ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಕರೋನಾ ವೈರಸ್‌ನಿಂದಾಗಿ ದೇಶಾದ್ಯಂತ ಲಾಕ್‌ಡೌನ್ ಮುಂದುವರೆದಿದೆ. ಸಾವಿರಾರು ಜನರು ಈ ಮಹಾಮಾರಿ ವೈರಸ್ ವಿರುದ್ಧ ಹೋರಾಡುತ್ತಿದ್ದಾರೆ. ಇಡೀ ದೇಶದಲ್ಲಿ ಎಲ್ಲಾ ವ್ಯಾಪಾರ, ವಹಿವಾಟುಗಳು ಸ್ಥಗಿತಗೊಂಡಿವೆ. ರಸ್ತೆಗಳಲ್ಲಿ ವಾಹನಗಳು ಚಲಿಸದ ಕಾರಣ ಪೆಟ್ರೋಲ್, ಡೀಸೆಲ್ ಬಳಕೆ ಕೂಡ ಕಡಿಮೆಯಾಗಿದೆ.

ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ವರದಿಗಳ ಪ್ರಕಾರ, ಏಪ್ರಿಲ್ ಮೊದಲ ವಾರಗಳಲ್ಲಿ, ಭಾರತದ ರಾಜ್ಯಗಳಲ್ಲಿರುವ ಫ್ಯೂಯಲ್ ಸ್ಟೇಷನ್‌ಗಳು 50% ಕಡಿಮೆ ಇಂಧನವನ್ನು ಮಾರಾಟ ಮಾಡಿವೆ. ದೇಶಾದ್ಯಂತ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಭಾರತ್ ಪೆಟ್ರೋಲಿಯಂನ 90% ಮಳಿಗೆಗಳಿವೆ.

ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಪೆಟ್ರೋಲ್, ಡೀಸೆಲ್ ಮಾರಾಟ ಪ್ರಮಾಣದ ಬಗ್ಗೆ ಹೇಳುವುದಾದರೆ, ಏಪ್ರಿಲ್ ತಿಂಗಳ ಮೊದಲ 15 ದಿನಗಳಲ್ಲಿ ಅವುಗಳ ಮಾರಾಟ ಪ್ರಮಾಣವು 61%ನಷ್ಟು ಕುಸಿದಿದೆ. ಜೆಟ್ ಫ್ಯೂಯಲ್ ಮಾರಾಟ ಪ್ರಮಾಣವು 64%ನಷ್ಟು ಕುಸಿತ ಕಂಡಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಭಾರತದಾದ್ಯಂತ ಇಂಧನ ತೈಲ, ಬಿಟುಮೆನ್ ಹಾಗೂ ಎಲ್‌ಪಿಜಿ ಬಳಕೆ ಪ್ರಮಾಣವು ಯಾವಾಗಲೂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಈ ವರ್ಷದ ಏಪ್ರಿಲ್ 15ರವರೆಗೆ ಕಳೆದ ವರ್ಷಕ್ಕಿಂತ 21%ನಷ್ಟು ಹೆಚ್ಚು ಎಲ್‌ಪಿಜಿಯನ್ನು ಮಾರಾಟ ಮಾಡಲಾಗಿದೆ.

ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಡ ಜನರಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ನೀಡುತ್ತಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಕೇಂದ್ರ ಸರ್ಕಾರವು ಲಾಕ್‌ಡೌನ್ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಿದೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಕರೋನಾ ವೈರಸ್ ಸೋಂಕು ಇಲ್ಲದ ಪ್ರದೇಶಗಳಲ್ಲಿ ಏಪ್ರಿಲ್ 20ರ ನಂತರ ಕೆಲವು ಕೈಗಾರಿಕಾ ಘಟಕಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿವೆ. ಈ ಪ್ರದೇಶಗಳನ್ನು ಹಾಟ್‌ಸ್ಪಾಟ್‌ಗಳೆಂದು ಪರಿಗಣಿಸಿಲ್ಲ.

ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಅಂತರರಾಷ್ಟ್ರೀಯ ಇಂಧನ ಸಂಸ್ಥೆಯು (ಐಇಎ) ಭಾರತದಲ್ಲಿನ ಇಂಧನ ಬಳಕೆಯ ಕುರಿತು ವರದಿಯನ್ನು ಸಲ್ಲಿಸಿದೆ. ಈ ವರದಿಯಲ್ಲಿ ಮಾರ್ಚ್‌ ತಿಂಗಳಿನಲ್ಲಿ ಇಂಧನ ಬೇಡಿಕೆಯು 2.4%ನಷ್ಟು ಹೆಚ್ಚಾಗಿದೆ ಎಂದು ಹೇಳಲಾಗಿದ್ದು, 2020ರಲ್ಲಿ ಇಂಧನ ಬಳಕೆಯೂ 5.6%ನಷ್ಟು ಕುಸಿತ ಕಾಣಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

Most Read Articles

Kannada
English summary
Fuel demand in India reduces 50 percent in April due to Lockdown. Read in Kannada.
Story first published: Monday, April 20, 2020, 15:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X