Just In
- 7 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 8 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 8 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 10 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫ್ರೀಸ್ಟೈಲ್ ಕಾರಿನಲ್ಲಿ ಸ್ಪೆಷಲ್ ಎಡಿಷನ್ ಪರಿಚಯಿಸಲಿದೆ ಫೋರ್ಡ್
ಫೋರ್ಡ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕ್ರಾಸ್ ಓವರ್ ಹ್ಯಾಚ್ಬ್ಯಾಕ್ ಮಾದರಿಯಾದ ಫ್ರೀಸ್ಟೈಲ್ ಕಾರಿನಲ್ಲಿ ಸ್ಪೆಷಲ್ ಎಡಿಷನ್ ಪರಿಚಯಿಸುತ್ತಿದ್ದು, ಹೊಸ ಎಡಿಷನ್ ಕಾರು ಈಗಾಗಲೇ ಅಧಿಕೃತ ಡೀಲರ್ಸ್ ಬಳಿ ಸ್ಟಾಕ್ ಮಾಡುತ್ತಿರುವ ಮಾಹಿತಿ ಬಹಿರಂಗವಾಗಿದೆ.
ಫ್ರೀಸ್ಟೈಲ್ ಕಾರಿನಲ್ಲಿ ಸೀಮಿತ ಅವಧಿಗಾಗಿ ಪರಿಚಯಿಸಲಾಗುತ್ತಿರುವ ಫ್ಲೈರ್ ಎಡಿಷನ್ ಮಾದರಿಯು ಹೊಸ ಕಾರಿಗೆ ಮತ್ತಷ್ಟು ಸ್ಟೋರ್ಟಿ ಲುಕ್ ನೀಡಿದ್ದು, ಕಂಪ್ಯಾಕ್ಟ್ ಎಸ್ಯುವಿ ಪ್ರಿಯರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ. ಸ್ಟ್ಯಾಂಡರ್ಡ್ ಮಾದರಿಗಿಂತಲೂ ತುಸು ಬದಲಾವಣೆಗೊಂಡಿರುವ ಫ್ಲೈರ್ ಎಡಿಷನ್ ಮಾದರಿಯು ಯಾವುದೇ ಹೆಚ್ಚುವರಿ ಬೆಲೆ ಪಡೆದುಕೊಳ್ಳದೆ ಮಾರುಕಟ್ಟೆ ಪ್ರವೇಶಿಸಲಿದೆ ಎನ್ನಲಾಗಿದ್ದು, ಶೀಘ್ರದಲ್ಲೇ ಹೊಸ ಕಾರು ಅಧಿಕೃತವಾಗಿ ಬಿಡುಗಡೆಯಾಗಲಿದೆ.
ಫ್ಲೈರ್ ಎಡಿಷನ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಆಕರ್ಷಕವಾಗಿದ್ದು, ಫ್ಲೈರ್ ಬ್ಯಾಡ್ಜ್ನೊಂದಿಗೆ ಬಾಡಿ ಗ್ರಾಫಿಕ್ಸ್ ವಿನ್ಯಾಸವು ಕೂಡಾ ಕ್ರಾಸ್ ಓವರ್ ಹ್ಯಾಚ್ಬ್ಯಾಕ್ ಕಾರಿಗೆ ಮತ್ತಷ್ಟು ಮೆರಗು ನೀಡಿದೆ.
ಸ್ಪೆಷಲ್ ಎಡಿಷನ್ಗೆ ತಕ್ಕಂತೆ ಹೊಸ ಕಾರಿನಲ್ಲಿ ಬ್ಲ್ಯಾಕ್ ಕಲರ್ ರೂಫ್, ರೂಫ್ ರೈಲ್ಸ್ ಮತ್ತು ವಿಂಗ್ ಮಿರರ್ ಮೇಲೆ ರೆಡ್ ಕಾಟ್ರಾಸ್ಟ್ ಲೇಪನ ಮಾಡಲಾಗಿದ್ದು, ರೆಡ್ ಮತ್ತು ಬ್ಲ್ಯಾಕ್ ಔಟ್ ಅಲಾಯ್ ಚಕ್ರವು ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ನೀಡಿದೆ.
ಹೊರಭಾಗದ ವಿನ್ಯಾಸದಂತೆ ಒಳಭಾಗದಲ್ಲೂ ಕೂಡಾ ಕೆಲವು ಪ್ರಮುಖ ಬದಲಾವಣೆಗಳನ್ನು ತರಲಾಗಿದ್ದು, ಡ್ಯುಯಲ್ ಟೋನ್ ಸೀಟುಗಳು, ರೆಡ್ ಕಾಟ್ರಾಸ್ಟ್ ಮಾಡಲಾದ ಡೋರ್, ಸೀಟುಗಳ ಮೇಲೆ ಫ್ಲೈರ್ ಬ್ಯಾಜ್ಡ್ ನೀಡಲಾಗಿದೆ.
ಮಾಹಿತಿಗಳ ಪ್ರಕಾರ, ಹೊಸ ಫ್ಲೈರ್ ವೆರಿಯೆಂಟ್ ಅನ್ನು ಫ್ರೀಸ್ಟೈಲ್ ಕಾರಿನ ಟಾಪ್ ವೆರಿಯೆಂಟ್ ಆದ ಟೈಟಾನಿಯಂ ಪ್ಲಸ್ ಮಾದರಿಯಲ್ಲಿ ಖರೀದಿಗೆ ಲಭ್ಯವಿರಲಿದ್ದು, ಸ್ಟ್ಯಾಂಡರ್ಡ್ ಮಾದರಿಯ ಬೆಲೆಯಲ್ಲೇ ಮಾರಾಟಗೊಳ್ಳಲಿವೆ ಎನ್ನಲಾಗಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಸದ್ಯ ಮಾರುಕಟ್ಟೆಯಲ್ಲಿ ಫ್ರೀಸ್ಟೈಲ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.49 ಲಕ್ಷ ಬೆಲೆ ಹೊಂದಿದೆ. ಫ್ಲೈರ್ ಮಾದರಿಯು ಟಾಪ್ ಮಾದರಿಯ ಬೆಲೆಯಲ್ಲೇ ಖರೀದಿ ಲಭ್ಯವಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳನ್ನು ಒಳಗೊಂಡಿದೆ.
ಫ್ರೀಸ್ಟೈಲ್ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಟರ್ಬೋ ಮಾದರಿಯು ಖರೀದಿಗೆ ಲಭ್ಯವಿದ್ದು, ಎರಡು ಮಾದರಿಗಳಲ್ಲೂ ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ನೀಡಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..
ಇನ್ನುಳಿದಂತೆ ಹೊಸ ಕಾರಿನಲ್ಲಿ ಗರಿಷ್ಠ ಪ್ರಯಾಣಿಕರ ಸುರಕ್ಷಾ ಕ್ರಮಗಳನ್ನು ಅಳವಡಿಸಲಾಗಿದ್ದು, ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಬ್ಲೂಟೂಥ್ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ, ಫುಶ್ ಬಟನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, 6 ಏರ್ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕ್ ಅಸಿಸ್ಟ್, ಎಬಿಎಸ್ ಜೊತೆ ಇಬಿಡಿ ಮತ್ತು ಫೋರ್ಡ್ ಕಂಪನಿಯ ಪಾಸ್ ಕೆನೆಕ್ಟೆಡ್ ಟೆಕ್ನಾಲಜಿ ಪಡೆದುಕೊಂಡಿದೆ.