ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಫೋರ್ಡ್ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಎಂಡೀವರ್ ಎಸ್‍‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಫೋರ್ಡ್ ಎಂಡೀವರ್ ಎಸ್‍‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎವರೆಸ್ಟ್ ಎಂದು ಕರೆಯಲಾಗುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಭಾರತದಲ್ಲಿ ಬಿಡುಗಡೆಯಾಗುವ ಮುನ್ನ ಹೊಸ ಫೋರ್ಡ್ ಎಂಡೀವರ್ ಹೊಸ ಎಂಜಿನ್ ಅನ್ನು ಅಳವಡಿಸಲಿದೆ. ಹೊಸದಾಗಿ 2.0 ಲೀಟರ್ ಬೈ-ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿ‍ನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ. ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿರುವ ಎಂಡೀವರ್ ಎಸ್‍‍ಯುವಿಯ ಎರಡು ಎಂಜಿನ್‍ಗಳನ್ನು ಬದಲಾಯಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಪ್ರಸ್ತುತ ಎಂಡೀವರ್ ಎಸ್‍‍ಯುವಿನಲ್ಲಿರುವ ಎಂಜಿನ್‍‍ಗಳ ಬದಲಾವಣೆಗೆ ಪ್ರಮುಖ ಕಾರಣವೆಂದರೆ ಎಂಡೀವರ್ ಬೆಲೆಯನ್ನು ದುಬಾರಿಯಾಗಿಸುತ್ತದೆ. ಈ ಎಸ್‍‍ಯುವಿಯ ಪ್ರಸ್ತುತ ಎಂಜಿನ್‍‍ಗಳನ್ನು ನವೀಕರಿಸುವುದರಿಂದ ಎಂಡೀವರ್ ಬೆಲೆಗಳನ್ನು ಸುಮಾರು ರೂ.3 ರಿಂದ ರೂ.4 ಲಕ್ಷಗಳಾವರೆಗೆ ಬೆಲೆಯನ್ನು ಹೆಚ್ಚಿಸಬೇಕಾಗಿತ್ತು. ಹೊಸ ಎಂಜಿನ್ ಅನ್ನು ಅಳವಡಿಸುವುದರಿಂದ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಫೋರ್ಡ್ ಎಂಡೀವರ್ ಎಸ್‍‍ಯುವಿಯಲ್ಲಿ 2.2 ಲೀಟರ್ ಡೀಸೆಲ್ ಎಂಜಿನ್ ಅಳವಡಿಸಲಾಗಿದ್ದು, ಈ ಎಂಜಿನ್ 158 ಬಿ‍‍ಹೆಚ್‍‍ಪಿ ಪವರ್ ಮತ್ತು 385 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀ ಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಎಸ್‍‍ಯುವಿಯಲ್ಲಿರುವ 3.2-ಲೀಟರ್ ಡೀಸೆಲ್ ಎಂಜಿನ್ 197-ಬಿಎಚ್‌ಪಿ ಪವರ್ ಮತ್ತು 470 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 4x4 ಡ್ರೈವ್ ಟೆಕ್ನಾಲಜಿ ಸೌಲಭ್ಯ ಹೊಂದಿದೆ. ಈ ಎಸ್‍ಯುವಿಯ ಮುಂಭಾಗದಲ್ಲಿ ಫ್ರಂಟ್ ಗ್ರಿಲ್ ಮತ್ತು ಕ್ರೋಮ್ ಸ್ಲಾಟ್‌ಗಳನ್ನು ಅಳವಡಿಸಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಈ ಎಸ್‍ಯುವಿಯಲ್ಲಿ ಹೆಡ್‌ಲ್ಯಾಂಪ್ ಯುನಿಟ್, ಎಲ್ಇಡಿ ಟೇಲ್‍ಲೈಟ್, 18-ಇಂಚಿನ ಅಲಾಯ್ ವ್ಹೀಲ್, ನವೀಕರಿಸಿದ ಫ್ರಂಟ್ ಬಂಪರ್, ಸೆಮಿ ಪ್ಯಾರಾಲೆಲ್ ಅಸಿಸ್ಟ್, ಪನರೋಮಿಕ್ ಸನ್‌ರೂಫ್ ಅನ್ನು ಅಳವಡಿಸಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಈ ಎಸ್‍ಯುವಿ ಇಂಟಿರಿಯರ್‍‍ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಫೋರ್ಡ್ ಎಂಡೀವರ್ ಎಸ್‍‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏಳು ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿ‍ಎಸ್- 6 ಫೋರ್ಡ್ ಎಂಡೀವರ್

ಬಿಎಸ್-6 ಟೊಯೊಟಾ ಎಂಡೀವರ್ ಎಸ್‍‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಫಾರ್ಚೂನರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಇಸುಝು ಎಂಯು-ಎಕ್ಸ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಫೋರ್ಡ್ ford
English summary
BS6 Ford Endeavour 2.0-litre diesel, 10-speed auto launch soon.Read in Kannada
Story first published: Friday, January 31, 2020, 17:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X