ಫ್ರೀಸ್ಪೈಲ್ ಕಾರಿನಲ್ಲಿ ಫ್ಲೈರ್ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ ಫೋರ್ಡ್
ಫೋರ್ಡ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಫ್ರೀಸ್ಪೈಲ್ ಕ್ರಾಸ್ ಓವರ್ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿ ಫ್ಲೈರ್ ಎನ್ನುವ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ್ದು, ಸ್ಪೆಷಲ್ ಎಡಿಷನ್ ಮಾದರಿಯು ಸೀಮಿತ ಅವಧಿಗೆ ಮಾತ್ರ ಖರೀದಿಗೆ ಲಭ್ಯವಿರಲಿದೆ.

ಹೊಸ ಫ್ಲೈರ್ ಎಡಿಷನ್ ಮಾದರಿಯು ಫ್ರೀಸ್ಟೈಲ್ ಕಾರಿನ ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಪೆಟ್ರೋಲ್ ಮಾದರಿಯು ರೂ. 7.69 ಲಕ್ಷ ಮತ್ತು ಡೀಸೆಲ್ ಮಾದರಿಯು ರೂ.8.79 ಲಕ್ಷಕ್ಕೆ ಖರೀದಿಗೆ ಲಭ್ಯವಿರಲಿದೆ. ಕುಸಿದ ಕಾರು ಮಾರಾಟನ್ನು ಸುಧಾರಿಸಲು ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಾಗಿದ್ದು, ಸ್ಪೋರ್ಟಿ ಲುಕ್ ಹೆಚ್ಚಿಸಲು ರೆಡ್ ಥೀಮ್ ವಿನ್ಯಾಸ ನೀಡಲಾಗಿದೆ.

ಹೊಸ ಕಾರಿನಲ್ಲಿ ಹಲವಾರು ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಆಕರ್ಷಕವಾಗಿದ್ದು, ಸ್ಪೋರ್ಟಿ ಲುಕ್ ಮೂಲಕ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಪ್ರಿಯರ ಆಕರ್ಷಣೆಗೆ ಕಾರಣವಾಗಲಿದೆ.

ಸ್ಪೆಷಲ್ ಎಡಿಷನ್‌ಗೆ ತಕ್ಕಂತೆ ಹೊಸ ಕಾರಿನಲ್ಲಿ ಬ್ಲ್ಯಾಕ್ ಕಲರ್ ರೂಫ್, ರೂಫ್ ರೈಲ್ಸ್ ಮತ್ತು ವಿಂಗ್ ಮಿರರ್ ಮೇಲೆ ರೆಡ್ ಕಾಟ್ರಾಸ್ಟ್ ಲೇಪನ ಮಾಡಲಾಗಿದ್ದು, 15-ಇಂಚಿನ ರೆಡ್ ಮತ್ತು ಬ್ಲ್ಯಾಕ್ ಔಟ್ ಅಲಾಯ್ ಚಕ್ರವು ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ನೀಡಿದೆ.

ಹೊರಭಾಗದ ವಿನ್ಯಾಸದಂತೆ ಒಳಭಾಗದಲ್ಲೂ ಕೂಡಾ ಕೆಲವು ಪ್ರಮುಖ ಬದಲಾವಣೆಗಳನ್ನು ತರಲಾಗಿದ್ದು, ಡ್ಯುಯಲ್ ಟೋನ್ ಸೀಟುಗಳು, ರೆಡ್ ಕಾಟ್ರಾಸ್ಟ್ ಮಾಡಲಾದ ಡೋರ್, ಸೀಟುಗಳ ಮೇಲೆ ಫ್ಲೈರ್ ಬ್ಯಾಜ್ಡ್ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಫ್ಲೈರ್ ವೆರಿಯೆಂಟ್ ಅನ್ನು ಫ್ರೀಸ್ಟೈಲ್ ಕಾರಿನ ಟಾಪ್ ವೆರಿಯೆಂಟ್ ಆದ ಟೈಟಾನಿಯಂ ಪ್ಲಸ್ ಮಾದರಿಯಲ್ಲಿ ಖರೀದಿಗೆ ಲಭ್ಯವಿರಲಿದ್ದು, ಇದು ಸ್ಟ್ಯಾಂಡರ್ಡ್ ಮಾದರಿಗಿಂತ ರೂ. 30 ಸಾವಿರದಷ್ಟು ಹೆಚ್ಚುವರಿ ಬೆಲೆಯೊಂದಿಗೆ ಮಾರಾಟಗೊಳ್ಳಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಫ್ರೀಸ್ಟೈಲ್ ಸ್ಟ್ಯಾಂಡರ್ಡ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.49 ಲಕ್ಷ ಬೆಲೆ ಹೊಂದಿದ್ದು, ಸ್ಪೆಷಲ್ ಎಡಿಷನ್ ಮಾದರಿಯು ಮುಂದಿನ ಕೆಲವೇ ದಿನಗಳ ವರೆಗೆ ಮಾತ್ರ ಖರೀದಿಗೆ ಲಭ್ಯವಿರಲಿದೆ.

ಫ್ರೀಸ್ಟೈಲ್ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಟರ್ಬೋ ಮಾದರಿಯು ಖರೀದಿಗೆ ಲಭ್ಯವಿದ್ದು, ಎರಡು ಮಾದರಿಗಳಲ್ಲೂ ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಇನ್ನುಳಿದಂತೆ ಹೊಸ ಕಾರಿನಲ್ಲಿ ಗರಿಷ್ಠ ಪ್ರಯಾಣಿಕರ ಸುರಕ್ಷಾ ಕ್ರಮಗಳನ್ನು ಅಳವಡಿಸಲಾಗಿದ್ದು, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಬ್ಲೂಟೂಥ್ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ, ಫುಶ್ ಬಟನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, 6 ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕ್ ಅಸಿಸ್ಟ್, ಎಬಿಎಸ್ ಜೊತೆ ಇಬಿಡಿ ಮತ್ತು ಫೋರ್ಡ್ ಕಂಪನಿಯ ಪಾಸ್ ಕೆನೆಕ್ಟೆಡ್ ಟೆಕ್ನಾಲಜಿ ಪಡೆದುಕೊಂಡಿದೆ.


Click it and Unblock the Notifications








