಟ್ ಹೊತ್ತಿಗೆ ರಸ್ತೆಗಿಳಿಯಲಿರುವ ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ಹೊಸ ಸೊನೆಟ್ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ರೆನಾಲ್ಟ್ ಡಸ್ಟರ್

ಬಿಎಸ್-6 ಪೆಟ್ರೋಲ್ ಎಂಜಿನ್ ಹೊಂದಿರುವ ಡಸ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8.49 ಲಕ್ಷ ಬೆಲೆ ಹೊಂದಲಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರಿನ ಬೆಲೆಯಲ್ಲಿ ರೂ.10 ಸಾವಿರದಿಂದ ರೂ. 50 ಸಾವಿರದಷ್ಟು ಬೆಲೆ ಏರಿಕೆ ಮಾಡಲಾಗಿದೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿದ್ದ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ನ್ಯೂ ಜನರೇಷನ್ ಡಸ್ಟರ್‌ನಲ್ಲಿ ಅಳವಡಿಸಲು ನಿರ್ಧರಿಸಲಾಗಿದ್ದು, ಸದ್ಯಕ್ಕೆ ಈ ಹಿಂದಿನ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನೇ ಉನ್ನತೀಕರಿಸಿ ಬಿಡುಗಡೆ ಮಾಡಲಾಗಿದೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ಸ್ಕೋಡಾ ವಿಷನ್ ಇನ್

ಕಳೆದ ತಿಂಗಳು ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಸ್ಕೋಡಾ ವಿಷನ್ ಇನ್ ಕಂಪ್ಯಾಕ್ಟ್ ಎಸ್‌ಯುವಿ ಸಹ ಪರ್ಫಾಮೆನ್ಸ್ ಪ್ರಿಯರ ಬೇಡಿಕೆಗೆ ಅನುಗುಣವಾಗಿ 1.0-ಲೀಟರ್ ಟರ್ಬೋ ಮತ್ತು ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದುವ ಸಾಧ್ಯತೆಗಳಿವೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ರೆನಾಲ್ಟ್ ಕಿಗರ್

ಸದ್ಯ ರೆನಾಲ್ಟ್ ಹೊಸ ಕಾರನ್ನು ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಕಿಗರ್ ಹೆಸರನ್ನೇ ಅಧಿಕೃತವಾಗಿ ಕರೆಯುವುದು ಬಹುತೇಕ ಖಚಿತವಾಗಿದೆ. ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಕಿಗರ್ ಕಾರು ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.

ಬಿಡುಗಡೆಯ ಸಿದ್ದತೆಯಲ್ಲಿರುವ ಟಾಪ್ 5 ಟರ್ಬೋ ಎಂಜಿನ್ ಪೆಟ್ರೋಲ್ ಕಾರುಗಳು..!

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಕಂಪನಿ ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

Most Read Articles

Kannada
English summary
Five Turbo petrol cars upcoming launch in India details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X