ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಆಕ್ಟೀವಿಯಾ ಕೂಡ ಒಂದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಕರೋನಾ ವೈರಸ್ ಭೀತಿಯಿಂದ ಈ ಹೂಸ ಸ್ಕೋಡಾ ಆಕ್ಟೀವಿಯಾ ಕಾರಿನ ಬಿಡುಗಡೆಯು ವಿಳಂಬವಾಗಿದೆ. ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಆ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗಿತ್ತು. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಆದರೆ ಈ ವರ್ಷದ ಕೊನೆಯಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಬೀತಿಯಿಂದಾಗಿ ಈ ಕಾರಿನ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಈ ಆಕ್ಟೀವಿಯಾ ಕಾರು ಮುಂದಿನ ವರ್ಷದ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಭಾರತದಲ್ಲಿ ಮೊದಲ ಬಾರಿಗೆ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಈ ಹೊಸ ಆಕ್ಟೀವಿಯಾ ಕಾರು ಹೊಸ ಎಲ್ಇಡಿ ಹೆಡ್ ಲೈಟ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಇದರೊಂದಿಗೆ ಎಲ್ಇಡಿ ಪಾಗ್ ಲ್ಯಾಂಪ್ ಅನ್ನು ಸಹ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಟೈಲ್-ಲೈಟ್ ಮತ್ತು ಹೊಸ 17 ಇಂಚಿನ ‘ರೋಟಾರೆ ಏರೋ' ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.

MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಎಂಕ್ಯೂವಿ ಪ್ಲಾಟ್‌ಫಾರ್ಮ್‌ನಡಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ 19 ಎಂಎಂ ಉದ್ದ ಮತ್ತು 15 ಎಂಎಂ ಅಗಲವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ 10 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಹೊಂದಿರಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಸ್ಕೋಡಾ ಅಕ್ಟೀವಾ ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ. 2020ರ ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍‍‍ಸಿ‍ಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ 1.5-ಲೀಟರ್ ಟಿಎಸ್ಐ ಎಂಜಿನ್ ಮತ್ತು ಲೀಟರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು. ಇದು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ.

Article Published On: Tuesday, July 28, 2020, 10:47 [IST]
English summary
Next-gen Skoda Octavia India Launch Pushed To Early 2021. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+