ಇಕೋಸ್ಪೋರ್ಟ್ ಕಾರು ಮಾದರಿಗಾಗಿ ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಿದೆ ಫೋರ್ಡ್

ಫೋರ್ಡ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾದ ಇಕೋಸ್ಪೋರ್ಟ್ ಆವೃತ್ತಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಕೆಲವು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಶೀಘ್ರದಲ್ಲೇ ಹೊಸ ಕಾರು ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ.

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಬಿಎಸ್-6 ಇಕೋಸ್ಪೋರ್ಟ್ ಮಾದರಿಯಲ್ಲಿ ಸದ್ಯ ವಿಂಡೋಸ್ ಆಧರಿತ ಫ್ಲೈ ಆಡಿಯೋ ಸಿಸ್ಟಂ ಜೋಡಣೆ ಹೊಂದಿದ್ದು, ಹೊಸದಾಗಿ ಪರಿಚಯಿಸಲಾಗುತ್ತಿರುವ ಆಡಿಯೋ ಸಿಸ್ಟಂ ಮಾದರಿಯು ಅಂಡ್ರಾಯಿಡ್ ಒಎಸ್ ಆಧರಿಸಿ ಕಾರ್ಯನಿರ್ವಹಿಸಲಿದೆ. ಇದು ಗ್ರಾಹಕರಿಗೆ ಹೊಸ ಅನುಭವ ನೀಡಲಿದ್ದು, ಹೊಸ ಆಡಿಯೋ ಸಿಸ್ಟಂ ಹೊಂದಿರುವ ಮಾದರಿಯು ದಸರಾ ಸಂಭ್ರಮಕ್ಕಾಗಿ ಬಿಡುಗಡೆ ಮಾಡಲಾಗುತ್ತಿದೆ.

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಹೊಸ ಅಂಡ್ರಾಯಿಡ್ ಒಎಸ್ ಆಧರಿತ ಆಡಿಯೋ ಇನ್ಪೋಟೈನ್‌ಮೆಂಟ್ ಸಿಸ್ಟಂನಲ್ಲಿ ವೈಫೈ ಕನೆಕ್ವಿಟಿ, ಏರ್ ಅಪ್ಡೆಟ್, ಕಾನ್ಫೆರೆನ್ಸ್ ಕಾಲ್ ಸೌಲಭ್ಯ, ಲೈವ್ ಟ್ರಾಫಿಕ್ ಅಪ್ಡೆಟ್, ಬ್ಲ್ಯೂಟೂತ್ ಕಸ್ಟೈಜೈಡ್ ಫೀಚರ್ಸ್ ಹೊಂದಿದೆ.

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಹಾಗೆಯೇ ಹೊಸ ಆಡಿಯೋ ಸಿಸ್ಟಂನಲ್ಲಿ ನ್ಯಾವಿಗೇಷನ್‌ಗಾಗಿ ಪ್ರತ್ಯೇಕವಾದ ಎಸ್‌ಡಿ ಕಾರ್ಡ್ ಬಳಕೆ ಮಾಡುವ ಅವಶ್ಯಕತೆಯಿಲ್ಲದಿರುವುದು ಪ್ರಮುಖ ಫೀಚರ್ಸ್‌ಗಳಾಗಿದ್ದು, ಚಾಲನೆ ವೇಳೆ ಆಡಿಯೋ ಸಿಸ್ಟಂ ಬಳಕೆಯನ್ನು ಸುಲಭಗೊಳಿಸಿದೆ.

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಹೊಸ ಕಾರು ಮಾದರಿಯು ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಸೌಲಭ್ಯಕ್ಕಾಗಿ ಯಾವುದೇ ಹೆಚ್ಚುವರಿ ದರ ನಿಗದಿ ಮಾಡುವ ಸಾಧ್ಯತೆಗಳಿಲ್ಲ. ಇದಕ್ಕೆ ಕಾರಣ, ಇಕೋಸ್ಪೋರ್ಟ್ ಪ್ರತಿಸ್ಪರ್ಧಿ ಕಾರು ಮಾದರಿಗಳಲ್ಲಿ ಈಗಾಗಲೇ ಈ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ನೀಡಲಾಗುತ್ತಿದ್ದು, ದೀಪಾವಳಿ ಸಂಭ್ರಮ ವೇಳೆ ಕಾರು ಖರೀದಿದಾರರನ್ನು ಸೆಳೆಯಲು ಈ ಫೀಚರ್ಸ್ ನೀಡಲಾಗಿದೆ.

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಇನ್ನು ಫೋರ್ಡ್ ಇಕೋಸ್ಪೋರ್ಟ್ ಕಾರು ಮಾದರಿಯು ಬಿಎಸ್-6 ಎಂಜಿನ್ ಜೋಡಣೆ ನಂತರ ಮತ್ತಷ್ಟು ಗ್ರಾಹಕರನ್ನು ಸೆಳೆಯುತ್ತಿದ್ದು, 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಇಕೋಸ್ಪೋರ್ಟ್ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.19 ಲಕ್ಷ ಮತ್ತು ರೂ. 11.73 ಲಕ್ಷ ಬೆಲೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಪ್ರೀಮಿಯಂ ಫೀಚರ್ಸ್ ಮತ್ತು ಸುರಕ್ಷಾ ಸೌಲಭ್ಯಗಳನ್ನು ಒಳಗೊಂಡಿದ್ದು, ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಮಾದರಿಗಳೊಂದಿಗೆ ಉತ್ತಮ ಪೈಪೋಟಿ ಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದುಕೊಳ್ಳಲಿದೆ ಇಕೋಸ್ಪೋರ್ಟ್

ಫೋರ್ಡ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಇಕೋಸ್ಪೋರ್ಟ್ ಕಾರು ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಮಹೀಂದ್ರಾ ಜೊತೆಗಿನ ಸಹಭಾಗೀತ್ವ ಯೋಜನೆಯಿಂದಾಗಿ ಫೋರ್ಡ್ ಕಂಪನಿಯು ಇಕೋಸ್ಪೋರ್ಟ್ ಸೇರಿದಂತೆ ತನ್ನ ಬಹುತೇಕ ಕಾರು ಮಾದರಿಗಳಲ್ಲಿ ಹೊಸ ಎಂಜಿನ್ ಆಯ್ಕೆಗಳನ್ನು ಪರಿಚಯಿಸಬಹುದಾದ ಸಾಧ್ಯತೆಗಳಿವೆ.

More from DriveSpark

Article Published On: Tuesday, October 20, 2020, 14:34 [IST]
English summary
Ford Ecosport gets new infotainment system with android update. Read in Kannada.
Read more on ಫೋರ್ಡ್ ford
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+