Just In
- 7 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 8 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 9 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 9 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೀಲರ್ಸ್ ಯಾರ್ಡ್ ತಲುಪಿದ ಬಿಎಸ್-6 ಫೋರ್ಸ್ ಗೂರ್ಖಾ ಆಫ್-ರೋಡ್ ಎಸ್ಯುವಿ
ಫೋರ್ಸ್ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಬಿಎಸ್-6 ಎಂಜಿನ್ ಪ್ರೇರಿತ ಗೂರ್ಖಾ ಆಫ್-ರೋಡ್ ಎಸ್ಯುವಿ ಆವೃತ್ತಿಯು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಈಗಾಗಲೇ ಆಯ್ದ ಕಾರು ಮಾರಾಟ ಮಳಿಗೆಗಳಲ್ಲಿ ಸ್ಟಾಕ್ ಮಾಡಲಾಗುತ್ತಿದೆ.
2020ರ ದೆಹಲಿ ಆಟೋ ಎಕ್ಸ್ಪೋದಲ್ಲಿ ಪ್ರದರ್ಶನಗೊಂಡಿದ್ದ ಫೋರ್ಸ್ ಗೂರ್ಖಾ ಹೊಸ ಆವೃತ್ತಿಯು ಇದೇ ವರ್ಷದ ಜುಲೈ ವೇಳೆಗೆ ಬಿಡುಗಡೆಯಾಗುವ ನೀರಿಕ್ಷೆಯಲ್ಲಿತ್ತು. ಆದರೆ ಕರೋನಾ ವೈರಸ್ನಿಂದಾಗಿ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಬಹುದಿನಗಳ ನಂತರ ಮರುಚಾಲನೆ ನೀಡಿದ್ದರಿಂದ ಇದೀಗ ಬಿಡುಗಡೆಯ ಕೊನೆಯ ಹಂತದಲ್ಲಿದ್ದು, ಮುಂಬರುವ ಅಕ್ಟೋಬರ್ ವೇಳೆ ಮಾರುಕಟ್ಟೆ ಪ್ರವೇಶಿಸಲಿದೆ.
ಫೋರ್ಸ್ ಮೋಟಾರ್ಸ್ ಕಂಪನಿಯು ಗೂರ್ಖಾ ಆಫ್ ರೋಡ್ ಎಸ್ಯುವಿ ಆವೃತ್ತಿಯನ್ನು ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಜೋಡಣೆ ಮಾಡಲಾಗಿದೆ.
ಹೊಸ ಎಮಿಷನ್ ನಿಯಮದಿಂದಾಗಿ ವಾಹನಗಳ ಎಂಜಿನ್ನಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್ಗಳ ಜೊತೆಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.
ಹೊಸ ಗೂರ್ಖಾ ಕಾರಿನಲ್ಲಿ ಈ ಬಾರಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್ಲ್ಯಾಂಪ್ ಕ್ಲಸ್ಟರ್, ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಪರ್ಫಾಮೆನ್ಸ್ಗೆ ಸಹಕಾರಿಯಾಗಿದೆ. ಹಾಗೆಯೇ ಹೊಸ ಕಾರಿನ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಹೊಸ ಪ್ರೀಮಿಯಂ ಫೀಚರ್ಸ್ಗಳಿಂದಾಗಿ ಆಫ್ ರೋಡ್ ಕಾರು ಚಾಲನೆಯು ಮತ್ತಷ್ಟು ಸುಗಮವಾಗಲಿದ್ದು, ಡ್ಯಾಶ್ಬೋರ್ಡ್ ತಾಂತ್ರಿಕ ಸೌಲಭ್ಯಗಳನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಲಾಗಿದೆ.
ಡ್ಯಾಶ್ಬೋರ್ಡ್ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್, ಹೊಸದಾದ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಜೋಡಿಸಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..
ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ. ಹೊಸ ಕಾರು ಮಾರ್ಚ್ ಅಂತ್ಯದೊಳಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಬೆಲೆ ಕೂಡಾ ಬಿಎಸ್-4 ಆವೃತ್ತಿಗಿಂತಲೂ ತುಸು ದುಬಾರಿಯಾಗಲಿದೆ.