ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಪುಣೆ ಮೂಲದ ಫೋರ್ಸ್ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಜನಪ್ರಿಯ ಟ್ರಾಕ್ಸ್ ಕ್ರೂಸರ್ ಹೊಸ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, ಹೊಸ ವಾಹನದಲ್ಲಿ ಸುಧಾರಿತ ಎಂಜಿನ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಏಪ್ರಿಲ್ 1ರಿಂದ ಬಿಎಸ್-6 ಎಮಿಷನ್ ನಿಯಮವು ಕಡ್ಡಾಯವಾಗಿ ಜಾರಿಗೆ ಬರುತ್ತಿದ್ದು, ಹೊಸ ಎಮಿಷನ್ ಪ್ರಕಾರ ಉನ್ನತೀಕರಿಸಲಾಗಿರುವ ಟ್ರಾಕ್ಸ್ ಕ್ರೂಸರ್ ಮಾದರಿಯು ಇದೇ ತಿಂಗಳಾಂತ್ಯಕ್ಕೆ ಮಾರುಕಟ್ಟೆ ಪ್ರವೇಶಿಸುತ್ತಿದೆ. ಈ ಹಿನ್ನಲೆಯಲ್ಲಿ ಪುಣೆ-ಮುಂಬೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ವಾಹನದಲ್ಲಿ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳನ್ನು ಜೋಡಣೆ ಮಾಡಿರುವುದು ಬಹುತೇಕ ಖಚಿತವಾಗಿದೆ.

ಹೊಸ ಫೋರ್ಸ್ ಟ್ರಾಕ್ಸ್ ಕ್ರೂಸರ್‌ಲ್ಲಿ ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮತ್ತು ಹೆಡ್‌ಲ್ಯಾಂಪ್ ಕ್ಲಸ್ಟರ್ ಆಕರ್ಷಕವಾಗಿದ್ದು, ಹೊಸದಾದ ವರ್ಟಿಕಲ್ ಮೌಂಟೆಡ್ ಟೈಲ್ ಲ್ಯಾಂಪ್ ಸೌಲಭ್ಯವನ್ನು ನೀಡಲಾಗಿದೆ.

ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಹಳೆಯ ಆವೃತ್ತಿಗಿಂತಲೂ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳನ್ನು ಹೊಂದಿರುವ ಹೊಸ ಟ್ರಾಕ್ಸ್ ಕ್ರೂಸರ್ ಮಾದರಿಯಲ್ಲಿ ಹೊಸದಾಗಿ ಅಳವಡಿಕೆ ಮಾಡಿರುವ ಬ್ಲ್ಯಾಕ್ ಪ್ಲಾಸ್ಟಿಕ್ ಫ್ಲೈರ್ಡ್ ವೀಲ್ಹ್ ಆರ್ಚ್ ಮತ್ತು ಫುಟ್‌ಬೋರ್ಡ್ ಸೌಲಭ್ಯವು ಗಮನಸೆಳೆಯುತ್ತದೆ.

ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಇನ್ನು ಹೊಸ ಫೋರ್ಸ್ ಟ್ರಾಕ್ಸ್ ಕ್ರೂಸರ್‌ನ ಒಳಭಾಗದ ವಿನ್ಯಾಸದಲ್ಲೂ ಹಲವಾರು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಈ ಹಿಂದಿನ ಮಾದರಿಗಿಂತಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳು ಸುಖಕರ ಪ್ರಯಾಣಕ್ಕೆ ಅನುಕೂರವಾಗಿವೆ. ಡ್ಯುಯಲ್ ಕಲರ್ ಟೋನ್ ಥೀಮ್, ಹೊಸ ಇನ್‌ಸ್ಟ್ರುಮೆಂಟಲ್ ಕ್ಲಸ್ಟರ್ ಜೊತೆ ಬ್ಲ್ಯೂ ಲಿಟ್ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ ನೀಡಲಾಗಿದ್ದು, ಈ ಹಿಂದಿನ ಆವೃತ್ತಿಯಲ್ಲಿ ಆಡಿಯೋ ಸಿಸ್ಟಂ ಸೌಲಭ್ಯವನ್ನು ಹೆಚ್ಚುವರಿಯಾಗಿ ಖರೀದಿ ಮಾಡಬೇಕಿತ್ತು.

ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಹಾಗೆಯೇ ಹೊಸ ವಾಹನದಲ್ಲಿ ಮುಂಭಾಗದ ಪ್ರಯಾಣಿಕರಿಗೆ ಎಸಿ ಸೌಲಭ್ಯವಲ್ಲದೆ ಹಿಂಬದಿಯಲ್ಲಿ ರೂಫ್ ಮೌಂಟೆಡ್ ವೆಂಟ್ಸ್, ಡ್ಯುಯಲ್ ಟೋನ್ ಬಿಜ್ ಸೀಟುಗಳು ಮತ್ತು ಹಿಂಬದಿಯ ಸವಾರರಿಗೆ ಅನುಕೂಲಕರ ಆಸನ ಸೌಲಭ್ಯ ನೀಡಲಾಗಿದೆ. ಈ ಮೂಲಕ ಹೊಸ ವಾಹನದಲ್ಲಿ ಚಾಲಕ ಸೇರಿ ಒಟ್ಟು 13 ಜನ ಪ್ರಯಾಣಿಕರು ಅರಾಮದಾಯಕವಾಗಿ ಪ್ರಯಾಣಿಸಬಹುದಾಗಿದ್ದು, 3+4+3+3 ಮಾದರಿಯಲ್ಲಿ ಆಸನ ವ್ಯವಸ್ಥೆ ಹೊಂದಿದೆ. ಮುಂಭಾಗದಲ್ಲಿ ಚಾಲಕನ ಸೀಟು ಪ್ರತ್ಯೇಕ ನಿಯಂತ್ರಣ ಹೊಂದಿದ್ದು, ಹಿಂಬದಿಯಲ್ಲಿ ಬೆಂಚ್ ಸೀಟಗಳನ್ನು ನೀಡಲಾಗಿದೆ.

ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಇದಲ್ಲದೇ ಹೊಸ ವಾಹನದಲ್ಲಿ ಸುಧಾರಿತ ಸುರಕ್ಷಾ ಸೌಲಭ್ಯಗಳನ್ನು ಹೆಚ್ಚಿಸಲಾಗಿದ್ದು, ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಬದಿಯಲ್ಲಿ ಡ್ರಮ್ ಬ್ರೇಕ್ ನೀಡಲಾಗಿದೆ. ಜೊತೆಗೆ ಪ್ರತ್ಯೇಕವಾದ ರಿಗಿಡ್-ಆಕ್ಸೆಲ್ ಸೌಲಭ್ಯವನ್ನು ಹೊಂದಿದಿರುವುದು ಹೊಸ ವಾಹನಕ್ಕೆ ಮತ್ತಷ್ಟು ಬಲಿಷ್ಠತೆ ತಂದುಕೊಡಲಿದೆ.

ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಎಂಜಿನ್ ಸಾಮರ್ಥ್ಯ

ಹೊಸ ವಾಹನವು ಬಿಎಸ್-6 ವೈಶಿಷ್ಟ್ಯತೆಯ 2.6-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90-ಬಿಎಚ್‌ಪಿ ಮತ್ತು 260-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಬಿಡುಗಡೆಯ ಸನಿಹದಲ್ಲಿ 2020ರ ಫೋರ್ಸ್ ಟ್ರಾಕ್ಸ್ ಕ್ರೂಸರ್

ಇನ್ನು ಹೊಸದಾಗಿ ಜಾರಿಗೆ ತರಲಾಗುತ್ತಿರುವ ಬಿಎಸ್-6 ನಿಯಮದಿಂದಾಗಿ ವಾಹನಗಳ ಎಂಜಿನ್‌ನಲ್ಲಿ ಮಾತ್ರವಲ್ಲದೆ ಪ್ರಯಾಣಿಕರ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆಯಾಗಿದ್ದು, ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಬೆಲೆ ಕೂಡಾ ಹೆಚ್ಚಳವಾಗಿದೆ.

Most Read Articles

Kannada
English summary
Force Trax Cruiser Production Spec Spied Testing Ahead Of Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X