ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಫೋರ್ಡ್ ಇಂಡಿಯಾ ಕಂಪನಿಯು ತನ್ನ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳು ಬಿಡುಗಡೆಗೊಳಿಸಿತ್ತು. ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.35.10 ಲಕ್ಷಗಳಾಗಿದೆ.

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಫೋರ್ಡ್ ಕಂಪನಿಯು ತನ್ನ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಆಕರ್ಷಕ ಟಿವಿಸಿಯನ್ನು ಬಿಡುಗಡೆಗೊಳಿಸಿದೆ. ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯು ಟೈಟಾನಿಯಂ ಪ್ಲಸ್ ಮಾದರಿಯನ್ನು ಆಧರಿಸಿದೆ. ಫೋರ್ಡ್ ಇಂಡಿಯಾ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸುವುದರ ಬಗ್ಗೆ ಯಾವುದೇ ಸುಳಿವು ನೀಡರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಫೋರ್ಡ್ ಎಂಡೀವರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೊಸ ಫೋರ್ಡ್ ಎಸ್‍ಯುವಿಯ ಬಗ್ಗೆ ಚರ್ಚೆಯಾಗಿ ಮಾರ್ಪಟ್ಟಿತು.

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಟೊಯೊಟಾ ಫಾರ್ಚೂನರ್ ಟಿಆರ್‌ಡಿ ಸ್ಪೋರ್ಟಿ ಎಸ್‍ಯುವಿಗೆ ಪೈಪೋಟಿ ನೀಡಲು ಫೋರ್ಡ್ ಕಂಪನಿಯು ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಎಂಡೀವರ್ ಸ್ಪೋರ್ಟ್ ಹೊರಭಾಗದಲ್ಲಿ ಬ್ಲ್ಯಾಕ್ ಕಾಸ್ಮೆಟಿಕ್ ಅಂಶಗಳನ್ನು ಒಳಗೊಂಡಿದೆ, ಇದು ಈ ಎಂಡೀವರ್ ಸ್ಪೋರ್ಟ್ ಎಸ್‍ಯುವಿಗೆ ಮತ್ತಷ್ಟು ಸ್ಪೋರ್ಟಿಯರ್ ಲುಕ್ ಅನ್ನು ನೀಡುತ್ತದೆ.

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಬ್ಲ್ಯಾಕ್ ಔಟ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಬ್ಲ್ಯಾಕ್ ಲೋ ಬಂಪರ್, ಬ್ಲ್ಯಾಕ್ ಅಲಾಯ್ ವ್ಹೀಲ್ ಗಳು ಮತ್ತು ಹೆಚ್ಚುವರಿಯಾಗಿ ನೇಮ್-ಪ್ಲೇಟ್ ಮತ್ತು ಒಆರ್‌ವಿಎಂಗಳಲ್ಲಿ ಬ್ಲ್ಯಾಕ್ ಅಂಶಗಳು ಒಳಗೊಂಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಇನ್ನು ಈ ಎಸ್‍ಯುವಿಯಲ್ಲಿ ಆಲ್-ಎಲ್ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್ ಲ್ಯಾಂಪ್, ಡಿಆರ್‌ಎಲ್ ಮತ್ತು ಫಾಗ್‌ಲೈಟ್‌ಗಳನ್ನು ಸಹ ಹೊಂದಿದೆ. ಇವುಗಳನ್ನು ಸ್ಟ್ಯಾಂಡರ್ಡ್ ಮಾದರಿಗಳಿಂದ ಎರವಲು ಪಡೆಯಲಾಗಿದೆ.

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಈ ಹೊಸ ಎಂಡೀವರ್ ಸ್ಪೋರ್ಟ್ಸ್ ಎಸ್‍ಯುವಿಯ ಹಲವು ಕಡೆಗಳಲ್ಲಿ 'ಸ್ಪೋರ್ಟ್' ಬ್ಯಾಡ್ಜಿಂಗ್ ಅನ್ನು ಸಹ ನೋಡಬಹುದಾಗಿದೆ. ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಮತ್ತು ಸೈಡ್ ಪೊಫೈಲ್ ನಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ. ಆದರೆ ಎಸ್‍ಯುವಿಯ ಹಿಂಭಾಗದ ಬಂಪರ್ ಸಿಲ್ವರ್ ಬಣ್ಣದ ಕ್ರೋಮ್‌ನ ಫಿನಿಶಿಂಗ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಫೋರ್ಡ್ ಎಂಡೀವರ್ ಸ್ಪೋರ್ಟ್ಸ್ ಎಸ್‍ಯುವಿಯಲ್ಲಿ ಒಂದೇ ಡ್ಯುಯಲ್-ಟೋನ್ ಬ್ಲ್ಯಾಕ್ ಮತ್ತು ಬೀಜ್ ಥೀಮ್ ಅನ್ನು ಹೊಂದಿರುತ್ತದೆ. ಈ ಎಸ್‍ಯುವಿಯ ಒಳಭಾಗದ ಕ್ಯಾಬಿನ್ ಕೆಲವು ರೆಡ್ ಬಣ್ಣದ ಅಂಶಗಳನ್ನು ಹೊಂದಿದೆ.

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಈ ಎಸ್‍ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿ‍‍ಹೆಚ್‍‍ಪಿ ಪವರ್ ಮತ್ತು 420 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ‍ನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ.

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಟಿವಿಸಿ ಬಿಡುಗಡೆ

ಎಂಡೀವರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಪೋರ್ಡ್ ಎಸ್‍ಯುವಿಯು ಅತ್ಯಂತ ಸಮರ್ಥ ಆಫ್-ರೋಡರ್ ಆಗಿದೆ. ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯು ಬಿಡುಗಡೆಗೊಳಿಸಿರುವುದರಿಂದ ಹಬ್ಬದ ಸಮಯದಲ್ಲಿ ಮಾರಾಟವನ್ನು ಹೆಚ್ಚಿಸಲು ನೆರವಾಗುತ್ತದೆ.

Most Read Articles

Kannada
English summary
Ford Endeavour Sport TVC Released. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X