ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಕರೋನಾ ವೈರಸ್ ಅಟ್ಟಹಾಸದಿಂದಾಗಿ ಭಾರೀ ಸಂಕಷ್ಟಕ್ಕೆ ಸಿಲುಕಿರುವ ಆಟೋ ಉದ್ಯಮವು ಹೊಸ ಸವಾಲುಗಳೊಂದಿಗೆ ಸ್ಥಗಿತಗೊಂಡಿರುವ ಉದ್ಯಮ ಕಾರ್ಯಾಚರಣೆಗೆ ಮರುಚಾಲನೆ ನೀಡುತ್ತಿದ್ದು, ವೈರಸ್ ಭೀತಿ ನಡುವೆಯೂ ವಾಹನ ಮಾರಾಟ ಪ್ರಕ್ರಿಯೆಯನ್ನು ಆರಂಭಿಸುತ್ತಿವೆ.

ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಸದ್ಯ ವೈರಸ್ ಹೊಡೆದೊಡಿಸಲು ವಿಧಿಸಲಾಗಿರುವ ಲಾಕ್‌‌ಡೌನ್ ಅನ್ನು ಪರಿಸ್ಥಿತಿಗೆ ಅನುಗುಣವಾಗಿ ತೆರವುಗೊಳಿಸಲಾಗುತ್ತಿದ್ದು, ಹಸಿರು ಮತ್ತು ಕಿತ್ತಳೆ ವಲಯದಲ್ಲಿನ ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ದ ಅವಕಾಶ ನೀಡಲಾಗಿದೆ. ಇದರಿಂದ ಕೆಲವು ಸುರಕ್ಷಾ ಕ್ರಮಗಳೊಂದಿಗೆ ವಾಣಿಜ್ಯ ವ್ಯಾಪಾರವನ್ನು ಪುನಾರಂಭಿಸುತ್ತಿರುವ ಉದ್ಯಮ ಸಂಸ್ಥೆಗಳು ರೋಗ ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದು, ಫೋರ್ಡ್ ಇಂಡಿಯಾ ಕೂಡಾ ಕಾರು ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾಂಭಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಶುರುಮಾಡಿದೆ.

ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಕೇಂದ್ರ ಸರ್ಕಾರವು 3ನೇ ಹಂತದ ಲಾಕ್‌ಡೌನ್ ವಿಧಿಸುವುರೊಂದಿಗೆ ಹಸಿರು ವಲಯಗಳಿಗೆ ಹಲವು ವಿನಾಯ್ತಿಗಳನ್ನು ನೀಡಿದ್ದು, ರೆಡ್ ಅಲರ್ಟ್ ಪ್ರದೇಶಗಳಲ್ಲಿನ ವಾಣಿಜ್ಯ ಚಟುವಟಿಕೆಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಹೀಗಾಗಿ ಮೇ 3ರ ನಂತರ ನೇರ ವಾಹನ ಮಾರಾಟವನ್ನು ಪುನಾರಂಭಿಸುವ ತವಕದಲ್ಲಿದ್ದ ಆಟೋ ಕಂಪನಿಗಳಿಗೆ ಇದು ಹಿನ್ನಡೆಯಾಗಿದ್ದು, ಗ್ರಾಹಕರು ಮತ್ತು ಉದ್ಯೋಗಿಗಳ ಸುರಕ್ಷತೆಯ ದೃಷ್ಠಿಯಿಂದ ಆನ್‌ಲೈನ್ ವಾಹನ ವಹಿವಾಟು ಆರಂಭಿಸಿವೆ.

ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಡಿಜಿಟಲ್ ಪ್ಲ್ಯಾಟ್‌‌ಫಾರ್ಮ್ ಮೂಲಕವೇ ಕಾರು ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಕೈಗೊಳ್ಳಲಿರುವ ಫೋರ್ಡ್ ಇಂಡಿಯಾ ಕಂಪನಿಯು ಗ್ರಾಹಕರ ಮನೆ ಬಾಗಿಲಿಗೆ ಕಾರು ಉತ್ಪನ್ನಗಳನ್ನು ತಲುಪಿಸಲಿದ್ದು, ಈ ವೇಳೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ತೆಗದುಕೊಳ್ಳಲಿದೆ.

MOST READ: ಕರೋನಾ ವೈರಸ್: ಹೊಸ ವಿಧಾನದ ಮೂಲಕ ಜನರ ಬಳಿ ಬರಲಿರುವ ಪೊಲೀಸರು..

ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಹೊಸ ಸುರಕ್ಷಾ ನಿಯಮದಡಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಯೊಂದಿಗೆ ಉತ್ಪನ್ನಗಳನ್ನು ತಲುಪಿಸುವುದರ ಜೊತೆಗೆ ಉದ್ಯೋಗಿಗಳಿಗೂ ಗರಿಷ್ಠ ಸುರಕ್ಷತೆ ಒದಗಿಸಲಿರುವ ಫೋರ್ಡ್ ಕಂಪನಿಯು ಆರ್ಥಿಕ ಸಂಕಷ್ಟದಿಂದ ಹೊರಬರಲು ಹಲವಾರು ಹೊಸ ಯೋಜನೆಗಳನ್ನು ರೂಪಿಸಿದೆ.

ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಇನ್ನು ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿರುವ ಫೋರ್ಡ್ ಕಂಪನಿಯು ವಿವಿಧ ಮಾದರಿಯ ವೈದ್ಯಕೀಯ ಉಪಕರಣಗಳಾದ ಪ್ರೊಟೆಕ್ವಿವ್ ಕ್ಲಾಥ್ ಸೇವೆದಂತೆ ವಿವಿಧ ಮಾದರಿಯ ಅಗತ್ಯ ಸೌಲಭ್ಯಗಳನ್ನು ರಾಜ್ಯ ಸರ್ಕಾರಗಳಿಗೆ ಒದಗಿಸುತ್ತಿದ್ದು, ಗ್ರಾಹಕರಿಗೆ ಎರಡು ತಿಂಗಳ ಹೆಚ್ಚುವರಿ ವಾರಂಟಿಯನ್ನು ಘೋಷಣೆ ಮಾಡಿದೆ.

MOST READ: ಎರಡು ಚಕ್ರಗಳಲ್ಲಿ ಚಲಿಸಿದ ಟ್ರಾಕ್ಟರ್, ಆನಂದ್ ಮಹೀಂದ್ರಾ ಹೇಳಿದ್ದೇನು?

ವೈರಸ್ ಭೀತಿ: ಆನ್‌ಲೈನ್ ಕಾರು ಮಾರಾಟ ಮತ್ತು ಗ್ರಾಹಕ ಸೇವೆಗಳಿಗೆ ಚಾಲನೆ ನೀಡಿದ ಫೋರ್ಡ್

ಇದಲ್ಲದೆ ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.

More from DriveSpark

Article Published On: Thursday, May 7, 2020, 12:52 [IST]
English summary
Ford introduces online contactless sales service platform details. Read in Kannada.
Read more on ಫೋರ್ಡ್ ford
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+