ಬಿಎಸ್-6 ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

ಫೋರ್ಸ್ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಬಿಎಸ್-6 ಎಂಜಿನ್ ಪ್ರೇರಿತ ಗೂರ್ಖಾ ಆಫ್-ರೋಡ್ ಎಸ್‌ಯುವಿ ಆವೃತ್ತಿಯು ಬಿಡುಗಡೆ ಮಾಡುವ ಅಂತಿಮ ಸಿದ್ದತೆಯಲ್ಲಿದ್ದು, ಹೊಸ ಕಾರು ಪುಣೆಯಲ್ಲಿರುವ ಉತ್ಪಾದನಾ ಘಟಕದಲ್ಲಿ ಹೊಸ ಬಣ್ಣದ ಆಯ್ಕೆಯೊಂದಿಗೆ ಲಭ್ಯವಾಗುವ ಸುಳಿವು ನೀಡಿದೆ.

ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಫೋರ್ಸ್ ಗೂರ್ಖಾ ಹೊಸ ಆವೃತ್ತಿಯು ಇದೇ ವರ್ಷದ ಜುಲೈ ವೇಳೆಗೆ ಬಿಡುಗಡೆಯಾಗುವ ನೀರಿಕ್ಷೆಯಲ್ಲಿತ್ತು. ಆದರೆ ಕರೋನಾ ವೈರಸ್‌ನಿಂದಾಗಿ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಬಹುದಿನಗಳ ನಂತರ ಮರುಚಾಲನೆ ನೀಡಿದ್ದರಿಂದ ಇದೀಗ ಬಿಡುಗಡೆಯ ಕೊನೆಯ ಹಂತದಲ್ಲಿದ್ದು, ಮುಂದಿನ ತಿಂಗಳು ನವೆಂಬ್ ಆರಂಭದಲ್ಲಿ ವೇಳೆಗೆ ಮಾರುಕಟ್ಟೆಗೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

ಫೋರ್ಸ್ ಮೋಟಾರ್ಸ್ ಕಂಪನಿಯು ಗೂರ್ಖಾ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

ಹೊಸ ಎಮಿಷನ್ ನಿಯಮದಿಂದಾಗಿ ವಾಹನಗಳ ಎಂಜಿನ್‌ನಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.

ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

ಹೊಸ ಗೂರ್ಖಾ ಕಾರಿನಲ್ಲಿ ಈ ಬಾರಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್, ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಪರ್ಫಾಮೆನ್ಸ್‌ಗೆ ಸಹಕಾರಿಯಾಗಿದೆ. ಹಾಗೆಯೇ ಹೊಸ ಕಾರಿನ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

ಹೊಸ ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಆಫ್ ರೋಡ್ ಕಾರು ಚಾಲನೆಯು ಮತ್ತಷ್ಟು ಸುಗಮವಾಗಲಿದ್ದು, ಡ್ಯಾಶ್‌ಬೋರ್ಡ್ ತಾಂತ್ರಿಕ ಸೌಲಭ್ಯಗಳನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಲಾಗಿದೆ.

ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಜೋಡಿಸಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಆಫ್ ರೋಡ್ ಎಸ್‌ಯುವಿ ಬಿಡುಗಡೆಗೆ ಸಜ್ಜಾದ ಫೋರ್ಸ್ ಮೋಟಾರ್ಸ್

ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ. ಹೊಸ ಕಾರು ಮಾರ್ಚ್ ಅಂತ್ಯದೊಳಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಬೆಲೆ ಕೂಡಾ ಬಿಎಸ್-4 ಆವೃತ್ತಿಗಿಂತಲೂ ತುಸು ದುಬಾರಿಯಾಗಲಿದೆ.

Image Courtesy: Charu Gokhale/Facebook

Most Read Articles

Kannada
English summary
Force Gurkha Facelift Spied. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X